ಬೀದಿ ಬದಿ ವ್ಯಾಪಾರಿಗಳಿಗಾಗಿ ಬಡವರ ಬಂಧು ಯೋಜನೆ ಜಾರಿ

Team Udayavani, Feb 3, 2019, 9:06 AM IST

bid-2.jpg

ಎನ್‌.ಆರ್‌.ಪುರ: ಸರ್ಕಾರವು ಬೀದಿ ಬದಿಯ ಸಣ್ಣ ವ್ಯಾಪಾರಿಗಳ ಅನುಕೂಲಕ್ಕಾಗಿ ತಂದಿರುವ ಬಡವರ ಬಂಧು ಯೋಜನೆಯಡಿ ಡಿ.ಸಿ.ಸಿ.ಬ್ಯಾಂಕಿನಿಂದ ಈಗಾಗಲೇ ಕಳೆದ 3 ದಿನದಿಂದ 25 ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಸಾಲ ನೀಡಲಾಗಿದೆ ಎಂದು ಡಿ.ಸಿ.ಸಿ.ಬ್ಯಾಂಕಿನ ವ್ಯವಸ್ಥಾಪಕ ಪುಟ್ಟಸ್ವಾಮಿ ತಿಳಿಸಿದರು.

ಅವರು ಪಟ್ಟಣ ಪಂಚಾಯತ್‌ ಸಭಾಂಗಣದಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ (ಡೇ ನಲ್ಮಾ) ಶಹರಿ ಸಮೃದ್ಧಿ ಉತ್ಸವ ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘಗಳ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಮಾಹಿತಿ ನೀಡಿದರು.

ಬಡವರ ಬಂಧು ಯೋಜನೆಯಡಿ ಬೀದಿ ಬದಿಯಲ್ಲಿ ಎಳ ನೀರು, ಹೂ, ತರಕಾರಿ, ಹಣ್ಣುಗಳನ್ನು ಮಾರುವ ವ್ಯಾಪಾರಿಗಳಿಗೆ ಬಡ್ಡಿ ಇಲ್ಲದೆ 10 ಸಾವಿರ ರೂ.ವರೆಗೆ ಸಾಲ ನೀಡುತ್ತೇವೆ. ಸಾಲ ಪಡೆದ ವ್ಯಾಪಾರಿಗಳು ಪ್ರತಿ ದಿನ ಪಿಗ್ನಿಯ ರೂಪದಲ್ಲಿ 120 ರೂ. ಸಾಲ ವಾಪಾಸು ಮಾಡಬೇಕಾಗಿದೆ. ಈ ಸಾಲದ ಬಡ್ಡಿಯನ್ನು ಸರ್ಕಾರವೇ ಕಟ್ಟಲಿದೆ. ಹಣವನ್ನು ಪ್ರತಿ ದಿನ ಸರಿಯಾಗಿ ಕಟ್ಟದಿದ್ದರೆ ಬಡ್ಡಿಯನ್ನು ಸೇರಿಸಿ ಕಟ್ಟಬೇಕಾಗುತ್ತದೆ.

ಬಿ.ಪಿ.ಎಲ್‌.ಹೊಂದಿದ ಸ್ವಸಹಾಯ ಗುಂಪುಗಳಿಗೆ ಬಡ್ಡಿ ಇಲ್ಲದೆ 3 ಲಕ್ಷ ರೂ.ವರೆಗೆ ಸಾಲ ನೀಡುತ್ತೇವೆ. ಸಾಲ ಪಡೆದು 1 ವರ್ಷದ ಒಳಗೆ ಸಾಲ ಮರುಪಾವತಿ ಮಾಡಬೇಕು. ಸಾಲದ 12 ತಿಂಗಳ ಬಡ್ಡಿಯನ್ನು ಗುಂಪಿನವರು ಮೊದಲು ಬ್ಯಾಂಕಿಗೆ ಕಟ್ಟಬೇಕು. ಸಾಲ ತೀರಿದ ಮೇಲೆ ಬಡ್ಡಿಯನ್ನು ವಾಪಾಸು ಮಾಡಲಾಗುವುದು. ಎ.ಪಿ.ಎಲ್‌ ಕಾರ್ಡುದಾರರು ಹಾಗೂ ಇತರ ಸ್ವಸಹಾಯ ಗುಂಪುಗಳಿಗೆ ಶೇ.4 ರ ಬಡ್ಡಿಯಲ್ಲಿ ಸಾಲ ನೀಡುತ್ತೇವೆ. ಪ್ರತಿ ತಿಂಗಳು ಸರಿಯಾಗಿ ಸಾಲದ ಕಂತು ಕಟ್ಟಬೇಕು. ಇಲ್ಲದಿದ್ದರೆ ಸುಸ್ತಿ ಬಡ್ಡಿ ಬೀಳಲಿದೆ. ಬಡವರಿಗಾಗಿ ಸರ್ಕಾರವು ಈ ಯೋಜನೆಗಳನ್ನು ತಂದಿದ್ದು, ಬ್ಯಾಂಕಿನ ಮಿತಿಯೊಳಗೆ ಸಾಲ ನೀಡುತ್ತೇವೆ ಎಂದರು.

ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಕುರಿಯಾಕೋಸ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಡೇ ನಲ್ಮಾ ಯೋಜನೆಯಡಿ ಶಹರಿ ಸಮೃದ್ದಿ ಉತ್ಸವ ಕಾರ್ಯಕ್ರಮವನ್ನು ಫೆ.1 ರಿಂದ 19 ರ ವರೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಬೇಕಾಗಿದೆ. ಈ ಯೋಜನೆಯಡಿ ಪಟ್ಟಣದಲ್ಲಿರುವ ಮಹಿಳೆಯರು, ಸ್ತ್ರೀ ಶಕ್ತಿ ಗುಂಪುಗಳು,ಸ್ವಸಹಾಯ ಗುಂಪುಗಳ ಸದಸ್ಯರ ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ ಮಾಹಿತಿ ನೀಡುತ್ತಿದ್ದೇವೆ ಎಂದರು.

ಭಾರತೀಯ ಮಾನವ ಹಕ್ಕುಗಳ ಸಂರಕ್ಷಣಾ ವೇದಿಕೆಯ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಜಬೇದಾ ಮಾತನಾಡಿದರು. ಪಪಂ ಅಧ್ಯಕ್ಷ ಆರ್‌.ರಾಜಶೇಖರ್‌ ಸಮಾರಂಭ ಉದ್ಘಾಟಿಸಿದರು. ಪಪಂ ಉಪಾಧ್ಯಕ್ಷೆ ಸಾವಿತ್ರಿ ಮಂಜುನಾಥ್‌, ಹಿರಿಯ ಸದಸ್ಯ ಲಕ್ಷ್ಮಣ ಶೆಟ್ಟಿ, ನಾಮಿನಿ ಸದಸ್ಯ ನಾಗಭೂಷಣ, ಸ್ವಸಹಾಯ ಸಂಘಗಳು ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮೀ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.