ಬಸ್‌ ನಿಲ್ದಾಣದಲ್ಲಿ ನಿತ್ಯ ಕಸಕ್ಕೆ ಬೆಂಕಿ!


Team Udayavani, Feb 1, 2019, 5:54 AM IST

dvg-4.jpg

ಹರಿಹರ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಿತ್ಯ ಕಸದ ರಾಶಿಗೆ ಬೆಂಕಿ ಹಾಕಿ ಸುಡಲಾಗುತ್ತಿದ್ದು ಇದರಿಂದ ತೀವ್ರ ಕಿರಿಕಿರಿಯಾಗುವುದಲ್ಲದೆ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ ಎಂದು ಸುತ್ತಮುತ್ತಲಿನ ಅಂಗಡಿಕಾರರು, ಪ್ರಯಾಣಿಕರು ಆರೋಪಿಸಿದ್ದಾರೆ.

ದಿನಕ್ಕೆ 1500ಕ್ಕೂ ಅಧಿಕ ಬಸ್‌ಗಳು ಬಂದು ಹೋಗುವ ನಿಲ್ದಾಣದಲ್ಲಿ ಸಹಜವಾಗಿಯೇ ಸಾಕಷ್ಟು ಕಸ ಸೃಷ್ಟಿಯಾಗುತ್ತದೆ. ಹೀಗೆ ಸಂಗ್ರಹವಾದ ಕಸವನ್ನು ಪಶ್ಚಿಮ ದಿಕ್ಕಿನಲ್ಲಿರುವ ಕಸದ ತೊಟ್ಟಿಗೆ ಹಾಕಿ ಕತ್ತಲಾಗುತ್ತಿದ್ದಂತೆ ಬೆಂಕಿ ಹಚ್ಚಿ ಸುಡಲಾಗುತ್ತದೆ. ನಿಲ್ದಾಣ ಸೇರಿದಂತೆ ಸುತ್ತಮುತ್ತಲ ವಾತಾವರಣದಲ್ಲಿ ದಟ್ಟ ಹೊಗೆ ಕವಿದು ಪ್ರಯಾಣಿಕರು ಹಾಗೂ ಸುತ್ತಲಿನ ನಿವಾಸಿಗಳಿಗೆ ಉಪದ್ರವವಾಗುತ್ತಿದ್ದರೂ ತಡೆಯುವವರಿಲ್ಲದಾಗಿದೆ.

ಕಸದಲ್ಲಿನ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳು, ಗುಟ್ಕಾ ಪಾಕೆಟ್, ನೀರು, ಜ್ಯೂಸ್‌ನ ಖಾಲಿ ಬಾಟಲಿಗಳು ಗಂಟೆಗಟ್ಟಲೆ ಸುಡುತ್ತಾ ಹೊಗೆ ಬರುವುದರಿಂದ ಪ್ರಯಾಣಿಕರು, ಅಂಗಡಿ ಮುಂಗಟ್ಟುಗಳ ವ್ಯಾಪಾರಿಗಳು ಅನಿವಾರ್ಯವಾಗಿ ಕಲುಪಿತ, ರಾಸಾಯನಿಕಯುಕ್ತ ಗಾಳಿಯನ್ನು ಸೇವಿಸಬೇಕಿದೆ. ಮಕ್ಕಳು, ವಯಸ್ಸಾದವರು ಕೆಮ್ಮುತ್ತಾ ಬಸ್‌ಗೆ ಕಾಯುವಂತಾಗಿದೆ.

