ತಿರುಮಕೂಡಲುವಿನಲ್ಲಿ ಕುಂಭಮೇಳಕ್ಕೆ ಸಿದ್ಧತೆ

Team Udayavani, Jan 24, 2019, 12:47 AM IST

999.jpg

ಬೆಂಗಳೂರು: ದಕ್ಷಿಣ ಗಂಗಾ ಖ್ಯಾತಿಯ ಕಾವೇರಿ ನದಿಯ ತ್ರಿವೇಣಿ ಸಂಗಮ ಮೈಸೂರು ಜಿಲ್ಲೆಯ ಶ್ರೀ ಕ್ಷೇತ್ರ ತಿರುಮಕೂಡಲುವಿನಲ್ಲಿ ಫೆ.17ರಿಂದ 19ರವರೆಗೆ ’11ನೇ ಕುಂಭಮೇಳ’ ನಡೆಯಲಿದ್ದು, ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ, ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಆರ್ಥಿಕ ನೆರವು ನೀಡಲು ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಕುಂಭಮೇಳಕ್ಕೆ ಸಂಬಂಧಪಟ್ಟಂತೆ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಕೈಲಾಸ ಆಶ್ರಮದ ಜಯೇಂದ್ರಪುರಿ ಸ್ವಾಮೀಜಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವು ಸಚಿವರು, ಮಂಡ್ಯ, ಮೈಸೂರು ಜಿಲ್ಲೆಯ ಹಲವು ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಗರದ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಅನಾನುಕೂಲವಾಗಲಿದೆ ಎಂಬ ಕಾರಣಕ್ಕೆ 1989ರಿಂದ ತಿ.ನರಸೀಪುರದಲ್ಲೇ ಪ್ರತಿ ಮೂರು ವರ್ಷಕ್ಕೊಮ್ಮೆ ಕುಂಭ ಮೇಳ ನಡೆಯುತ್ತಾ ಬಂದಿದೆ. ಈ ಬಾರಿಯ ಕುಂಭಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಅಗತ್ಯ ಸಿದ್ಧತೆಯನ್ನು ಅಚ್ಚುಕಟ್ಟಾಗಿ ಕಲ್ಪಿಸಬೇಕು. ಭಕ್ತರಿಗೆ ಅನಾನುಕೂಲವಾಗದಂತೆ ಕ್ರಮ ವಹಿಸಬೇಕು. ಕುಂಭಮೇಳಕ್ಕೆ ಪೂರ್ವಭಾವಿಯಾಗಿ ತಾತ್ಕಾಲಿಕ ಕಾಮಗಾರಿಗಳಿಗೆ ಸೀಮಿತಗೊಳಿಸದೆ ಕಾಯಂ ಸೌಲಭ್ಯ ಕಲ್ಪಿಸುವತ್ತ ಗಮನ ಹರಿಸಬೇಕು. ಹಾಗೆಯೇ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದಲೂ ಸಮಗ್ರ ನೀಲನಕ್ಷೆ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಆರ್ಥಿಕ ಸ್ಥಿತಿ ಸುಭದ್ರ: ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದು, ಸರ್ಕಾರದಲ್ಲಿ ಹಣವಿಲ್ಲ ಎಂಬ ಮಾತುಗಳಿದ್ದು, ಇದಕ್ಕೆ ಕಿವಿಗೊಡಬೇಡಿ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ. ಹಣಕಾಸಿನ ಬಗ್ಗೆ ಚಿಂತೆ ಮಾಡಬೇಡಿ. ಕುಂಭಮೇಳಕ್ಕೆ ಬರುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಮೂಲ ಸೌಕರ್ಯ ಸೇರಿದಂತೆ ಇತರ ಸೌಲಭ್ಯಕ್ಕಾಗಿ 4,200 ಕೋಟಿ ರೂ.ವೆಚ್ಚ ಮಾಡಿದೆ. ಇಬ್ಬರು ಅಧಿಕಾರಿಗಳು ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಭಕ್ತರಿಗೆ ಕಲ್ಪಿಸಿರುವ ವ್ಯವಸ್ಥೆ ಬಗ್ಗೆ ನೋಡಿಕೊಂಡು ಬರಲಿ. ಆಂಧ್ರ ಪ್ರದೇಶ, ತಮಿಳುನಾಡು ಸೇರಿದಂತೆ ನಾನಾ ರಾಜ್ಯಗಳಿಂದ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಎಲ್ಲ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಕೈಲಾಸ ಆಶ್ರಮದ ಜಯೇಂದ್ರಪುರಿ ಸ್ವಾಮೀಜಿ, ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌, ಸಿ.ಎಸ್‌.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಂಸದ ಎಲ್‌.ಆರ್‌.ಶಿವರಾಮೇಗೌಡ, ಶಾಸಕರಾದ ಎಚ್.ವಿಶ್ವನಾಥ್‌, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಶಾಸಕರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.