28 ರಿಂದ ರಾಸುಗಳಿಗೆ ಲಸಿಕೆ

Team Udayavani, Jan 26, 2019, 7:45 AM IST

vaccine.jpg

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜ.28 ರಿಂದ ಫೆ.16ರವರೆಗೂ 15ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗ್ರಾಮಗಳಿಗೆ ಲಸಿಕಾ ಹಾಕಲು ಪಶುಸಂಗೋಪನೆ ಇಲಾಖೆ ಸಿಬ್ಬಂದಿ ಆಗಮಿಸುವ ವೇಳೆ ರೈತರು ಸಹಕಾರ ನೀಡುವುದರ ಮೂಲಕ ಕಾಲುಬಾಯಿ ರೋಗವನ್ನು ನಿಯಂತ್ರಿಸಲು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ಮನವಿ ಮಾಡಿದರು.

ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ರಾಸುಗಳಿಗೆ ಕಾಲುಬಾಯಿ ಜ್ವರ ನಿಯಂತ್ರಣಕ್ಕೆ ಪಶು ಸಂಗೋಪನಾ ಇಲಾಖೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಪಶುಪಾಲನಾ ಇಲಾಖೆ ಮತ್ತು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಸಹಯೋಗ‌ದೊಂದಿಗೆ 15ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಒಟ್ಟು 20 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಒಟ್ಟು 2.21 ಲಕ್ಷ ರಾಸುಗಳಿಗೆ ಲಸಿಕೆ: ಜಿಲ್ಲೆಯಲ್ಲಿ ದನ, ಎಮ್ಮೆ, ಹಂದಿ ಸೇರಿ ಒಟ್ಟು 2,21,671 ಜಾನುವಾರುಗಳಿದ್ದು, ಲಸಿಕೆ ಹಾಕಲು 26 ತಂಡ ರಚಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಜ.28 ರಿಂದ ಲಸಿಕಾ ಕಾರ್ಯಕ್ರಮ ಪ್ರಾರಂಭವಾಗಲಿದೆ.

ಬಾಗೇಪಲ್ಲಿ ತಾಲೂಕಿಗೆ 04 ತಂಡಗಳು ಭೇಟಿ ನೀಡಲಿದ್ದು, ಜ.28 ರಿಂದ ಫೆ.11 ರವರೆಗೆ ಹಾಗೂ ಚಿಕ್ಕಬಳ್ಳಾಪುರಕ್ಕೆ 05 ತಂಡಗಳು ಭೇಟಿ ನೀಡಲಿದ್ದು, ಫೆ.13 ರವರೆಗೆ, ಚಿಂತಾಮಣಿ ತಾಲೂಕಿಗೆ ಒಟ್ಟು 5 ತಂಡ, ಶಿಡ್ಲಘಟ್ಟಕ್ಕೆ 4 ತಂಡ ಭೇಟಿ ನೀಡಲಿದ್ದು, ಫೆ.16 ರವರೆಗೆ ಲಸಿಕೆ ಹಾಕಲಿದ್ದಾರೆ. ಗುಡಿಬಂಡೆ ತಾಲೂಕಿಗೆ 2 ತಂಡ ಭೇಟಿ ನೀಡಲಿದ್ದು, ಫೆ.11 ರವರೆಗೆ ಲಸಿಕೆ ಹಾಕಲಿದ್ದಾರೆ ಎಂದು ತಿಳಿಸಿ ದರು. ಸುದ್ದಿಗೋಷ್ಠಿಯಲ್ಲಿ ಕೋಲಾರ-ಚಿಕ್ಕಬಳ್ಳಾ ಪುರ ಹಾಲು ಒಕ್ಕೂಟದ ವ್ಯವಸ್ಥಾಪಕರು ಸೇರಿದಂತೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

14ನೇ ಸುತ್ತಿನಲ್ಲಿ ಶೇ.94 ರಷ್ಟು ಪ್ರಗತಿ ಸಾಧನೆ

ಪಶುಪಾಲನಾ ಇಲಾಖೆ ಉಪನಿರ್ದೇಶಕ ಮಧುರನಾಥ್‌ರೆಡ್ಡಿ ಮಾತನಾಡಿ, ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ವಾಕ್‌ ಇನ್‌ ಕೂಲರ್‌ನಲ್ಲಿ 1.07 ಲಕ್ಷ ಡೋಸ್‌ ಲಸಿಕೆ ಹಾಗೂ ಚಿಂತಾಮಣಿ ತಾಲೂಕಿನಲ್ಲಿ 1.07 ಲಕ್ಷ ಡೋಸ್‌ ಲಸಿಕೆ ಸೇರಿ ಒಟ್ಟು 2.14 ಲಕ್ಷ ಡೋಸ್‌ ಲಸಿಕೆಯನ್ನು ದಾಸ್ತಾನು ಮಾಡಲಾಗಿದೆ ಎಂದು ತಿಳಿಸಿದರು. ಲಸಿಕಾದಾರರು ಸೇರಿ ಒಟ್ಟು 208 ತಾಂತ್ರಿಕ ಮತ್ತು ಅರೆ ತಾಂತ್ರಿಕ ಸಿಬ್ಬಂದಿಯನ್ನು ತೊಡಗಿಸಲಾಗಿದೆ. 14ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದಲ್ಲಿ 2,07 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇ.94ರಷ್ಟು ಪ್ರಗತಿ ಸಾಧಿಸಲಾಗಿತ್ತು. ಈ ಕಾರ್ಯಕ್ರಮವು ಆಗಸ್ಟ್‌ 2011 ರಿಂದ ಚಾಲ್ತಿಯಲ್ಲಿದ್ದು, ಇದುವರೆಗೆ 14 ಸುತ್ತು ಲಸಿಕಾ ಕಾರ್ಯಕ್ರಮ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.