ಜ್ಞಾನ, ಅನ್ನ ನೀಡಿದ ದೇವರಿಗೆ ಎಲ್ಲೆಡೆ ಕಂಬನಿ


Team Udayavani, Jan 23, 2019, 7:08 AM IST

m2-jnana.jpg

ಮೈಸೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಅಕ್ಷರಶಃ ಸ್ತಬ್ಧವಾಗಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿತ್ತು. ನಗರದ ಹಲವೆಡೆ ವಿವಿಧ ಸಂಘಟನೆಗಳಿಂದ ಶ್ರೀಗಳಿಗೆ ಗೌರವ ನಮನ ಸಲ್ಲಿಸಲಾಯಿತು. 

ಕಾಯಕಯೋಗಿ ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಹಾಗೂ ಮಂಗಳವಾರ ರಜೆ ಘೋಷಿಸಿದ್ದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಮನೆಯಿಂದ ಹೊರಬರುವ ಪ್ರಯತ್ನ ಮಾಡಲಿಲ್ಲ.

ನಗರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀಗಳ ಅಂತಿಮ ದರ್ಶನಕ್ಕಾಗಿ ತುಮಕೂರಿಗೆ ತೆರಳಿದ್ದರೆ, ಬಹಳಷ್ಟು ಮಂದಿ ಮನೆಯಲ್ಲೇ ಟೀವಿ ಹಾಕಿಕೊಂಡು ಶ್ರೀಗಳ ಅಂತಿಮ ದರ್ಶನ, ಅಂತ್ಯಸಂಸ್ಕಾರದ ವಿಧಿ ವಿಧಾನಗಳನ್ನು ಭಕ್ತಿಭಾವದಿಂದ ಕಣ್ತುಂಬಿಕೊಳ್ಳುತ್ತಿದ್ದರಿಂದ ನಗರದ ಪ್ರಮುಖ ರಸ್ತೆಗಳೆಲ್ಲೆಲ್ಲಾ ಜನ ಸಂಚಾರ ವಿರಳವಾಗಿ ಬಿಕೋ ಎನ್ನುತ್ತಿದ್ದವು.

ಅಲ್ಲಲ್ಲಿ ಶಿವಕುಮಾರ ಮಹಾಸ್ವಾಮಿಗಳ ಫ್ಲೆಕ್ಸ್‌ಗಳನ್ನು ಹಾಕಿ, ಹೂವಿನ ಹಾರಹಾಕಿ, ವಿಭೂತಿ ಬಳಿದು, ಜ್ಯೋತಿ ಬೆಳಗಿ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಚಾಮರಾಜ ಜೋಡಿ ರಸ್ತೆಯಲ್ಲಿನ ಜೆಎಸ್‌ಎಸ್‌ ಮಹಾವಿದ್ಯಾಪೀಠದ ಮುಂಭಾಗದ ವೃತ್ತದಲ್ಲಿರುವ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ಬಳಿ ಶಿವಕುಮಾರ ಮಹಾಸ್ವಾಮಿಗಳ ಫ್ಲೆಕ್ಸ್‌ ಅಳವಡಿಸಿ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳವರು ಪುಷ್ಪ ನಮನ, ನುಡಿ ನಮನ ಸಲ್ಲಿಸಿದರು.

ರಾಷ್ಟ್ರಧ್ವಜ ಅರ್ಧಕ್ಕೆ: ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯತ್‌ ಕಚೇರಿ, ಪ್ರಾದೇಶಿಕ ಆಯುಕ್ತರ ಕಚೇರಿ ಸೇರಿದಂತೆ ನಗರದ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಶ್ರೀಗಳಿಗೆ ಗೌರವ ಸಲ್ಲಿಸಲಾಯಿತು.

