ದೇಸಾರಬಾವಿ ಕಾಮಗಾರಿ ಪೂರ್ಣ ಎಂದು?

Team Udayavani, Feb 8, 2019, 11:15 AM IST

8-february-26.jpg

ತೇರದಾಳ: 12ನೇ ಶತಮಾನದ ಐತಿಹಾಸಿಕ ತೇರದಾಳ ದೇಸಾರಬಾವಿ ಅಭಿವೃದ್ಧಿ ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂಬ ಆರೋಪಗಳಿವೆ.

ದೇಸಾರಬಾವಿಯು ಅಭಿವೃದ್ಧಿ ಭಾಗ್ಯ ಪಡೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಮಕ್ಕಳ ಜೀವಹಾನಿ ಸಂಭವಿಸಿವೆ. ಬಾವಿಗೆ ತಂತಿ ಬೇಲಿ ಹಾಗೂ ಗೇಟ್ ಅಳವಡಿಸಿ, ಕಾವಲುಗಾರರ ನೇಮಕ ಮಾಡಿಕೊಳ್ಳಬೇಕಾಗಿದೆ.

ಮಾಜಿ ಸಚಿವೆ ಉಮಾಶ್ರೀ ಅಧಿಕಾರವಧಿಯಲ್ಲಿ ದೇಸಾರಬಾವಿ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ 13ನೇ ಹಣಕಾಸು ಯೋಜನೆಯಡಿ 60 ಲಕ್ಷ ರೂ. ಅನುದಾನ ಮಂಜೂರು ಮಾಡಿಸಿದ್ದರು. ನಿರ್ಲಕ್ಷ್ಯಕ್ಕೊಳಗಾದ ಬಾವಿಯಲ್ಲಿ ಮೊದಲು ಕಲ್ಮಶ ತುಂಬಿತ್ತು. ಬಾವಿಯಲ್ಲಿನ ಗಲೀಜು, ಮಣ್ಣು ಹೊರ ತೆಗೆದು, ತಳದಿಂದ ಬೃಹತ್‌ ಕಲ್ಲಿನ ಕಟ್ಟಡ ಮಾಡಲಾಗಿದೆ. ರೇಣುಕಾ ಸವದತ್ತಿ ಜೋಗುಳಬಾವಿ ಮಾದರಿಯಲ್ಲಿ ಬಾವಿಯನ್ನು ಅಭಿವೃದ್ಧಿಪಡಿಸಿ ಪುಷ್ಕರಣಿ ಮಾಡಿ ಸುತ್ತಲೂ ಸ್ಟೀಲ್‌ ಗ್ಯಾಲರಿ, ತಂತಿ ಬೇಲಿ ಹಾಕಿಸಿ, ಮುಂದುಗಡೆ ಸುಂದರ ಉದ್ಯಾನ ಮಾಡುವ ಕನಸನ್ನು ಉಮಾಶ್ರೀ ಕಂಡಿದ್ದರು. ಆದರೆ ಅನುದಾನ ಸಾಲದ ಹಿನ್ನೆಲೆಯಲ್ಲಿ ಮತ್ತೆ 80 ಲಕ್ಷ ರೂ.ಅನುದಾನ ಮಂಜೂರಿ ತಂದರು. ಹೀಗೆ ಒಟ್ಟು 1.4 ಕೋಟಿ ಅನುದಾನದಲ್ಲಿ ಅಲ್ಲಮಪ್ರಭು ಪುಷ್ಕರಣಿ ಕಾರ್ಯ ನಡೆದಿತ್ತು. ಆದರೆ ಇಲಾಖೆ ಉದಾಸೀನತೆಯಿಂದ ಪುಷ್ಕರಣಿ ಸುತ್ತಲಿನ ಬೇಲಿ, ಉದ್ಯಾನದ ನಿರ್ಮಾಣ, ವಿದ್ಯುತ್‌ ದೀಪಗಳ ಅಳವಡಿಕೆ ಈವರೆಗೂ ಸಾಧ್ಯವಾಗಿಲ್ಲ.

8 ತಿಂಗಳ ಹಿಂದೆ ಬಾಲಕನೊಬ್ಬ ಬಾವಿಯಲ್ಲಿ ಬಿದ್ದು ಪ್ರಾಣ ಕಳೆದುಕೊಂಡರೆ, ಜ.18ರಂದು ಮತ್ತೂಬ್ಬ ಬಾಲಕ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಈ ಎರಡು ಮಕ್ಕಳ ಜೀವ ಹಾನಿಯಿಂದ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಸುಂದರಗೊಂಡ ಬಾವಿ ಸುತ್ತ ಜನದಟ್ಟಣೆ ಹೆಚ್ಚುತ್ತಿದ್ದು, ಮತ್ತೂಂದು ಅನಾಹುತ ಸಂಭವಿಸುವ ಮುನ್ನ ಮುಂಜಾಗ್ರತ ಕ್ರಮ ಕೈಗೊಳ್ಳಬೇಕಿದೆ.

ಕಾಮಗಾರಿಯು ಯೋಜನೆಯಲ್ಲಿ ಸೂಚಿಸಿದ ಹಣದಲ್ಲಿ ಈಗ ಸಿದ್ಧವಾಗಿದೆ. ತಡೆಗೋಡೆ, ಗಾರ್ಡನ್‌ ನಿರ್ಮಾಣಕ್ಕೆ ಹಣಕಾಸಿನ ಅವಶ್ಯಕತೆಯಿದೆ. ಬಾವಿಯ ಸುತ್ತ ತಡೆಗೋಡೆ ನಿರ್ಮಿಸಲು ಕೆಲವರು ಜಾಗೆಯ ತಕರಾರು ಮಾಡಿದ್ದರಿಂದ ಸಾಧ್ಯವಾಗಲಿಲ್ಲ. ಈಗ ಮತ್ತೆ ಕ್ರಿಯಾಯೋಜನೆ ಮಾಡಿ, ಸ್ಥಳದ ಲಭ್ಯತೆಯಿದ್ದರೆ ಅನುದಾನ ಬಂದ ನಂತರ ಬಾವಿಯ ಸುತ್ತ ತಡೆಗೋಡೆ ನಿರ್ಮಿಸಲಾಗುವುದು.
 •ಡಾ| ವಾಸುದೇವ,
  ಉಪ ನಿರ್ದೇಶಕರು ಪ್ರಾಚ್ಯವಸ್ತು ಇಲಾಖೆ ಧಾರವಾಡ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.