3 ರಂದು ಚಿತ್ರದುರ್ಗದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ

Team Udayavani, Feb 1, 2019, 10:24 AM IST

cta-1.jpg

ಚಿತ್ರದುರ್ಗ: ಶಿಕ್ಷಕರ ಅರ್ಹತಾ ಟಿ.ಇ.ಟಿ ಪರೀಕ್ಷೆ ಫೆ. 3 ರಂದು ನಗರದ 36 ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಲೋಪವಾಗುವಂತೆ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫೆ. 3 ರಂದು ಮೊದಲ ಅಧಿವೇಶನದ ಪರೀಕ್ಷೆ ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ನಡೆಯಲಿದ್ದು, 3171 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಮಧ್ಯಾಹ್ನದ ಅಧಿವೇಶನ ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ನಡೆಯಲಿದೆ. ಇದರಲ್ಲಿ 7240 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಆಯಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷರು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಬಹಳ ಜವಾಬ್ದಾರಿಯಿಂದ ಜಂಟಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಕೊಠಡಿ ಮೇಲ್ವಿಚಾರಕರನ್ನು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರನ್ನು ಮಾತ್ರ ನೇಮಿಸಿಕೊಳ್ಳಬೇಕು. ಮುಖ್ಯ ಅಧೀಕ್ಷಕರು ಹಾಗೂ ಮೇಲ್ವಿಚಾರಕರು ಬೆಳಿಗ್ಗೆ ಸರಿಯಾಗಿ 7:30ಕ್ಕೆ ಕೇಂದ್ರದಲ್ಲಿ ಹಾಜರಿರಬೇಕು. ಮಾರ್ಗಾಧಿಕಾರಿಗಳು ನಿಗದಿತ ವೇಳೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಕೇಂದ್ರಗಳಿಗೆ ವಿತರಿಸಬೇಕು. ಅದೇ ರೀತಿ ಉತ್ತರಪತ್ರಿಕೆಗಳನ್ನು ಸಹ ಜಿಲ್ಲಾ ಖಜಾನೆಯಲ್ಲಿ ಭದ್ರಪಡಿಸಿ ಇಡಬೇಕು ಎಂದರು.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಅವರನ್ನು ಸರಿಯಾಗಿ ತಪಾಸಣೆ ನಡೆಸಿ ಕೇಂದ್ರಗಳಲ್ಲಿ ಪ್ರವೇಶ ನೀಡಬೇಕು. ಕೇಂದ್ರದೊಳಗೆ ಮೊಬೈಲ್‌ ಸೇರಿದಂತೆ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ತರದಂತೆ ಎಚ್ಚರಿಕೆ ವಹಿಸಬೇಕು, ಅದೇ ರೀತಿಯಾಗಿ ಒಎಂಆರ್‌ ಶೀಟ್‌ಗಳನ್ನು ಭರ್ತಿ ಮಾಡುವ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ವೀಡಿಯೋ ಚಿತ್ರೀಕರಣವನ್ನು ಕಡ್ಡಾಯವಾಗಿ ಮಾಡಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ಮುಖ್ಯ ಅಧಿಧೀಕ್ಷಕರು ಹಾಗೂ ಕೊಠಡಿ ಮೇಲ್ವಿಚಾರಕರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ನೋಡಲ್‌ ಅಧಿಕಾರಿ ರಾಮಯ್ಯ ಅವರ ಗಮನಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಬೇಕು.

ಒಟ್ಟಾರೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆಗಳನ್ನು ಶಿಸ್ತುಬದ್ಧವಾಗಿ ಅಚ್ಚುಕಟ್ಟಾಗಿ ನಡೆಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ಪ್ರತಾಪ್‌ ಪಾಟೀಲ್‌, ಶಿಕ್ಷಣಾಧಿಕಾರಿ ರಾಮಯ್ಯ, ತಿಪ್ಪೇಸ್ವಾಮಿ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.