3 ತಿಂಗಳಲ್ಲಿ ಚೈಲ್ಡ್‌ ಲಾಕ್‌ ವ್ಯವಸ್ಥೆ ನಿಷ್ಕ್ರಿಯ: ಹೈಗೆ ಭರವಸೆ


Team Udayavani, Jan 24, 2019, 6:36 AM IST

3tingalali.jpg

ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿನ ಎಲ್ಲ ಟ್ಯಾಕ್ಸಿ ಕ್ಯಾಬ್‌ಗಳಲ್ಲಿನ “ಚೈಲ್ಡ್‌ ಲಾಕ್‌’ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್‌ಗೆ ಭರವಸೆ ನೀಡಿದೆ.

ಚೈಲ್ಡ್‌ ಲಾಕ್‌ ವ್ಯವಸ್ಥೆ ನಿಷ್ಕ್ರಿಯಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀ ರೋಗ ಸೊಸೈಟಿ (ಬಿಎಸ್‌ಒಜಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌.ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಎ.ಎಸ್‌.ಪೊನ್ನಣ್ಣ ಹಾಜರಾಗಿ, ಟ್ಯಾಕ್ಸಿ ಹಾಗೂ ಕ್ಯಾಬ್‌ಗಳಲ್ಲಿ ಚೈಲ್ಡ್‌ ಲಾಕ್‌ ವ್ಯವಸ್ಥೆ ನಿಷ್ಕ್ರಿಯೆಗೊಳಿಸಲು ರಾಜ್ಯ ಸರ್ಕಾರ ತಿದ್ದುಪಡಿಸಿ ನಿಯಮ ರೂಪಿಸಿ ಅಧಿಸೂಚನೆ ಹೊರಡಿಸಿದೆ.

ರಾಜ್ಯದಲ್ಲಿ ಸುಮಾರು 2.5 ಲಕ್ಷ ಟ್ಯಾಕ್ಸಿ ಹಾಗೂ ಕ್ಯಾಬ್‌ಗಳಿವೆ. ಆ ಪೈಕಿ ಈಗಾಗಲೇ 42 ಸಾವಿರ ಕ್ಯಾಬ್‌ಗಳಲ್ಲಿ ಚೈಲ್ಡ್‌ ಲಾಕ್‌ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಉಳಿದ ಎಲ್ಲ ಕ್ಯಾಬ್‌ಗಳಲ್ಲಿ ಚೈಲ್ಡ್‌ ಲಾಕ್‌ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.

ಆ್ಯಪ್‌ ಆಧಾರಿತ ಕ್ಯಾಬ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಚಾಲಕರು ಚೈಲ್ಡ್‌ ಸೇಫ್ಟಿ ಲಾಕ್‌ ಸಿಸ್ಟಮ್‌ ದುರ್ಬಳಕೆ ಮಾಡಿ ದೌರ್ಜನ್ಯ ಎಸಗುತ್ತಿದ್ದಾರೆ. ಹೀಗಾಗಿ ಚೈಲ್ಡ್‌ ಸೇಫ್ಟಿ ಲಾಕ್‌ ಸಿಸ್ಟಮ್‌ ನಿಷ್ಕ್ರಿಯಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಹಾಗೆಯೇ, ಕ್ಯಾಬ್‌ಗಳಲ್ಲಿ ಪ್ರಯಾಣಿಕರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.