ಬಡವರಿಗೆಬೆಳಕಾದ ಇಂದಿರಾ ಕ್ಯಾಂಟೀನ್

Team Udayavani, Feb 3, 2019, 7:20 AM IST

badavari.jpg

ಚಿಂತಾಮಣಿ: ಬಡವರು, ಸಾರ್ವಜನಿಕರು, ಕೂಲಿಕಾರ್ಮಿಕರ ಅನುಕೂಲಕ್ಕಾಗಿ ಕಡಿಮೆ ದರದಲ್ಲಿ ಜನ ಸಾಮಾನ್ಯರಿಗೆ ಗುಣಮಟ್ಟದ ಆಹಾರ ಸಿಗಬೇಕೆಂಬ ಸದುದ್ದೇಶದಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರು ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಆರಂಭಿಸಿದರು. ಈ ಮೂಲಕ ಅನೇಕ ಜನರ ಬಾಳಿನಲ್ಲಿ ಬೆಳಕಾಗಿದ್ದಾರೆ ಎಂದು ಸಂಸದ ಕೆ.ಎಚ್ ಮುನಿಯಪ್ಪ ಅಭಿಪ್ರಾಯಪಟ್ಟರು.

ನಗರದ ಎಪಿಎಂಸಿ ಟೊಮೆಟೋ ಮಾರುಕಟ್ಟೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಚಿಂತಾಮಣಿ ನಗರಸಭೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಯಾರೂ ಕೂಡ ಊಟವಿಲ್ಲದೇ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿದೆ. ಕಡಿಮೆ ಹಣದಲ್ಲಿ ಹೊಟ್ಟೆತುಂಬಾ ಊಟ ಮಾಡಬಹುದು. ಕೂಲಿ ಕಾರ್ಮಿಕರು ಬಡವರು ಮಾರುಕಟ್ಟೆ ಹಮಾಲಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಜೊತೆಗೆ ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ವಿಧಾನಸಭೆ ಉಪಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಬಡವರ ಅನುಕೂಲಕ್ಕಾಗಿ ಆನೇಕ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದರಲ್ಲಿ ಇಂದಿರಾ ಕ್ಯಾಂಟೀನ್‌ ಪ್ರಮುಖವಾಗಿದೆ ಎಂದರು.

ಭೂಮಿ ಪೂಜೆ ವೇಳೆ ಕಲ್ಲು ತೂರಾಟವಾಗಿತ್ತು: ಈ ಹಿಂದೆ ಕ್ಯಾಂಟೀನ್‌ ನಿರ್ಮಾಣಕ್ಕೆ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಎಪಿಎಂಸಿ ಮಾರುಕಟ್ಟೆ ಬಳಿ ಆಗಮಿಸಿದ್ದಾಗ ಮಾಜಿ ಶಾಸಕ ಎಂ.ಸಿ.ಸುಧಾಕರ್‌ ಬೆಂಬಲಿಗರು ಭೂಮಿಪೂಜೆಗೆ ಅಡ್ಡಿಪಡಿಸಿದ್ದರು. ಪೂಜೆಗೆ ಆಗಮಿಸಿದ್ದ ವಾಣಿ ಕೃಷ್ಣಾರೆಡ್ಡಿ ಮತ್ತು ಶಾಸಕರ ಮಲೆ ಕಲ್ಲು ತೂರಾಟ ಮಾಡಿ ದಾಂಧಲೆ ನಡೆಸಿದ್ದರು.

ನಗರಸಭೆ ಉಪಾಧ್ಯಕ್ಷೆ ಸುಜಾತ, ಎಪಿಎಂಸಿ ಅಧ್ಯಕ್ಷ ಕೃಷ್ಣಮೂರ್ತಿ, ಉಪಾಧ್ಯಕ್ಷ ಶ್ರೀ ನಿವಾಸ ರೆಡ್ಡಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀರಾಮಪ್ಪ, ಜಿಲ್ಲಾ ಯೋಜನಾ ನಿರ್ದೇಶಕ ಡಾ.ಎನ್‌.ಭಾಸ್ಕರ್‌, ಪೌರಾಯುಕ್ತ ಹರೀಶ್‌, ನಗರಸಭೆ, ಎಪಿಎಂಸಿ ಸದಸ್ಯರು ಇದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.