ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಬದ್ಧ


Team Udayavani, Feb 7, 2019, 12:53 AM IST

80.jpg

ಬೆಂಗಳೂರು: ಸಮಾಜದ ಬಡ ವರ್ಗದ ಬುದ್ಧಿವಂತ ಮಕ್ಕಳು ಇಂಗ್ಲೀಷ್‌ ಜ್ಞಾನದ ಕೊರತೆಯಿಂದಾಗಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಜತೆಗೆ, ಕನ್ನಡಕ್ಕೆ ಪ್ರಾಮುಖ್ಯತೆ ನೀಡುವ ವಿಷಯದಲ್ಲಿ ಯಾವುದೇ ರಾಜಿಯಾಗುವುದಿಲ್ಲ ಎಂದು ರಾಜ್ಯಪಾಲ ವಜೂಭಾಯ್‌ ವಾಲಾ ತಿಳಿಸಿದ್ದಾರೆ.

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಸಮರ್ಪಕ ಕೌಶಲ್ಯದೊಂದಿಗೆ ರಾಜ್ಯಮಟ್ಟದಲ್ಲಷ್ಟೇ ಅಲ್ಲದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಅನುವಾಗುವಂತೆ ಸಜ್ಜುಗೊಳಿಸುವುದು ಅನಿವಾರ್ಯವಾಗಿದೆ ಎಂದರು.

ಭಾಷಣದ ಮುಖ್ಯಾಂಶ

• ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು, ಅವುಗಳನ್ನು ಮೇಲ್ದರ್ಜೆಗೇರಿ ಸಲು 450 ಕೋಟಿ ರೂ.ಗಳ ಯೋಜನೆ ರೂಪಿಸಿ ಹಣ ಬಿಡುಗಡೆ ಮಾಡಲಾಗಿದೆ.

• ಸರ್ಕಾರ ಹಾಗೂ ಬೃಹತ್‌ ಕೈಗಾರಿಕಾ ವಲಯ ಸ್ಪಾರ್ಟ್‌ ಅಪ್‌ ಪರ್ಯಾವರಣ ಪೋಷಿಸುತ್ತಿದ್ದು, 2025ರ ವೇಳೆಗೆ ರಾಜ್ಯದಲ್ಲಿನ ನವೋದ್ಯಮಗಳ ಸಂಖ್ಯೆ 20 ಸಾವಿರಕ್ಕೆ ತಲುಪುವ ಸಂಭವವಿದೆ. ಕರ್ನಾಟಕವು ಅಮೆರಿಕ, ಬ್ರಿಟನ್‌, ಇಸ್ರೇಲ್‌, ಫ್ರಾನ್ಸ್‌, ಜಪಾನ್‌ನಂತಹ ವಿಶ್ವದ ಅನೇಕ ಮುಂಚೂಣಿ ನವೋದ್ಯಮ ಪರಿಸರ ವ್ಯವಸ್ಥೆಗಳೊಂದಿಗೆ ಸಹಭಾಗಿತ್ವ ಸಾಧಿಸುತ್ತಿದೆ. ನವೋದ್ಯಮಗಳಿಗೆ ಉತ್ತೇಜನ ನೀಡುವ ಸಲುವಾಗಿ 58 ಇನ್ನೋವೇಷನ್‌ ಕೇಂದ್ರ ಸ್ಥಾಪಿಸಿದೆ.

