ಬಂಗಾರಪ್ರಿಯರಿಗೆ ಆಘಾತ; ಶೇ. 50ರಷ್ಟು ವ್ಯಾಪಾರ ಕುಸಿತ

Team Udayavani, Jan 22, 2019, 12:30 AM IST

gold.jpg

ಮಂಗಳೂರು: ಕಳೆದೊಂದು ತಿಂಗಳಿಂದ ಬಂಗಾರ ಪ್ರಿಯರಿಗೆ ಮೇಲಿಂದ ಮೇಲೆ ಆಘಾತ ಉಂಟಾಗುತ್ತಿದೆ. ಕಾರಣ ದಿನೇದಿನೇ ದಾಖಲೆ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆ. ಗ್ರಾಂವೊಂದಕ್ಕೆ 3 ಸಾವಿರ ರೂ. ಗಡಿ ದಾಟಿರುವುದು ಚಿನ್ನಪ್ರಿಯರ ನಿದ್ದೆಗೆಡಿಸಿದ್ದರೆ, ಖರೀದಿಗಾರರಿಲ್ಲದೆ ಶೇ. 50ರಷ್ಟು ವ್ಯಾಪಾರ ಕುಸಿತ ಕಂಡು ವ್ಯಾಪಾರಿಗಳೂ ಕಂಗಾಲಾಗಿದ್ದಾರೆ.

ಜಾಗತಿಕ ಮಟ್ಟದಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗಿರುವುದು ಹಾಗೂ ರೂಪಾಯಿ ಸಹಿತ ವಿವಿಧ ದೇಶಗಳ ಕರೆನ್ಸಿ ಮೌಲ್ಯ ಕುಸಿತ ಚಿನ್ನದ ಬೆಲೆ ಏರಿಕೆಯಾಗಲು ಕಾರಣ. ಅಲ್ಲದೆ ಆಮದು ಮತ್ತು ರಫ್ತಿನಲ್ಲಿ ಅಸಮತೋಲನ ಉಂಟಾಗಿ ರೂಪಾಯಿ ಮೌಲ್ಯ ಕಡಿಮೆ ಯಾಗಿರುವುದೂ ಚಿನ್ನದ ಬೆಲೆಯಲ್ಲಿ ದಾಖಲೆ ಏರಿಕೆಗೆ ಕಾರಣ ಎಂದು ಸ್ವರ್ಣ ವ್ಯಾಪಾರಿಗಳು ಹಾಗೂ ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಡಿಸೆಂಬರ್‌ನಲ್ಲಿ ಗ್ರಾಂಗೆ ಸುಮಾರು 2985 ರೂ. ವರೆಗೆ ಇದ್ದ 22 ಕ್ಯಾರೆಟ್‌ ಚಿನ್ನದ ಬೆಲೆ, ಜನವರಿ 3ರಂದು 3,005 ರೂ.ಗೆ ತಲುಪಿತ್ತು. ಬಳಿಕ ಕೆಲವೇ ರೂ. ಕುಸಿತ ಕಂಡಿದ್ದ ಬೆಲೆ ಜ. 10ರ ವೇಳೆಗೆ 3,030 ರೂ.ಗಳಾಗಿತ್ತು. ಆನಂತರ ನಿರಂತರವಾಗಿ ಬೆಲೆ ಏರುತ್ತಲೇ ಹೋಗಿದೆ. ಸದ್ಯ 24 ಕ್ಯಾರೆಟ್‌ ಚಿನ್ನದ ದರ 3,339 ರೂ.ಗಳಾಗಿವೆ ಎಂದು ಜಿಲ್ಲಾ ಸ್ವರ್ಣ ವ್ಯಾಪಾರಿಗಳ ಸಂಘದಿಂದ ಮಾಹಿತಿ ಲಭಿಸಿದೆ.
 
ಆಮದು ಹೆಚ್ಚಳ ಕಾರಣ?
ಪ್ರಮುಖವಾಗಿ ಭಾರತವು ಸ್ವಿಟ್ಜರ್‌ಲ್ಯಾಂಡ್‌, ಕೊಲ್ಲಿ ಹಾಗೂ ದಕ್ಷಿಣಆಫ್ರಿಕಾದಿಂದ ಚಿನ್ನ ಆಮದು ಮಾಡಿಕೊಳ್ಳುತ್ತವೆ. ದೇಶೀಯ ಮಟ್ಟದಲ್ಲಿ ಉತ್ಪಾದನೆ ಕಡಿಮೆಯಾಗಿ ಆಮದು ಮಾಡಿ ಕೊಳ್ಳುವುದು ಹೆಚ್ಚಿರುವುದು ಮತ್ತು ರಫ್ತಿನ ಪ್ರಮಾಣ ಇಳಿಮುಖ ವಾಗುವುದರಿಂದ ಆಮದು-ರಫ್ತಿನ ನಡುವೆ ಅಸಮತೋಲನ ಏರ್ಪಟ್ಟು ರೂಪಾಯಿ ಮೌಲ್ಯ ಕುಸಿತಗೊಳ್ಳುತ್ತದೆ. ಇದು ಮತ್ತು ಚಿನ್ನಕ್ಕೆ ಬೇಡಿಕೆ ಹೆಚ್ಚಿರುವುದೂ ಬಂಗಾರ ದರ ಏರಿಕೆಗೆ ಕಾರಣ ಎನ್ನುತ್ತಾರೆ ಆರ್ಥಿಕ ಸಲಹೆಗಾರ ಸಿಎ ಎಸ್‌.ಎಸ್‌. ನಾಯಕ್‌. ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಉಂಟಾಗುತ್ತಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಮಾಡುವುದೇ ಸುರಕ್ಷಿತ ಎಂಬ ಭಾವನೆಯಲ್ಲಿ ಚಿನ್ನ ಖರೀದಿಗೆ ಮುಗಿಬಿದ್ದಿರುವುದೂ ಚಿನ್ನದ ದರ ಹಠಾತ್‌ ಏರಿಕೆಯಾಗಲು ಕಾರಣವಾಗಿರಬಹುದು ಎಂದು ಅವರು ವಿಶ್ಲೇಷಿಸುತ್ತಾರೆ.

ವಿವಿಧ ದೇಶಗಳ ಕರೆನ್ಸಿ ಮೌಲ್ಯ ಕುಸಿದಿರುವುದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಕಳೆದ ಎರಡು ತಿಂಗಳಿಂದ ಸುಮಾರು 200 ರೂ.ಗಳಿಗೂ ಹೆಚ್ಚು ಬೆಲೆ ಏರಿಕೆಯಾಗಿದೆ. ಪುಷ್ಯ ಮಾಸದ ಹಿನ್ನೆಲೆಯಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಇಳಿಮುಖ ವಾಗಿರುವುದರಿಂದ ವ್ಯಾಪಾರದ ಮೇಲೆಯೂ ಪರಿಣಾಮ ಬೀರಿದೆ.
– ಪ್ರಶಾಂತ್‌ ಶೇಟ್‌, ಕಾರ್ಯದರ್ಶಿ ,ದ.ಕ.ಜಿಲ್ಲಾ  ಸ್ವರ್ಣ ವ್ಯಾಪಾರಿಗಳ ಸಂಘ

– ಧನ್ಯಾ ಬಾಳೆಕಜೆ
 
ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.