ಭವಾನಿ ಫೌಂಡೇಶನ್‌ ಪ್ರೋತ್ಸಾಹದ SNS ಕಾಲೇಜು ವೇದಿಕೆ ಉದ್ಘಾಟನೆ


Team Udayavani, Feb 8, 2019, 3:15 PM IST

0602mum10.jpg

ಮುಂಬಯಿ: ಕಲಾ ಪ್ರತಿಭೆಗಳ ಅನಾವರಣ ಮತ್ತು ನಟನಾ ಪ್ರತಿಭಾನ್ವೇಷಣೆಗೆ ಸೂಕ್ತವಾದ ರಂಗಮಂಟಪಗಳು ಅಗತ್ಯವಾಗಿವೆ. ಅನುಕೂಲಕರ ಮತ್ತು ಸುಸಜ್ಜಿತ ರಂಗವೇದಿಕೆಗಳಿದ್ದರೆ ಕಲಾವಿದರ ಕಲಾ ಪ್ರದರ್ಶನಕ್ಕೆ ಪ್ರೇರಕವಾಗುತ್ತವೆ. ಅತ್ಯಾಧುನಿಕ ವ್ಯವಸ್ಥೆಗಳುಳ್ಳ ವೇದಿಕೆಗಳಿಂದ ಕಲಾವಿದರ ಉತ್ಸಾಹ ಇಮ್ಮಡಿಗೊಳ್ಳುವುದು. ಸೂಕ್ತ ವೇದಿಕೆ ಗಳಿಂದ ರಂಗಕ್ರಿಯೆಗಳು ಸರಾಗವಾಗಿ ನೆರವೇರಲು ಹಾಗೂ ಪ್ರತಿಭೆ ಅಭಿವ್ಯಕ್ತಗೊಳ್ಳಲು ಸಾಧ್ಯ ಎಂದು ಸಮಾಜ ಸೇವಕ ಮತ್ತು ಭವಾನಿ ಫೌಂಡೇಶನ್‌ ಮುಂಬಯಿ ಇದರ ಆಡಳಿತ ಮಂಡಳಿ ವಿಶ್ವಸ್ತ ಸದಸ್ಯ ಚೆಲ್ಲಡ್ಕ ರಾಧಾಕೃಷ್ಣ ಡಿ.ಶೆಟ್ಟಿ ತಿಳಿಸಿದರು.

ಫೆ. 5ರಂದು ಬಜ್ಪೆ ಸುಂಕದಕಟ್ಟೆಯ ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಇದರ ರಜತ ಸಂಭ್ರಮದ ನೆನಪಿಗಾಗಿ ಕಾಲೇಜು ಮಂಡಳಿಯ ಮನವಿಯ ಮೇರೆಗೆ ಭವಾನಿ ಫೌಂಡೇಶನ್‌ ಮುಂಬಯಿ ಇದರ ಸಂಸ್ಥಾಪಕ ಅಧ್ಯಕ್ಷ‌ ದಡªಂಗಡಿ ಚೆಲ್ಲಡ್ಕ ಕುಸುಮೋದರ ದೇರಣ್ಣ ಶೆಟ್ಟಿ ಮತ್ತು ವಿಶ್ವಸ್ಥ ಮಂಡಳಿಯ ಸುಮಾರು 1.35 ಲಕ್ಷ ರೂ. ವೆಚ್ಚದಲ್ಲಿ ಪುನರ್‌ನಿರ್ಮಿಸಲಾದ ನವೀಕೃತ ವೇದಿಕೆಯನ್ನು ಕಲಾಮಾತೆಗೆ ಸಮರ್ಪಿಸಿ ಎಸ್‌ಎನ್‌ಎಸ್‌ ಕಾಲೇಜು ಆಯೋಜಿಸಿದ್ದ ಮಂಗಳೂರು ವಿವಿ ಮಟ್ಟದ ಅಂತರ್‌ಕಾಲೇಜು ವೈವಿಧ್ಯಮಯ ಸ್ಪರ್ಧೆ “ಸಮƒದ್ಧಿ 2019’ಯನ್ನು ಉದ್ಘಾಟಿಸಿ ರಾಧಾಕೃಷ್ಣ ಶೆಟ್ಟಿ ಮಾತನಾಡಿದರು.

ಭವಾನಿ ಫೌಂಡೇಶನ್‌ ನಮ್ಮ ಸಂಸ್ಥೆ ಗಳಿಗೆ, ಕ್ಷೇತ್ರಕ್ಕೆ ವೇದಿಕೆ ಸಮರ್ಪಿಸಿ ರುವುದು ಶ್ಲಾಘನೀಯ. ಇದು ಭವಿಷ್ಯತ್ತಿನ ಸರ್ವ ಕಲಾವಿದರ ಪ್ರತಿಭಾ ಪ್ರದರ್ಶನಕ್ಕೆ ವರವಾಗಲಿ ಎಂದು ಕಾಲೇಜಿನ ಅಭಿವೃದ್ಧಿ ಸಮಿತಿ ಖಜಾಂಚಿ, ವೇದಿಕೆ ನಿರ್ಮಾಣದ ಸಮನ್ವಯಕ, ಭವಾನಿ ಫೌಂಡೇಶನ್‌ನ ಆಡಳಿತ ಮಂಡಳಿ ಸದಸ್ಯ ಗೋಪಾಲ ಕೃಷ್ಣ ಕುಂದರ್‌ ಬಜ್ಪೆ ತಿಳಿದರು.

ಎಸ್‌ಎನ್‌ಎಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ನಾರಾಯಣ ಎನ್‌. ಪೂಜಾರಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಸೀತಾರಾಮ ಕುಮಾರ್‌ ಕಟೀಲ್‌, ಕಾಲೇಜು ಅಭಿವೃದ್ಧಿ ಸಮಿತಿಯ ನಿಕಟ ಪೂರ್ವ ಖಜಾಂಚಿ ಹರೀಶ್‌ ಪೈ,  ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್‌ ಭಟ್‌, ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ನರೇಶ್‌ ಕುಮಾರ್‌ ಸಸಿಹಿತ್ಲು, ಯುವವಾಹಿನಿ ಬಜ್ಪೆ ಘಟಕದ ನಿಕಟಪೂರ್ವ ಅಧ್ಯಕ್ಷ ದೇವರಾಜ ಅಮೀನ್‌, ಉಪಪ್ರಾಂಶುಪಾಲ ಗಣೇಶ್‌ ಬಿ.ಎಂ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ವನ್ನು ಗ್ರಂಥಪಾಲಕ  ವಿಶ್ವನಾಥ ಪೂಜಾರಿ ರೆಂಜಾಳ ಸ್ವಾಗತಿಸಿ, ನಿರೂಪಿಸಿದರು. ಕಾಲೇಜ್‌ನ ಪ್ರಾಂಶುಪಾಲೆ ಡಾ| ಲತಾ.ಕೆ  ಕೃತಜ್ಞತಾಭಾವ ವ್ಯಕ್ತಪಡಿಸಿದರು.    

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.