ಕಾಂಗ್ರೆಸ್‌ನಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ವಾತ್ಸವ್‌


Team Udayavani, Jan 28, 2019, 9:08 AM IST

bell-1.jpg

ಸಿಂಧನೂರು: ಕಾಂಗ್ರೆಸ್‌ ಪಕ್ಷದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ರಾಹುಲ್‌ ಗಾಂಧಿ ಪ್ರಧಾನಿ ಆಗುವುದು ಖಚಿತ ಎಂದು ಯುವ ಕಾಂಗ್ರೆಸ್‌ ರಾಷ್ಟ್ರೀಯ ಮುಖ್ಯಸ್ಥ ವಾತ್ಸವ್‌ ಹೇಳಿದರು

ನಗರದ ಸಂಗಮ ಪ್ಯಾಲೆಸ್‌ನಲ್ಲಿ ರವಿವಾರ ಏರ್ಪಡಿಸಿದ್ದ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಯುವ ಕಾಂಗ್ರೆಸ್‌ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದೇಶದ ಜನತೆ ಬದಲಾವಣೆ ಬಯಸಿದ್ದಾರೆ. ಯುವಶಕ್ತಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತದಾರರು ಆಲೋಚನೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ‌ದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲಿದ್ದಾರೆ. ಪ್ರಧಾನಿ ಮೋದಿ ಅವರ ಸುಳ್ಳಿನ ಮಾತುಗಳಿಂದ, ಭರವಸೆಗಳಿಂದ ಜನರಿಗೆ ಭ್ರಮನಿರಸನವಾಗಿದೆ. ಹಾಗಾಗಿ ಈ ಬಾರಿ ಮತದಾರರು ಕಾಂಗ್ರೆಸ್‌ಗೆ ಬೆಂಬಲಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಯುವ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಬೇಕು. ಈ ಬಾರಿ ರಾಜ್ಯದಲ್ಲಿ ಯುವಕರಿಗೆ ಬಹಳ ಅವಕಾಶವಿದೆ ಎಂದರು.

ಎಐಸಿಸಿ ಸಲಹೆಗಾರ ಚೇತನ ರೆಡ್ಡಿ ಮಾತನಾಡಿ, ದೇಶದ ಯುವಶಕ್ತಿ ಮತ್ತಷ್ಟು ಸಂಘಟನೆಗೊಳಿಸಲು ರಾಹುಲ್‌ ಗಾಂಧಿ ಅವರ ನಿರ್ದೇಶನದಂತೆ ಪ್ರಚಾರ ಮಾಡುತ್ತಿದ್ದೇವೆ. ಈಗಾಗಲೇ ಅನೇಕರು ಬಿಜೆಪಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 21 ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಬಲವರ್ಧನೆಗೊಳ್ಳುತ್ತಿದೆ. ಪ್ರತಿಯೊಬ್ಬರು ಪಕ್ಷ‌ ಸಂಘಟನೆಯಲ್ಲಿ ತೊಡಗಬೇಕು ಎಂದರು.

ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ‌ ಬಸವನಗೌಡ ಬಾದರ್ಲಿ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಕೈಗೊಂಡ ಕೆಲಸಗಳು ಜನಪ್ರಿಯವಾಗಿವೆ. ಅವನ್ನು ಜನತೆ ಮರೆತಿಲ್ಲ. ಈಗಿನ ದೋಸ್ತಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಕೈಹಿಡಿಯಬೇಕೆಂದು ಹೇಳಿದರು.

ಯುವ ಕಾಂಗ್ರೆಸ್‌ ತರಬೇತಿ ಮುಖ್ಯಸ್ಥೆ ಡಾ| ಜ್ಯೋತಿ, ತಾಲೂಕು ಅಧ್ಯಕ್ಷ‌ ಖಾಜಾ ರೌಡಕುಂದಾ, ಪಂಪಾಪತಿ ಸೇರಿದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ನೂರಾರು ಯುವ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.