ಗಾಂಧಿ ಪ್ರತಿಕೃತಿಗೆ ಗುಂಡಿಕ್ಕಿದವರ ವಿರುದ್ಧ ಖಂಡ್ರೆ ಆಕ್ರೋಶ


Team Udayavani, Feb 5, 2019, 6:24 AM IST

gandhi.jpg

ಬೆಂಗಳೂರು: ಹುತಾತ್ಮರ ದಿನಾಚರಣೆ ಸಂದರ್ಭದಲ್ಲಿ ಉತ್ತರ ಪ್ರದೇಶದ ಅಲಿಘಡ್‌ನ‌ಲ್ಲಿ ಮಹಾತ್ಮಾ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿರುವ ಹಿಂದೂ ಮಹಾಸಭೆ ಕಾರ್ಯಕರ್ತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ. 

ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹತ್ತಿರವಾದಂತೆಲ್ಲ. ಬಿಜೆಪಿಯವರ ಹೊಸ ಆಟಗಳು ಶುರುವಾಗಿದೆ. ಹುತಾತ್ಮರ ದಿನ ಗಾಂಧೀಜಿ ಪ್ರತಿಕೃತಿಗೆ ನಕಲಿ ಪಿಸ್ತೂಲಿನಿಂದ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಬಿಜೆಪಿ ಹಾಗೂ ಬಿಜೆಪಿ ಬೆಂಬಲಿತ ಸಂಘಟನೆಗಳು ಪ್ರಜಾಪ್ರಭುತ್ವಕ್ಕೆ ಮಾರಕವಾದ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ನಾಥೂರಾಮ್‌ ಗೋಡ್ಸೆಯನ್ನು ಹುತಾತ್ಮ, ಮಹಾತ್ಮರೆನ್ನುವ ಇವರು ದೇಶಭಕ್ತರಾ ? ಒಂದೆಡೆ ಪ್ರಧಾನಿ ಮಹಾತ್ಮರ ಸಮಾಧಿಗೆ ತೆರಳಿ ಗೌರವ ಸಲ್ಲಿಸುತ್ತಾರೆ. ಇನ್ನೊಂದೆಡೆ ಅವರ ಸಂಘಟನೆಗಳು ಮಹಾತ್ಮರಿಗೆ ಅವಮಾನ ಮಾಡುತ್ತಿವೆ. ಬಿಜೆಪಿಯವರದ್ದು ಡೋಂಗಿ ದೇಶಭಕ್ತಿ. ಬಿಜೆಪಿಯವರು ದೇಶಕ್ಕಾಗಿ ಯಾವತ್ತೂ ಹೋರಾಟ ಮಾಡಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್‌ ಹೋರಾಟ ಮಾಡಿದೆ.

ಬಿಜೆಪಿ ದ್ವಂದ್ವ ನಿಲುವು ಬಿಟ್ಟು ಈ ಕೃತ್ಯ ಎಸಗಿದವರ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌ ಮಾತನಾಡಿ, ಗಾಂಧೀಜಿ ಪ್ರತಿಕೃತಿಗೆ ಗುಂಡು ಹಾರಿಸಿರುವ ಶಕುನ್‌ ಪಾಂಡೆ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ದುಷ್ಟ ಶಕ್ತಿಗಳನ್ನು ಹತ್ತಿಕ್ಕಲು ಸಾಧ್ಯವಾಗದಿರುವ ಮೋದಿಯವರಿಗೆ ಪ್ರಧಾನಿ ಸ್ಥಾನದಲ್ಲಿರಲು ನೈತಿಕತೆ ಇಲ್ಲ ಎಂದು ಹೇಳಿದರು.

ಡಿಎನ್‌ಎ ಪರೀಕ್ಷೆ ಮಾಡಿಕೊಳ್ಳಲಿ: ಮಹಿಳೆಯರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್‌ ಹೆಗಡೆ ಅವರ ಡಿಎನ್‌ಎ ಪರೀಕ್ಷೆ ಮಾಡಿಸಬೇಕು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನಂತಕುಮಾರ್‌ ಹೆಗಡೆ ಹಿಂದುತ್ವವನ್ನು ಗುತ್ತಿಗೆ ಪಡೆದುಕೊಂಡಿದ್ದಾರಾ ? ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿರುವ ಅವರ ಪಕ್ಷದ ಶಾಸಕರ ಕೈ ಕಡಿದಿದ್ದಾರಾ? ಅಧಿವೇಶನದಲ್ಲಿ ನೀಲಿ ಚಿತ್ರ ವೀಕ್ಷಿಸಿದವರ ಕೈ ಕಡೆದಿದ್ದಾರಾ ? ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಪತ್ನಿಯ ಬಗ್ಗೆ ಮಾತನಾಡಲು ಅನಂತಕುಮಾರ್‌ ಹೆಗಡೆಗೆ ಯಾವುದೇ ನೈತಿಕತೆಯಿಲ್ಲ. ಅನಂತಕುಮಾರ್‌ ಹೆಗಡೆ ಅವರ ಪತ್ನಿ ಯಾವ ಧರ್ಮಕ್ಕೆ ಸೇರಿದವರು ಎನ್ನುವುದರ ಬಗ್ಗೆ ಅವರು ಡಿಎನ್‌ಎ ಪರೀಕ್ಷೆ ಮಾಡಿಸಲಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.