ದೌರ್ಜನ್ಯ ಖಂಡಿಸಿ ದಿನಗೂಲಿ ನೌಕರರ ಪ್ರತಿಭಟನೆ

Team Udayavani, Feb 7, 2019, 9:53 AM IST

gul-5.jpg

ಆಳಂದ: ಹೊರಗುತ್ತಿಗೆ ಮತ್ತು ದಿನಗೂಲಿ ನೌಕರರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ತಾಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಎದುರು ದಿನಗೂಲಿ ನೌಕರರು ಪ್ರತಿಭಟನೆ ನಡೆಸಿದರು.

ಸಂಘಟನೆ ಗೌರವಾಧ್ಯಕ್ಷ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗೌರಮ್ಮ ಪಾಟೀಲ, ಆಷ್ಪಾಕ್‌ ಇನಾಂದಾರ, ಕಲ್ಯಾಣಿ ಹಿರೋಳಿ, ಬಾಬುರಾವ್‌, ಸಾಯಬಣ್ಣ ಪಿ. ನಿಂಬಾಳ, ಸುಧಾಮ ಧನ್ನಿ, ಪುರುಷೋತ್ತಮ ಕಡಗಂಚಿ, ಶಿವಪ್ಪ ಸಾಗರ, ಶಿವಾನಂದ ಕವಲಗಾ, ರಾಚಣ್ಣಾ, ಬಸವರಾಜ ಪಾಟೀಲ, ಕರಿಗೋಳಪ್ಪಾ ಫರತಾಬಾದ, ಶಿವಕಾಂತಮ್ಮ ಕಡಗಂಚಿ, ಗೌರಮ್ಮ ಚಿಂಚೋಳಿ, ಶ್ರೀದೇವಿ ಸುಂಟನೂರ, ಶ್ರೀದೇವಿ ಪಟ್ಟಣ, ಸುಭದ್ರಾಬಾಯಿ ಬೋಳಣಿ, ಸಿದ್ಧಮ್ಮ ನಾವದಗಿ, ಭಾರತಿ ಭೋಳಣಿ, ಮಂಗಲಾ ನಾವದಗಿ, ಮಸೂರಬಾಯಿ ಕಡಗಂಚಿ ಮುಂತಾದವರು ಪಾಲ್ಗೊಂಡಿದ್ದರು.

ಪ್ರತಿಭಟನೆಕಾರರು ನಂತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ, ಕಳೆದ ಐದು ವರ್ಷಗಳಿಂದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬಾಲಕರ ವಸತಿ ನಿಲಯದಲ್ಲಿ ದಿನಗೂಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿರುವ ಗಣೇಶ, ಅತಿಥಿಗೃಹದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೌಸೀಫ್‌ ಅವರ ವೇತನ ತಡೆಯುವ ಮೂಲಕ ದೌರ್ಜನ್ಯ ಎಸಗಿದ್ದಾರೆ. ಈ ಕುರಿತು ಹಲವಾರು ಬಾರಿ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಯಾವುದೇ ತಪ್ಪು ನಡೆದಿಲ್ಲವಾದರೂ ಹಿಂದಿನ ಕುಲಸಚಿವರ ನಿರ್ದೇಶನದ ಮೇರೆಗೆ ಗಣೇಶನಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಳ್ಳಲಾಯಿತು. ಕುಲಪತಿಗಳು ಗಣೇಶನಿಗೆ ಕೆಲಸಕ್ಕೆ ಹಾಜರಾಗಲು ಕಡತದಲ್ಲಿ ಆದೇಶಿಸಿದ ಮೇಲೂ ಅವರ ಕೆಳ ಅಧಿಕಾರಿಗಳು ಕುಲಪತಿಗಳ ಮಾತು ಕೇಳುವುದಿಲ್ಲ ಎಂದು ನೇರವಾಗಿ ತಿಳಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಲವು ತಿಂಗಳುಗಳಿಂದ ಅಧಿಕಾರಿಗಳು ಆತನಿಗೆ ಕೆಲಸಕ್ಕೆ ಹಾಜರಾಗುವಂತೆ ತಿಳಿಸಿ, ಮತ್ತೆ ಕೆಲ ದಿನ ಕಳೆದ ನಂತರ ಕೆಲಸಕ್ಕೆ ಹಾಜರಾಗದಂತೆ ಹೇಳುತ್ತಿದ್ದಾರೆ. ಈ ಹಿಂದೆ ಕಾರ್ಯನಿರ್ವಹಿಸಿದರೂ ವೇತನ ತಡೆಹಿಡಿಯಲಾಗಿದೆ. ಇದಕ್ಕೆ ಕಾರಣ ಗೊತ್ತಾಗಿಲ್ಲ ಎಂದು ದೂರಿದರು.

ಮನವಿ ಪತ್ರ ನೀಡುವ ಸಂದರ್ಭದಲ್ಲಿ ಕುಲಪತಿ ಮಹೇಶ್ವರಯ್ಯ ಅವರೊಂದಿಗೆ ಮಾರುತಿ ಮಾನ್ಪಡೆ ಮಾತಿನ ಚಕಮಕಿ ನಡೆಸಿದರು. ಡಿಎಸ್‌ಪಿ ಟಿ.ಎಸ್‌. ಸುಲ್ಪಿ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಂಡಿತು. ಕುಲಪತಿಗಳು ನೌಕರನಿಗೆ ಸೇವೆ ಮುಂದುವರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿತರಿಗೆ ಸೂಚಿಸಿ, ಮುಖಂಡರಿಗೆ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈ ಬಿಡಲಾಯಿತು.

ಟಾಪ್ ನ್ಯೂಸ್

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.