ಸಂಚಾರ ಪೊಲೀಸರಿಗೆ ಶಾಲಾ ಮಕ್ಕಳ ಧನ್ಯವಾದ

Team Udayavani, Jan 29, 2019, 6:44 AM IST

sanchara.jpg

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಂಚಾರ ನಿಯಮಗಳ ಕುರಿತು ಹೆಚ್ಚು ಮಾಹಿತಿ ಒದಗಿಸಲು ಸಂಚಾರ ಪೊಲೀಸ್‌ ವಿಭಾಗ ತೀರ್ಮಾನಿಸಿದೆ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌ ಹೇಳಿದರು.

ಸಂಚಾರ ಪೊಲೀಸ್‌ ದಿನಾಚರಣೆ ಅಂಗವಾಗಿ ಸೋಮವಾರ ಸಿಎಂಸಿಎ ಸಂಸ್ಥೆ ನಗರದ ಸಂಚಾರ ನಿರ್ವಹಣೆ ಕೇಂದ್ರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ “ಶಾಲಾ ಮಕ್ಕಳಿಂದ ಸಂಚಾರ ಪೊಲೀಸರಿಗೆ ಧನ್ಯವಾದಗಳು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಲಾ ಪಠ್ಯಪುಸ್ತಕಗಳಲ್ಲಿ ಸಂಚಾರ ನಿಯಮಗಳು ಹಾಗೂ ಉಲ್ಲಂಘನೆಗಳ ಕುರಿತ ಹೆಚ್ಚಿನ ಮಾಹಿತಿಯಿಲ್ಲ. ಈ ಹಿನ್ನೆಲೆಯಲ್ಲಿ ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರ ಜತೆ ಚರ್ಚಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಶಾಲಾ ಮಟ್ಟದಲ್ಲೇ ಮಾಹಿತಿ ನೀಡಲು ತೀರ್ಮಾನಿಸಲಾಗಿದೆ.

ಸಂಚಾರ ನಿರ್ವಹಣೆ ಕೇಂದ್ರದ ಕಾರ್ಯವೈಖರಿ ಮತ್ತು ಸಂಚಾರ ಪೊಲೀಸರು ಹೇಗೆ ಕರ್ತವ್ಯ ನಿರ್ವಹಿಸುತ್ತಾರೆ, ಸಾರ್ವಜನಿಕರು, ವಾಹನ ಸವಾರು ಯಾವ ರೀತಿ ಸಂಚಾರ ನಿಯಮ ಪಾಲಿಸಬೇಕು ಎಂಬೆಲ್ಲ ಮಾಹಿತಿಯನ್ನು ಶಾಲಾ ದಿನಗಳಲ್ಲೇ ಮಕ್ಕಳಿಗೆ ನೀಡಲು ಚಿಂತಿಸಲಾಗಿದೆ ಎಂದು ಹೇಳಿದರು.

ಈಗಾಗಲೇ ನಗರದ ಎಲ್ಲಾ ಸಂಚಾರ ಠಾಣೆಗಳ ವ್ಯಾಪ್ತಿಯ ಶಾಲೆಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಅಭಿಯಾನ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸುವುದರ ಜತೆಗೆ, ನಿರ್ದಿಷ್ಟ ವಿಷಯ ಕುರಿತು ಆಂದೋಲನ ಆರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. 

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಡಾ.ಅಜಯ್‌ಕುಮಾರ್‌ ಸಿಂಗ್‌ ಮಾತನಾಡಿ, ಪೊಲೀಸ್‌ ಇಲಾಖೆಯಲ್ಲಿ ಸಂಚಾರ ಪೊಲೀಸರ ಕೆಲಸ ಬಹಳ ಕಷ್ಟ. ಒಂದು ಕ್ಷಣ ನಿರ್ಲಕ್ಷ್ಯ ತೋರಿದರೂ ದೊಡ್ಡ ಅನಾಹುತವೇ ನಡೆಯುತ್ತದೆ.

ಇಂತಹ ಕಾರ್ಯಕ್ರಮಗಳ ಮೂಲಕ ಸಂಚಾರ ಪೊಲೀಸರಿಗೆ ಧನ್ಯವಾದ ತಿಳಿಸುತ್ತಿರುವುದು ಸಂತೋಷದ ವಿಚಾರ ಎಂದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲಾ ಮಕ್ಕಳು ಸಂಚಾರ ಪೊಲೀಸ್‌ ಸಿಬ್ಬಂದಿಗೆ ಗ್ರಿಟಿಂಗ್‌ ಕಾರ್ಡ್‌ ಕೊಡುವ ಮೂಲಕ ಧನ್ಯವಾದ ತಿಳಿಸಿದರು.

ಟಾಪ್ ನ್ಯೂಸ್

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.