ಕಾಡಾನೆ ದಾಳಿ: ಬಹಿರ್ದೆಸೆಗೆ ತೆರಳಿದ್ದ ವೃದ್ಧೆ ಬಲಿ
Team Udayavani, Jan 21, 2019, 1:53 AM IST
ಸಂತೆಮರಹಳ್ಳಿ (ಚಾಮರಾಜನಗರ): ಸಮೀಪದ ಮಹಂತಾಳಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಗೆ ಸಿಲುಕಿ ವೃದ್ಧೆಯೊಬ್ಬಳು ಮೃತಪಟ್ಟಿದ್ದಾಳೆ. ಗ್ರಾಮದ ಶಿವಮ್ಮ (70) ಮೃತ ದುರ್ದೈವಿ. ಇವರು ಗ್ರಾಮದ ಹೊರವಲಯದಲ್ಲಿ ಬಹಿರ್ದೆಸೆಗೆ ತೆರಳಿದ್ದರು. ಆ ಸಮಯದಲ್ಲಿ ಅಲ್ಲೇ ಬೀಡು ಬಿಟ್ಟಿದ್ದ ಕಾಡಾನೆಗಳು ಏಕಾಏಕಿ ದಾಳಿ ನಡೆಸಿ, ತುಳಿದು ಸಾಯಿಸಿದವು. ಇದರಿಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟಿಸಿದರು.
ಗ್ರಾಮಕ್ಕೆ ಸಂಸದ ಆರ್ .ಧ್ರುವನಾರಾಯಣ ಭೇಟಿ ನೀಡಿ, ಮೃತ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡಿದರು. ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಗಳ ನಿಧಿಯಿಂದಲೂ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಭೇಟಿ ನೀಡಿ, ಅರಣ್ಯ ಇಲಾಖೆ ವತಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಹಾಗೂ ಇವರ ಕುಟುಂಬದ ಒಬ್ಬರಿಗೆ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆ ನೀಡಲಾಗುವುದು. ಆನೆಗಳನ್ನು ಕಾಡಿಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್