ಒಂದೂವರೆ ತಿಂಗಳಲ್ಲಿ ಸಿದ್ಧವಾಗಲಿದೆ ಪುರಭವನ!


Team Udayavani, Jan 24, 2019, 5:27 AM IST

24-january-5.jpg

ಪುತ್ತೂರು: ನವೀಕರಣ ಗೊಳ್ಳುತ್ತಿರುವ ಪುತ್ತೂರು ಪುರಭವನ ಮುಂದಿನ ಒಂದೂವರೆ ತಿಂಗಳ ಒಳಗಾಗಿ ಲೋಕಾರ್ಪಣೆಗೊಳ್ಳಲಿದೆ.

ಇಪ್ಪತ್ತೈದು ವರ್ಷಗಳ ಹಿಂದೆ ಈ ಪುರಭವನವನ್ನು ನಿರ್ಮಿಸಲಾಗಿತ್ತು. ಸಾಮಾಜಿಕ ಧುರೀಣರು, ಸಂಘ – ಸಂಸ್ಥೆಗಳ ಸಹಕಾರ ಪಡೆದು ಕೊಂಡು ಪುರಭವನವನ್ನು ನಿರ್ಮಿಸಲಾಗಿತ್ತು. ಇತ್ತೀಚೆಗೆ ಪುತ್ತೂರು ಪುರಭವನ ಕಳಪೆಯಾಗಿ ಕಾಣುತ್ತಿದ್ದು, ನವೀಕರಣ ಮಾಡುವ ಅನಿವಾರ್ಯತೆ ಎದುರಾ ಗಿತ್ತು. ಈ ಹಿನ್ನೆಲೆಯಲ್ಲಿ 50 ಲಕ್ಷ ರೂ. ಅನುದಾನ ಬಳಸಿಕೊಂಡು ಕಾಮ ಗಾರಿ ಆರಂಭ ಮಾಡಲಾಗಿತ್ತು. ಮುಂದಿನ ಹಂತದಲ್ಲಿ ಈ ಅನುದಾನ ಸಾಕಾಗದು ಎಂದು ನಗರಸಭೆ ನಿಧಿಯಿಂದ ಅನುದಾನ ಇಡಲಾಗಿದೆ. ಒಟ್ಟು ಕಾಮಗಾರಿಗೆ 75 ಲಕ್ಷ ರೂ. ವೆಚ್ಚ ಆಗಬಹುದು ಎಂದು ಪೌರಾಯುಕ್ತೆ ರೂಪಾ ಶೆಟ್ಟಿ ತಿಳಿಸಿದ್ದಾರೆ.

ಜಯಂತಿ ಬಲ್ನಾಡ್‌ ಅಧ್ಯಕ್ಷತೆಯ ಆಡಳಿತ ಅವಧಿಯಲ್ಲಿ ಪುರಭವನದ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಪ್ರಸ್ತುತ ಪುರಭವನದಲ್ಲಿ ಆಸನ ವ್ಯವಸ್ಥೆ ಅಳವಡಿಸುವ ಕೆಲಸ ಭರದಿಂದ ಸಾಗುತ್ತಿದ್ದು, ಪೈಂಟಿಂಗ್‌ ಕೆಲಸವೂ ಪ್ರಗತಿಯಲ್ಲಿದೆ. ವೇದಿಕೆ ವಿನ್ಯಾಸ ಮತ್ತು ಸಭಾಂಗಣದ ಒಳಗಿನ ಗೋಡೆಗಳಿಗೆ ವಾಲ್‌ ಗ್ಲೆ„ಡಿಂಗ್‌ ಕೆಲಸ ಇನ್ನಷ್ಟೇ ನಡೆಯಬೇಕಿದೆ.

ಇದೀಗ ಇಡೀ ಕಟ್ಟಡಕ್ಕೆ ಬಣ್ಣ ಬಳಿಯಲಾಗಿದ್ದು, ಕಿಟಕಿ, ಬಾಗಿಲು ಬದಲಾಯಿಸಲಾಗಿದೆ. ಒಳಾಂಗಣ ವಿನ್ಯಾಸ ಪೂರ್ತಿ ಬದಲಾಯಿ ಸಲಾಗಿದೆ. ವೇದಿಕೆ ವಿನ್ಯಾಸ ಸುಂದರ ಗೊಳಿಸ ಲಾಗುತ್ತಿದೆ. ಇನ್ನೂ ಒಂದು ತಿಂಗಳ ಕೆಲಸ ಬಾಕಿ ಇದೆ. ಮಾರ್ಚ್‌ ತಿಂಗಳಲ್ಲಿ ಸಿದ್ಧಗೊಳ್ಳುವ ನಿರೀಕ್ಷೆ ಇದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದ ಪುರಭವನ ಕೆಲ ಸಮಯಗಳಿಂದ ಕಾರ್ಯಕ್ರಮಕ್ಕೆ ಸಿಗುತ್ತಿಲ್ಲ. ಆದಷ್ಟು ಶೀಘ್ರ ಪುರಭವನ ಸಾರ್ವಜನಿಕ ಮುಕ್ತವಾದರೆ, ಮತ್ತೆ ಸಾಂಸ್ಕೃತಿಕ ಕಾರ್ಯಕ್ರಮಗಳ ತಾಣವಾಗಲಿದೆ.

ಸಭಾಂಗಣಕ್ಕೆ ಅಳವಡಿಸಲಾದ ಸುಂದರ ಆಸನಗಳೇ ಈಗ ತಲೆ ನೋವಾಗಿ ಪರಿಣಮಿಸಿದೆ. ಸೀಟುಗಳು ಎತ್ತರವಾಗಿದ್ದು, ಸುಖಾಸೀನವಾಗಿವೆ. ಸೀಟು ಎತ್ತರವಾಗಿ ಇರುವುದರಿಂದ ಹಿಂದಿನ ಸಾಲಿನವರಿಗೆ ವೇದಿಕೆ ಅಡ್ಡವಾಗಲಿದೆ. ಅದರಲ್ಲೂ ಮಕ್ಕಳು ಕುಳಿತುಕೊಂಡರೆ, ಏನೇನೂ ಕಾಣದು. ಇದನ್ನು ನಗರಸಭೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಧನಾತ್ಮಕವಾಗಿ ಸ್ಪಂದಿಸಿದ ಪೌರಾಯುಕ್ತೆ ರೂಪಾ ಶೆಟ್ಟಿ ಅವರು ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿದರು. ನಗರಸಭೆ ಸದಸ್ಯ ಜೀವಂಧರ ಜೈನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.