ನಿಲ್ದಾಣದ ಸ್ವಚ್ಛತೆ ಕಾಪಾಡಲು ನೇಮಕಗೊಂಡಿರುವ ಗುತ್ತಿಗೆದಾರರು ಕಸ ಸಂಗ್ರಹಿಸಿ ನಿಗದಿತ ಸ್ಥಳಕ್ಕೆ ಸಾಗಿಸಬೇಕು. ಸಾಗಣೆ ಕೆಲಸ, ಖರ್ಚು-ವೆಚ್ಚದಿಂದ ತಪ್ಪಿಸಿಕೊಳ್ಳಲು ಅವರು ಕಸಕ್ಕೆ ಬೆಂಕಿ ಹಾಕಿ ಕೈತೊಳೆದುಕೊಳ್ಳುತ್ತಿದ್ದಾರೆ. ಆದರೆ 24 ಗಂಟೆ ನಿಲ್ದಾಣದಲ್ಲೇ ಇರುವ ಸಂಸ್ಥೆಯ ಅಧಿಕಾರಿಗಳು ಇದನ್ನು ಕಂಡೂ ಕಾಣದಂತಿರುವುದು ಆಶ್ಚರ್ಯ ಮೂಡಿಸಿದೆ. ಪ್ರಯಾಣಿಕರೇನಾದರೂ ಈ ಬಗ್ಗೆ ದೂರಿದರೆ ಬೆಂಕಿ ಹಾಕುವವರಿಗೆ ಹೇಳಿ, ನಮಗೇನು ಕೇಳುತ್ತೀರಿ ಎಂದು ಉತ್ತರಿಸುತ್ತಾರೆ.

ಅವ್ಯವಸ್ಥೆಯ ಆಗರ: ಇದಲ್ಲದೇ ರಾತ್ರಿ ಸಮಯದಲ್ಲಿ ನಿಲ್ದಾಣದಲ್ಲಿ ಬಹುತೇಕ ಲೈಟ್‌ಗಳು ಬೆಳಗುವುದಿಲ್ಲ. ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿಲ್ಲ, ಮಹಿಳೆಯರ ವಿಶ್ರಾಂತಿ ಕೊಠಡಿಯಿಲ್ಲ. ಪ್ರಯಾಣಿಕರು ಏನಾದರೂ ಸಮಸ್ಯೆ ಹೇಳಿದರೆ ಸದ್ಯದಲ್ಲೇ ಹೈಟೆಕ್‌ ಬಸ್‌ ನಿಲ್ದಾಣವಾಗಲಿದೆ ಎಂದು ಕಳೆದ 5-6 ವರ್ಷಗಳಿಂದ ಹೇಳುತ್ತಲೇ ಬರುತ್ತಿದ್ದಾರೆ.

ಬೆಳಗ್ಗೆ ಬೆಂಕಿ ಹಚ್ಚಲು ಹೇಳಿದ್ದೆ!
ನಿಲ್ದಾಣದಲ್ಲಿ ಕಸಕ್ಕೆ ಬೆಂಕಿ ಹಚ್ಚಿ ಪರಿಸರ ಮಾಲಿನ್ಯ ಮಾಡುತ್ತಿರುವ ಬಗ್ಗೆ ಡಿಪೋ ಮ್ಯಾನೇಜರ್‌ ಮರುಳಸಿದ್ದಪ್ಪರಿಗೆ ಕೇಳಿದಾಗ ಅವರು ಕಸಕ್ಕೆ ಬೆಳಗ್ಗೆ ಹೊತ್ತಲ್ಲಿ ಬೆಂಕಿ ಹಾಕಿ ಎಂದರೆ ಕೆಲಸಗಾರರು ಸಂಜೆ ಹಾಕುತ್ತಿದ್ದಾರೆ ಎಂದು ಹೇಳಿದರು. ಕಸಕ್ಕೆ ಬೆಂಕಿ ಹಾಕುವುದು ತಪ್ಪು, ಸೂಕ್ತ ರೀತಿಯಲ್ಲೆ ವಿಲೆ ಮಾಡಬೇಕಲ್ಲವೆ ಎಂದು ಪ್ರಶ್ನಿಸಿದಾಗ ಅವರು, ಕಸವನ್ನು ಬೇರೆಡೆಗೆ ಸಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.