ಮಾರ್ಚ್ 2 ರಿಂದ ಅದ್ಧೂರಿಯಾಗಿ ಹಂಪಿ ಉತ್ಸವ
Team Udayavani, Feb 7, 2019, 12:40 AM IST
ಹೊಸಪೇಟೆ: ಬರಗಾಲದ ನೆಪವೊಡ್ಡಿ ಹಂಪಿ ಉತ್ಸ ವವನ್ನು ಮುಂದೂಡುತ್ತ ಬರುತ್ತಿದ್ದ ಮೈತ್ರಿ ಸರ್ಕಾರ, ಕೊನೆಗೂ ಮಾ.2 ಮತ್ತು 3ರಂದು ಎರಡು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದೆ. ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಫೆ.7ರಂದು ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಹಂಪಿ ಉತ್ಸವ ಆಚರಣೆಗೆ ದಿನಾಂಕ ಅಧಿಕೃತವಾಗಿ ಘೋಷಣೆ ಯಾಗಲಿದೆ. ಈ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆ ಯಲ್ಲಿ ಭಾಗವಹಿಸುವಂತೆ ಜಿಲ್ಲಾಡಳಿತ ಬುಧವಾರ ಸುತ್ತೋಲೆ ಹೊರಡಿಸಿದೆ.
ಈ ಮಧ್ಯೆ, ಉತ್ಸವಕ್ಕೆ ಜಿಲ್ಲಾಡಳಿತ 8 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ,ಸರ್ಕಾರ ಪ್ರವಾಸೋದ್ಯಮ ಇಲಾಖೆ ಯಿಂದ 1.50 ಕೋಟಿ ರೂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 60 ಲಕ್ಷ ರೂ. ಸೇರಿ ಒಟ್ಟು 2.10 ಕೋಟಿ ರೂ. ಅನುದಾನ ಮಾತ್ರ ಬಿಡುಗಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