ಜೋಳ-ಕಡಲೆ ಇಳುವರಿ ಕುಸಿತ

Team Udayavani, Jan 25, 2019, 10:43 AM IST

ray-3.jpg

ಮುದಗಲ್ಲ: ಹಿಂಗಾರಿ ಮಳೆ ಕೈಕೊಟ್ಟ ಪರಿಣಾಮ ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಜೋಳ, ಕಡಲೆ, ಗೋದಿ, ಸೂರ್ಯಕಾಂತಿ ಕುಸುಬೆ ಬೆಳೆಗಳು ತೇವಾಂಶ ಕೊರತೆ ಬಾಡಿದ್ದು, ಇಳುವರಿಯಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ.

ಮಳೆ ಕೊರತೆಯಿಂದ ಮುಂಗಾರು ಬೆಳೆ ಸಂಪೂರ್ಣ ಹಾಳಾಗಿದೆ. ಆದರೆ ಹಿಂಗಾರಿಗೆ ವಾಯುಭಾರ ಕುಸಿತ ಅಥವಾ ಯಾವುದಾದರೂು ಚಂಡಮಾರುತ ಬೀಸಿದರೆ ಸಾಕು ಮಳೆ ಸುರಿದು ಯರಿಭೂಮಿ ತೇವಾಂಶ ಹೆಚ್ಚಾಗಿ ಬೆಳೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿ ಈ ಭಾಗದ ರೈತರು ಜೋಳ, ಕಡಲೆ, ಗೋದಿ, ಸೂರ್ಯಕಾಂತಿ ಬಿತ್ತಿದ್ದರು. ಆರಂಭದಲ್ಲಿ ಒಂದೆರಡು ಮಳೆಯಾಗಿದ್ದು ಬಿಟ್ಟರೆ ಬಿತ್ತಿದಾಗಿನಿಂದ ಮಳೆ ಕೊರತೆ ಕಾಡಿದೆ. ಪರಿಣಾಮ ಬೆಳೆ ತೆನೆ, ಹೂ, ಕಾಯಿ ಕಟ್ಟುವ ಸಮಯದಲ್ಲಿ ಹೊಲದಲ್ಲಿಯೇ ಬಾಡಿ ನಿಂತಿದೆ. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಸೇರಿದಂತೆ ಬಿತ್ತನೆಗೆ ಮಾಡಿದ ಖರ್ಚು ರೈತರ ಕೈ ಸೇರುವುದು ಕಷ್ಟವಾಗಿದೆ. ಇನ್ನು ಜೋಳದ ಬೆಳೆ ಕೂಡಾ ಸರಿಯಾಗಿ ಬೆಳೆಯದ್ದರಿಂದ ಜಾನುವಾರುಗಳಿಗೆ ಮೇವಿನ ಅಭಾವವೂ ಎದುರಾಗುವ ಲಕ್ಷಣ ಕಾಣುತ್ತಿದ್ದು, ಹೀಗಾಗಿ ರೈತರು ನೀರಾವರಿ ಪ್ರದೇಶದ ಭತ್ತದ ಹುಲ್ಲಿಗೆ ದುಂಬಾಲು ಬಿದ್ದಿದ್ದಾರೆ.

ಬಿತ್ತನೆ ಪ್ರದೇಶ: ಹಿಂಗಾರು ಹಂಗಾಮಿನಲ್ಲಿ 85,792 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಇದರಲ್ಲಿ 26,523 ಹೆಕ್ಟೇರ್‌ ಜೋಳ, 58,886 ಹೆಕ್ಟೇರ್‌ ಕಡಲೆ ಸೇರಿದಂತೆ ಗೋದಿ, ಕುಸಬಿ, ಸೂರ್ಯಕಾಂತಿ ಬಿತ್ತನೆ ಮಾಡಲಾಗಿದೆ. ಹಿಂಗಾರಿನಲ್ಲಿ ವಾಡಿಕೆಯಂತೆ 392.40 ಮಿ.ಮೀ. ಮಳೆ ಆಗಬೇಕಿತ್ತು. ಆದರೆ ಈ ಬಾರಿ 178.7 ಮಿ.ಮೀ. ಮಳೆಯಾಗಿದೆ. ಶೇ.55ರಷ್ಟು ಮಳೆ ಕೊರತೆ ಆಗಿದೆ. ಪರಿಣಾಮ 81,504 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ ಎಂದು ಲಿಂಗಸುಗೂರ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಎಸ್‌.ಎಚ್. ರಕ್ಕಸಗಿ ಪತ್ರಿಕೆಗೆ ತಿಳಿಸಿದ್ದಾರೆ.

ನಷ್ಟದ ವರದಿ: ಕೇವಲ 178.7 ಮಿ.ಮೀ. ಮಳೆ ಆಗಿದ್ದರೂ ಅದು ಕೂಡ ಸರಿಯಾದ ಸಮಯಕ್ಕೆ ಸುರಿದಿಲ್ಲ. ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಜಂಟಿ ಸಮೀಕ್ಷೆಯಲ್ಲಿ ಹಿಂಗಾರಿಗೆ 81,504 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಆಗ್ರಹ: ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಬರ ಆವರಿಸಿದೆ. ಬೆಳೆ ಹಾನಿಗೀಡಾದ ರೈತರಿಗೆ ಬೆಳೆ ಪರಿಹಾರ ನೀಡಬೇಕು. ಜಾನುವಾರುಗಳಿಗೆ ಗೋಶಾಲೆ ತೆರೆದು ಗೋವುಗಳ ರಕ್ಷಣೆಗೆ ಮುಂದಾಗಬೇಕು ಎಂದು ರೈತ ಮುಖಂಡರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.