ಕುಂಚ ನಮನ: ಕೆ.ಆರ್‌.ವೃತ್ತದಲ್ಲಿ ಮೈಸೂರು ಜಿಲ್ಲಾ ಕುಂಚ ಕಲಾವಿದರ ಸಂಘದಿಂದ ಡಾ.ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರ ರಚಿಸಿ, ದಾಸೋಹ ತಿಲಕ, ವಿದ್ಯಾದಾನ ತಿಲಕ, ದಾಸೋಹ ಗುರುವಿಗೆ ನಮನ ಎಂಬ ಶೀರ್ಷಿಕೆ ನೀಡಲಾಗಿತ್ತು. ಮೈಸೂರು ಕನ್ನಡ ವೇದಿಕೆವತಿಯಿಂದ ಅಗ್ರಹಾರದ ತ್ಯಾಗರಾಜ ರಸ್ತೆ ಬಳಿ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಬ್ಬು ಬೆಳೆಗಾರರ ಸಂಘ: ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದ ಗನ್‌ಹೌಸ್‌ ಬಳಿಯ ಕುವೆಂಪು ಉದ್ಯಾನದಲ್ಲಿ ಶಿವಕುಮಾರ ಸ್ವಾಮೀಜಿಗಳ ಗೌರವಾರ್ಥ ಶ್ರದ್ಧಾಂಜಲಿ ಸಭೆನಡೆಸಿ, ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ಶಿವಕುಮಾರ ಮಹಾಸ್ವಾಮಿಗಳಿಗೆ ಕೇಂದ್ರ ಸರ್ಕಾರ ಮರಣೋತ್ತರ ಭಾರತ ರತ್ನ ನೀಡಬೇಕು. ಜೊತೆಗೆ ದಾಸೋಹಕ್ಕೆ ಹೆಸರಾಗಿದ್ದ ಶ್ರೀಗಳ ಹೆಸರನ್ನು ಬಿಸಿಯೂಟ ಯೋಜನೆಗೆ ನಾಮಕರಣ ಮಾಡಬೇಕು ಎಂದು ಆಗ್ರಹಿಸಿದರು.

ಯುಗಾಂತ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆವತಿಯಿಂದ ಬಸವಣ್ಣನವರ ಪ್ರತಿಮೆ ಬಳಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ವಿಚಾರವಾದಿ ಪ್ರೊ.ಕೆ.ಎಸ್‌.ಭಗವಾನ್‌, 12ನೇ ಶತಮಾನದ ಬಸವಣ್ಣನವರ ತತ್ವ-ಸಿದ್ಧಾಂತವನ್ನು ಪಾಲಿಸಿದ ಮಹಾನ್‌ ವ್ಯಕ್ತಿ ಸಿದ್ಧಗಂಗಾ ಶ್ರೀಗಳು.

ಶಿವಕುಮಾರ ಮಹಾಸ್ವಾಮಿಗಳ 89 ವರ್ಷಗಳ ಪರಿಶ್ರಮದಿಂದ ಸಿದ್ಧಗಂಗಾ ಮಠ ಇಂದು ಪ್ರಪಂಚದಲ್ಲೇ ಪ್ರಸಿದ್ಧಿಯಾಗಿದೆ. ಕಾಯಕ ಯೋಗಿ ಶಿವಕುಮಾರಸ್ವಾಮಿಗಳ ನಿಧನದಿಂದ ಯುಗಾಂತ್ಯವಾದಂತಾಗಿದೆ. ಆದರೆ, ಅವರು ಜೀವಿಸಿದ್ದ ಈ ಶತಮಾನ ಮುಂದಿನ ಶತಮಾನಕ್ಕೆ ನಾಂದಿಯಾಗಿದೆ ಎಂದರು.

ಕಸಾಪ: ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್‌.ಶಿವರಾಂ, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಮಾಜಿ ಅಧ್ಯಕ್ಷ ಚಂದ್ರಶೇಖರ್‌, ಕನ್ನಡ ಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ ಮೊದಲಾದವರು ಈ ವೇಳೆ ಪುಷ್ಪ ನಮನ ಸಲ್ಲಿಸಿದರು.

ಬಸವ ಸಮಿತಿ: ಮೈಸೂರಿನ ರಾಮಕೃಷ್ಣ ನಗರದ ಬಸವ ಸೇವಾ ಸಮಿತಿವತಿಯಿಂದ ರಾಮಕೃಷ್ಣ ಪರಮಹಂಸರ ಪ್ರತಿಮೆ ಮುಂಭಾಗ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವಿರಿಸಿ ಪುಷ್ಪ ನಮನ ಸಲ್ಲಿಸಲಾಯಿತು. ವಿಧಾನಪರಿಷತ್‌ ಮಾಜಿ ಸದಸ್ಯ ಡಿ.ಮಾದೇಗೌಡ ಸೇರಿದಂತೆ ಹಲವರು ಹಾಜರಿದ್ದರು.

