ಪಡ್ರೆ: ಪುತ್ರನಿಂದಲೇ ತಂದೆಯ ಕೊಲೆ

Team Udayavani, Feb 4, 2019, 5:50 AM IST

murdr.jpg

ಪೆರ್ಲ: ಪಡ್ರೆ ಕುಂಟಿಕಾನ ಅರಳಿಕಟ್ಟೆ ನಿವಾಸಿ ಐತ್ತಪ್ಪ ಅವರ ಪುತ್ರ ಸುಂದರ ನಾಯ್ಕ (55) ಅವರ ಸಾವು ಕೊಲೆ ಎಂಬುದಾಗಿ ಮೇಲ್ನೋಟಕ್ಕೆ ಖಚಿತಗೊಂಡಿರುವುದಾಗಿ ತನಿಖೆ ನಡೆಸುತ್ತಿರುವ ಬದಿಯಡ್ಕ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ  ಮೃತರ  ಪುತ್ರ ಜಯಂತ, ಸಹೋದರ ಈಶ್ವರ ನಾಯ್ಕ ಹಾಗೂ ಇವರ ಪುತ್ರ ಪ್ರಭಾಕರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಶಾಮೀಲಾಗಿರುವುದಾಗಿ ತಿಳಿದು ಬಂದಿದ್ದು, ಅವರ ಬಂಧನಕ್ಕೆ  ಕ್ರಮ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜ. 30ರಂದು ರಾತ್ರಿ 9.30ಕ್ಕೆ ಪುತ್ರ ಜಯಂತ ಮನೆಗೆ ಬಂದಾಗ ಸುಂದರ ನಾಯ್ಕ ಗಲಾಟೆ ನಡೆಸುತ್ತಿದ್ದರು. ಇದನ್ನು ಪ್ರಶ್ನಿಸಿದಾಗ ಜಗಳವಾಗಿದ್ದು, ಈ ಸಂದರ್ಭ ತಲೆಗೆ ಏಟು ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪೆರ್ಲದ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿನ ವೈದ್ಯರು  ಕೂಡಲೇ ಕಾಸರಗೋಡು ಅಥವಾ ಮಂಗಳೂರಿಗೆ ಕೊಂಡೊಯ್ಯುವಂತೆ ಸೂಚಿಸಿದ್ದರೆಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಪೆರ್ಲದ ಆಸ್ಪತ್ರೆಯ ವೈದ್ಯರಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಸುಂದರ ನಾಯ್ಕರ ಮನೆಗೆ ತೆರಳಿದ ಪೊಲೀಸರು ತನಿಖೆ ನಡೆಸಿದಾಗ ಮನೆ ಅಂಗಳದಲ್ಲಿ ಹೊಡೆದಾಟ ನಡೆದ ಕುರುಹು ಹಾಗೂ ರಕ್ತದ ಕಲೆಗಳು ಕಂಡು ಬಂದಿವೆ. ರಕ್ತ ಕಾಣದಂತೆ ಅದರ ಮೇಲೆ ಸೆಗಣಿ ಸಾರಿಸಲಾಗಿದೆ. ತನಿಖೆ ಅಂಗವಾಗಿ ಮನೆಗೆ ಪೊಲೀಸರು ಕಾವಲು ಏರ್ಪಡಿಸಲಾಗಿದ್ದು, ಫೋರೆನ್ಸಿಕ್‌ ತಜ್ಞರು ಮನೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಂದರ ನಾಯ್ಕರ ಸಹೋದರ,  ಮಣಿಯಂಪಾರೆಯ ನಾರಾಯಣ ನಾಯ್ಕ ಅವರು  ಎಸ್‌ಎಪಿಗೆ ದೂರು ನೀಡಿದ್ದರು. ಬಳಿಕ ಪೊಲೀ ಸರು ತನಿಖೆ ನಡೆ ಸಿ ದಾಗ ಪ್ರಕರಣ ಬಹಿರಂಗಗೊಂಡಿದೆ.

ಸಂಬಂಧಿಕರಿಗೆ ತಿಳಿಸದೆ ಅಂತ್ಯಸಂಸ್ಕಾರ 
ಸುಂದರ ನಾಯ್ಕರನ್ನು ಕಾಸರಗೋಡು ಅಥವಾ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲು ವೈದ್ಯರು ಸೂಚಿಸಿದ್ದರೂ ಜತೆಗಿದ್ದವರು  ನೇರವಾಗಿ ಮನೆಗೆ ತಂದಿದ್ದರು. ಮರುದಿನ ಮುಂಜಾನೆಯೊಳಗೆ ಮೃತದೇಹವನ್ನು ಶವ ದಹಿಸುವ ಕಬ್ಬಿಣದ ಪೆಟ್ಟಿಗೆ ಬಳಸಿ ಅಂತ್ಯ ಸಂಸ್ಕಾರ ನಡೆಸಲಾಗಿದೆ. ಆದರೆ  ಇವರು ಸಾವಿಗೀಡಾದ ಬಗ್ಗೆ ಸ್ವಂತ ಸಹೋದರ ಸಹಿತ ಸಂಬಂಧಿಕರ್ಯಾರಿಗೂ ತಿಳಿಸಿರಲಿಲ್ಲ ಎನ್ನಲಾಗಿದೆ. 

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.