ಶಿಥಿಲ ಕಟ್ಟಡದಲ್ಲೇ ವಿದ್ಯಾರ್ಥಿಗಳಿಗೆ ನಿತ್ಯ ಪಾಠ

Team Udayavani, Feb 4, 2019, 10:21 AM IST

bid-2.jpg

ಬಸವಕಲ್ಯಾಣ: ನಗರದ ಹೃದಯ ಭಾಗದಲ್ಲಿರುವ ಉರ್ದು ಹಿರಿಯ ಪ್ರಾಥಮಿಕ ಶಾಲೆ ಈಗೋ-ಆಗೋ ಬಿಳುವಂತಹ ಶಿಥಿಲಾವಸ್ಥೆಯ ಕಟ್ಟಡದಲ್ಲಿ ನಡೆಯುತ್ತಿದ್ದು, ಇಂತಹ ಕಡ್ಡದಲ್ಲೇ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಇದು ಪಾಲಕರ ಮತ್ತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ಸರಕಾರಿ ಪದವಿ ಕಾಲೇಜಿನ ಹಿಂಬದಿ ಇರುವ ಉರ್ದು ಶಾಲೆಯ ಸ್ಥಿತಿ ಇದಾಗಿದೆ. ಹಾಜರಾತಿ ಪ್ರಕಾರ 1ರಿಂದ 7ನೇ ತರಗತಿ ವರೆಗೆ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಪ್ರವೇಶ ಪಡೆದಿದ್ದಾರೆ. ಆದರೆ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ.

ಶಾಲೆಯ ಆವರಣದಲ್ಲಿ 8 ತರಗತಿ ಕೋಣೆಗಳು ಇವೆ. ಅವುಗಳಲ್ಲಿ ಬಹುತೇಕ ಕೋಣೆಗಳ ಒಳಗಿನ ಮತ್ತು ಹೊರಗಿನ ಗೋಡೆಗಳು ಬಿರುಕು ಬಿಟ್ಟಿವೆ. ಇದರಿಂದ ಮೇಲ್ಛಾವಣಿಗೆ ತಾತ್ಕಾಲಿಕವಾಗಿ ಕಬ್ಬಿಣ ಕಂಬಗಳನ್ನು ಆಧಾರ ಸ್ತಂಭವಾಗಿ ಅಳವಡಿಸಲಾಗಿದೆ. ಶಾಲೆಯ ದುಸ್ಥಿತಿ ತಿಳಿದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಂಜನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಇದಕ್ಕೆ ಸಂಬಂಧಪಟ್ಟಂತೆ ಮನವಿಯನ್ನೂ ಸಲ್ಲಿಸಲಾಗಿದೆ. ಆದರೆ ಈ ವರೆಗೂ ಕಟ್ಟಡ ತೆರವುಗೊಳಿಸುವುದಾಗಲಿ ಅಥವಾ ದುರಸ್ತಿ ಮಾಡುವುದಾಗಲಿ ಮಾಡಿಲ್ಲ ಎಂದು ಶಾಲೆಯ ಶಿಕ್ಷಕರು ಮಾಹಿತಿ ನೀಡಿದ್ದಾರೆ.

ಶಾಲೆಗೆ ಬೆರಳೆಣಿಕೆಯಷ್ಟು ಶಿಕ್ಷಕರನ್ನು ಮಾತ್ರ ನೇಮಕ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಶೌಚಾಲಯ ಇದ್ದರೂ ನೀರಿನ ಕೊರತೆಯಿಂದ ಬಳಕೆಗೆ ಬಾರದಂತಾಗಿದೆ. ಶಾಲೆಯ ಆವರಣ ನೋಡಿದರೆ ಇದು ಶಾಲೆಯೊ ಅಥವಾ ಪಾಳು ಬಿದ್ದು ಕಟ್ಟಡವೊ ಎಂಬಂಥ ವಾತಾವರಣ ಇರುವುದು ದುರಾದೃಷ್ಟಕರ ಸಂಗತಿಯಾಗಿದೆ.

ಶಾಲೆಯ ಕಟ್ಟಡ ಹಳೆಯ ದಾಗಿರುವುದರಿಂದ ಶಿಥಿಲಾವಸ್ಥೆಗೆ ತಲುಪಿದ್ದು, ಅವಘಡಗಳು ಸಂಭವಿಸುವ ಮುನ್ನ ವಿದ್ಯಾರ್ಥಿಗಳಿಗೆ ಬೇರೆ ಕಡೆ ಪಾಠ ನಡೆಸುವ ವ್ಯವಸ್ಥೆ ಮಾಡಬೇಕು. ಅಥವಾ ಶೀಘ್ರವಾಗಿ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

•ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.