ಭಾರತ “ಎ’ ತಂಡಕ್ಕೆ 4ನೇ ಗೆಲುವು

Team Udayavani, Jan 30, 2019, 4:37 AM IST

lionas.jpg

ತಿರುವನಂತಪುರ: ಈಗಾಗಲೇ ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ ಏಕದಿನ ಸರಣಿಯನ್ನು ಜಯಿಸಿರುವ ಭಾರತ “ಎ’ ತಂಡ ಮಂಗಳವಾರ ಇಲ್ಲಿ ನಡೆದ 4ನೇ ಏಕದಿನ ಪಂದ್ಯ ಗೆಲ್ಲುವಲ್ಲಿ ಯಶಸ್ವಿಯಾಗಿದೆ. 

ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಭಾರತ “ಎ’ ತಂಡ 6 ವಿಕೆಟ್‌ಗಳಿಂದ ಜಯ ದಾಖಲಿಸಿ ಐದು ಪಂದ್ಯಗಳ ಸರಣಿಯಲ್ಲಿ 4-0 ಮುನ್ನಡೆ ಸಾಧಿಸಿದೆ. ಸರಣಿಯ 5ನೇ ಪಂದ್ಯ ಗುರುವಾರ ನಡೆಯಲಿದೆ. ಈ ಪಂದ್ಯವನ್ನು ಗೆದ್ದು ಇಂಗ್ಲೆಂಡ್‌ ತಂಡವನ್ನು ವೈಟ್‌ವಾಶ್‌ ಮಾಡುವ ವಿಶ್ವಾಸದಲ್ಲಿ ಭಾರತ ಇದೆ.ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ ಲಯನ್ಸ್‌ 8 ವಿಕೆಟ್‌ ಕಳೆದುಕೊಂಡು 221 ರನ್‌ ಕಲೆ ಹಾಕಿತು. ಇದಕ್ಕುತ್ತರವಾಗಿ ಭಾರತ 46.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 222 ರನ್‌ ಬಾರಿಸಿ ಜಯಭೇರಿ ಬಾರಿಸಿದೆ. 

ಶಾದೂಲ್‌ ದಾಳಿಗೆ ಬೆಚ್ಚಿದ ಲಯನ್ಸ್‌
ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ ತಂಡಕ್ಕೆ ಶಾದೂìಲ್‌ ಠಾಕೂರ್‌ ಮಾರಕವಾಗಿ ಎರಗಿದರು. ಆರಂಭಿಕಕಾರರನ್ನು ಬೇಗನೇ ಪೆವಿಲಿಯನ್‌ಗೆ ಅಟ್ಟುವಲ್ಲಿ ಶಾದೂìಲ್‌ ಯಶಸ್ವಿಯಾದರು. ಅವರು ತನ್ನ 10 ಓವರ್‌ಗಳ ದಾಳಿಯಲ್ಲಿ 49 ರನ್ನಿಗೆ 4 ವಿಕೆಟ್‌ ಕಿತ್ತು ಗೆಲುವಿನ ರೂವಾರಿಯಾಗಿ ಕಾಣಿಸಿಕೊಂಡರು. 

ಆಸರೆಯಾದ ಪಂತ್‌
 222 ರನ್‌ಗಳ ಗುರಿ ಪಡೆದ ಭಾರತ 8 ರನ್‌ ಗಳಿಸುವಲ್ಲಿ ಮೊದಲ ವಿಕೆಟನ್ನು ಕಳೆದುಕೊಂಡಿತ್ತು. ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಶೂನ್ಯಕ್ಕೆ ಔಟಾದರು. ಆದರೆ  ಕೆಎಲ್‌ ರಾಹುಲ್‌ (42) ಮತ್ತು ಭುಯಿ (35) ಅವರ ಉತ್ತಮ ಆಟದಿಂದಾಗಿ ಭಾರತ ಚೇತರಿಸಿತು.  5ನೇ ವಿಕೆಟಿಗೆ ಕಣಕ್ಕಿಳಿದ ರಿಷಬ್‌ ಪಂತ್‌  ಅಜೇಯ 73 ರನ್‌ ಹಾಗೂ ದೀಪಕ್‌ ಹೂಡ ಅವರ 47 ರನ್‌ಗಳ ನೆರವಿನಿಂದ ಭಾರತ ಇನ್ನೂ 21 ಎಸೆತ ಬಾಕಿ ಇರುವಾಗಲೇ  222 ರನ್‌ ಹೊಡೆದು ಗೆಲುವು ದಾಖಲಿಸಿತು.  

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌ ಲಯನ್ಸ್‌-8 ವಿಕೆಟಿಗೆ 221 (ಸ್ಯಾಮ್‌ ಬಿಲ್ಲಿಂಗ್ಸ್‌ 24, ಪೋಪ್‌ 64, ಸ್ಟೀವನ್‌ ಮುಲ್ಲಾನಿ ಔಟಾಗದೆ 58 , ಶಾದೂìಲ್‌ ಠಾಕೂರ್‌ 49ಕ್ಕೆ 4, ದೀಪಕ್‌ ಚಹರ್‌ 38ಕ್ಕೆ 2)
ಭಾರತ “ಎ’-46.3 ಓವರ್‌ಗಳಲ್ಲಿ 4 ವಿಕೆಟಿಗೆ 222 (ರಾಹುಲ್‌ 42, ರಿಷಬ್‌ ಪಂತ್‌ ಔಟಾಗದೆ 73, ದೀಪಕ್‌ ಹೂಡ ಔಟಾಗದೆ 47,  ಜಾಕ್ಸ್‌ 35ಕ್ಕೆ 2). ಪಂದ್ಯ ಶ್ರೇಷ್ಠ: ರಿಷಬ್‌ ಪಂತ್‌.

ಪ್ರೇಕ್ಷಕರ ಮೇಲೆ ಜೇನುನೊಣಗಳ ದಾಳಿ
 ಇಂಗ್ಲೆಂಡ್‌ ಲಯನ್ಸ್‌ ಆಟದ ವೇಳೆ ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರ ಮೇಲೆ ಜೇನುನೊಣ ದಾಳಿ ನಡೆಸಿದೆ. ದಾಳಿಯಿಂದ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕಾರಣದಿಂದಾಗಿ ಪಂದ್ಯವನ್ನು ನಿಲ್ಲಿಸಲಾಯಿತು. ಯಾವುದೇ ಆಟಗಾರರ ಮೇಲೆ ಜೇನುನೊಣಗಳು ದಾಳಿ ನಡೆಸಿಲ್ಲ. ಆದರೆ 15 ನಿಮಿಷಗಳ ಕಾಲ ಆಟ ನಿಂತಿತು. ಕ್ರೀಡಾಂಗಣದಿಂದ ಜೇನುನೊಣಗಳನ್ನು ತೆರವುಗೊಳಿಸಿದ ಬಳಿಕ ಪಂದ್ಯ ಪುನರಾರಂಭಗೊಂಡಿತು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.