• 2018ನೇ ಸಾಲಿನಲ್ಲಿ ಕರ್ನಾಟಕವು ಬಂಡವಾಳ ಆಕರ್ಷಿಸುವುದರಲ್ಲಿ ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ಕೈಗಾರಿಕಾ ನೀತಿ 2014-19ರ ಅಡಿಯಲ್ಲಿ 3.49 ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆ ಹೊಂದಿರುವ ಮತ್ತು 10.28 ಲಕ್ಷ ಜನರಿಗೆ ಉದ್ಯೋಗಾವಕಾಶವನ್ನು ಸೃಜಿಸುವ ಸಾಮರ್ಥ್ಯವುಳ್ಳ 1.958 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

• 2019ನೇ ಸಾಲಿನಲ್ಲಿ ಕಲಬುರಗಿ ಮತ್ತು ಬೀದರ್‌ ವಿಮಾನ ನಿಲ್ದಾಣಗಳು ಕಾರ್ಯಾ ಚರಣೆ ಪ್ರಾರಂಭಿಸಲಿವೆ. ರಾಜ್ಯದಲ್ಲಿ ರಸ್ತೆ ಸಂಪರ್ಕ ಸುಧಾರಣೆಗಾಗಿ 7800 ಕಿ.ಮೀ., ರಾಜ್ಯ ಹೆದ್ದಾರಿ ಮತ್ತು ಪ್ರಧಾನ ಜಿಲ್ಲಾ ರಸ್ತೆಗಳ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಕೈಗೆತ್ತಿಕೊಳ್ಳಲು ವರದಿ ಸಿದ್ಧಪಡಿಸಲಾಗುತ್ತಿದೆ.

• ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್‌ಲೈನ್‌ ಸ್ವಯಂ ಚಾಲಿತ ಕಟ್ಟಡ ನಕ್ಷೆ ಅನುಮೋದನಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದನ್ನು ಶೀಘ್ರದಲ್ಲಿಯೇ ರಾಜ್ಯದ ಎಲ್ಲ ನಗರ ಸಂಸ್ಥೆಗಳಿಗೆ ವಿಸ್ತರಿಸಲಾಗುವುದು. ಐದು ಸ್ಮಾರ್ಟ್‌ಸಿಟಿಗಳಲ್ಲಿ ಎಲ್ಲ ಆನ್‌ಲೈನ್‌ ಸೇವೆ ಏಕೀಕೃತಗೊಳಿಸಲು ಕಮ್ಯಾಂಡ್‌ ಮತ್ತು ಕಂಟ್ರೋಲ್‌ ಕೇಂದ್ರಗಳ ಸ್ಥಾಪನೆ ಕುರಿತ ಕಾರ್ಯ ಪ್ರಾರಂಭಿಸಲಾಗಿದೆ.

• ರಾಜ್ಯದಲ್ಲಿ 156 ತಾಲೂಕು ಬರಪೀಡಿತ ವಾಗಿದ್ದು, ಈ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ, ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ. 8.11 ಲಕ್ಷ ಮೇವು ಕಿಟ್ ವಿತರಿಸಿ 30 ಲಕ್ಷ ಟನ್‌ ಮೇವು ಉತ್ಪಾದನೆ ನಿರೀಕ್ಷಿಸಲಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ 18.56 ಲಕ್ಷ ಕುಟುಂಬ ಗಳಿಗೆ ಉದ್ಯೋಗ ಕಲ್ಪಿಸಲಾಗಿದೆ.

• ಸಾಲಮನ್ನಾ ಯೋಜನೆಯಡಿ ಜನವರಿ ಅಂತ್ಯದವರೆಗೆ 3.28 ಲಕ್ಷ ರೈತರ 1611 ಕೋಟಿ ರೂ.ಬೆಳೆ ಸಾಲ ಮನ್ನಾ ಮಾಡಲಾಗಿದೆ.

• ಸಕ್ಕರೆ ಕಾರ್ಖಾನೆಗಳು 2018ನೇ ಏಪ್ರಿಲ್‌ ತಿಂಗಳಲ್ಲಿ ರೈತರಿಗೆ ಕೊಡಬೇಕಾಗಿದ್ದ 2135 ಕೋಟಿ ರೂ.ಅಧಿಕ ಬಾಕಿ ಮೊತ್ತವು ಜನವರಿ ಅಂತ್ಯಕ್ಕೆ 5 ಕೋಟಿ ರೂ.ಗೆ ಇಳಿಕೆಯಾಗು ವಂತೆ ನೋಡಿಕೊಳ್ಳಲಾಗಿದೆ.