ಜೆಎಸ್‌ಎಸ್‌: ಜೆಎಸ್‌ಎಸ್‌ ಮಹಾ ವಿದ್ಯಾಪೀಠದಲ್ಲಿ ಶಿವಕುಮಾರಸ್ವಾಮೀಜಿಗಳಿಗೆ ಗೌರವ ನಮನ ಸಲ್ಲಿಸಲಾಯಿತು. ವಿದ್ಯಾಪೀಠದ ಮುಖ್ಯ ಕಾರ್ಯನಿರ್ವಾಹಕ ಡಾ.ಸಿ.ಜಿ.ಬೆಟಸೂರ್‌ ಮಠ, ಚಿದ್ರೆ ಶಂಕರಯ್ಯಸ್ವಾಮಿ ಮೊದಲಾದವರು ಪುಷ್ಪ ನಮನ ಸಲ್ಲಿಸಿದರು. ಮಹಾಜನ ಪ್ರಥಮ ದರ್ಜೆ ಕಾಲೇಜು, ಶ್ರೀನಟರಾಜ ಕಾಲೇಜುಗಳಲ್ಲಿ ಲಿಂಗೈಕ್ಯ ಶಿವಕುಮಾರ ಮಹಾಸ್ವಾಮಿಗಳ ಸ್ಮರಣೆ ಮಾಡಲಾಯಿತು.

ಪೊಲೀಸರಿಂದ ಶ್ರದ್ಧಾಂಜಲಿ: ನಗರದ ಲಕ್ಷ್ಮೀಪುರಂ ಪೊಲೀಸ್‌ ಠಾಣೆ ಮುಂಭಾಗ ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರವಿರಿಸಿ ಪುಷ್ಪ ನಮನದ ಮೂಲಕ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. 

ಭಜನೆ: ಅಗ್ರಹಾರದ 101 ಗಣಪತಿ ದೇವಸ್ಥಾನದ ಮುಂಭಾಗ ಶಿವಕುಮಾರ ಸ್ವಾಮಿಗಳ ಭಕ್ತವೃಂದದಿಂದ ಲಿಂಗೈಕ್ಯ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಸ್ಕೃತ ಪಾಠಶಾಲಾ ವೃತ್ತದಲ್ಲಿ ಭಕ್ತರು ಭಜನೆಯ ಮೂಲಕ ಗೌರವ ನಮನ ಸಲ್ಲಿಸಿದರು. 

ಭೈರವ ಮಠ: ಶಿವಕುಮಾರ ಸ್ವಾಮೀಜಿಗಳ ನಿಧನದ ಹಿನ್ನೆಲೆಯಲ್ಲಿ ಭಾರತೀಯ ಗೋಪರಿವಾರ ಹಮ್ಮಿಕೊಂಡಿದ್ದ ಅಭಯಾಕ್ಷರ ಮೆರವಣಿಗೆಯನ್ನು ರದ್ದುಪಡಿಸಿ, ದೇವರಾಜ ಮೊಹಲ್ಲಾದಲ್ಲಿನ ತ್ರಿಪುರ ಭೈರವಿ ಮಠದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿಗಳಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆ ಮೂಲಕ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಲಾಯಿತು.

ತ್ರಿಪುರ ಭೈರವಿ ಮಠದ ಅನುಜ್‌ ಸಾರಸ್ವತ್‌, ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್‌ ಗೌಡ, ಮೈಸೂರು ರಕ್ಷಣಾ ವೇದಿಕೆ ಅಧ್ಯಕ್ಷ ಮೈ.ಕಾ.ಪ್ರೇಮಕುಮಾರ್‌, ಭಾರತೀಯ ಗೋಪರಿವಾರದ ಜಿಲ್ಲಾ ಕಾರ್ಯದರ್ಶಿ ರಾಕೇಶ್‌ ಭಟ್‌, ಶ್ರೀರಾಮಸೇನೆ ನಗರಾಧ್ಯಕ್ಷ ಸಂಜಯ್‌ ಮೊದಲಾದವರು ಹಾಜರಿದ್ದರು.

ಐಕ್ಯಸ್ಥಳ ಸಂಗಮ ಕ್ಷೇತ್ರ: ನಂಜನಗೂಡು ತಾಲೂಕಿನ ಸದ್ಗುರು ಮಹದೇವ ತಾತನವರ ಐಕ್ಯಸ್ಥಳ ಸಂಗಮ ಕ್ಷೇತ್ರದಲ್ಲಿ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸದ್ಗುರು ಮಹದೇವ ತಾತ ಭಕ್ತ ಮಂಡಲಿಯ ಅಧ್ಯಕ್ಷ ಮರಿಸ್ವಾಮಪ್ಪ, ಪ್ರಧಾನ ಕಾರ್ಯದರ್ಶಿ ಕೆಂಡಗಣ್ಣಪ್ಪ, ಸಂಘಟನಾ ಕಾರ್ಯದರ್ಶಿ ಗೌಡಿಕೆ ರಾಜಪ್ಪ ಮೊದಲಾದವರು ಹಾಜರಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.