• ಮೇಕೆದಾಟು ಬ್ಯಾಲೆನ್ಸಿಂಗ್‌ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿದೆ.

• ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾ ಟಕ ಯೋಜನೆಯಡಿ ಜನವರಿ ಅಂತ್ಯದ ವರೆಗೆ 1,22,822 ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ರಾಮೀಣ ಪ್ರದೇಶ ಗಳಲ್ಲಿ ಉತ್ತಮ ಪ್ರಾಥಮಿಕ ಆರೋಗ್ಯ ಪಾಲನಾ ಸೇವೆ ಒದಗಿಸಲು ಆರೋಗ್ಯ ಉಪ ಕೇಂದ್ರಗಳನ್ನು ಮೇಲ್ದರ್ಜೆಗೇರಿಸ ಲಾಗುವುದು.

• ಬಡ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಗದಗ, ಕೊಪ್ಪಳ, ಚಾಮರಾಜನಗರ, ಹಾಸನದಲ್ಲಿ 450 ಹಾಸಿಗೆಗಳ ಹೊಸ ಆಸ್ಪತ್ರೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

• ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲು ಬಡವರ ಬಂಧು ಜಾರಿಗೊಳಿಸ ಲಾಗಿದೆ. ಹಾಲು ಉತ್ಪಾದಕರ ಖಾತೆಯ ಪ್ರೋತ್ಸಾಹಧನ, ‘ಕ್ಷೀರಸಿರಿ’ ಯಂತಹ ಕಲ್ಯಾಣ ಯೋಜನೆಗಳ ಫ‌ಲಾನುಭವಿಗಳಿಗೆ ನೇರವಾಗಿ ವರ್ಗಾಯಿಸಲು ಆಧಾರ್‌ ಆಧಾರಿತ ಅಪ್ಲಿಕೇಷನ್‌ ಅಭಿವೃದ್ಧಿ ಗೊಳಿಸಲಾಗಿದೆ.

• ಸರ್ಕಾರವು ವಿಶೇಷ ಅಭಿವೃದ್ಧಿ ಯೋಜನೆ ಗಾಗಿ 3007 ಕೋಟಿ ರೂ.ಹೈ-ಕ ಪ್ರದೇಶದ ಅಭಿವೃದ್ಧಿಗೆ 1000 ಕೋಟಿ ರೂ.ಒದಗಿಸಲಾಗಿದೆ.

ಉಪ ನಗರ ರೈಲು ಸಂಪರ್ಕ

ಬೆಂಗಳೂರು ನಗರದಲ್ಲಿ ಸುಸ್ಥಿರ ನಗರ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಉಪನಗರ ರೈಲು ಸಂಪರ್ಕ ಸೌಲಭ್ಯ ಹೆಚ್ಚಿಸಲು ರೈಲ್ವೆ ಇಲಾಖೆಯೊಂದಿಗೆ ವಿಶೇಷ ಉದ್ದೇಶ ವಾಹಕ ಸ್ಥಾಪಿಸಲು ಉದ್ದೇಶಿಸಲಾಗಿದೆ. ನಾಗವಾರ ಮೆಟ್ರೋ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಹಂತ-2 ಬಿ ಯನ್ನು ಆದ್ಯತೆಯ ಮೆಲೆ ಕೈಗೆತ್ತಿಕೊಳ್ಳಲಾಗುತ್ತಿದೆ. ಬೆಂಗಳೂರು ಕೇಂದ್ರ ಭಾಗದಲ್ಲಿ ಚತುರ ಸಂಚಾರಿ ನಿರ್ವಹಣಾ ವ್ಯವಸ್ಥೆ ಅನುಷ್ಠಾನಗೊಳಿಸಲಾಗುತ್ತಿದೆ ಎಮದು ರಾಜ್ಯಪಾಲರು ಹೇಳಿದರು.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.