ಯುನಾನಿ ಆಸ್ಪತ್ರೆ ಪ್ರಯೋಜನಕ್ಕೆ ಸಲಹೆ

Team Udayavani, Feb 10, 2019, 9:31 AM IST

gul-7.jpg

ಕಲಬುರಗಿ: ನಗರದಲ್ಲಿ 50 ಹಾಸಿಗೆಯ ಯುನಾನಿ ಆಸ್ಪತ್ರೆ ನಿರ್ಮಿಸಲಾಗಿದ್ದು, ಇದರ ಉಪಯೋಗವನ್ನು ನಾಗರಿಕರು ಪಡೆಯಬೇಕೆಂದು ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದ ದುಬೈ ಕಾಲೊನಿ ಹಿಂದೆ ನಿರ್ಮಿಸಲಾಗಿರುವ ಸರಕಾರಿ ಯುನಾನಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಗ್ರೀಕ್‌ ದೇಶದಿಂದ ಪ್ರಾರಂಭವಾದ ಯುನಾನಿ ಚಿಕಿತ್ಸಾ ಪದ್ದತಿ ಅತಿ ಕಡಿಮೆ ಖರ್ಚಿನಲ್ಲಿ ರೋಗಗಳನ್ನು ಗುಣಮುಖಪಡಿಸುತ್ತದೆ. ಈ ಪದ್ಧತಿಯಲ್ಲಿ ಒಳ್ಳೆಯ ಔಷಧಿಗಳು ಲಭ್ಯವಿದ್ದು, ಬಹುದಿನಗಳಿಂದ ಕಾಡುವ ರೋಗಗಳಿಗೆ ಈ ಚಿಕಿತ್ಸೆ ಮದ್ದಾಗಿದೆ ಎಂದರು.

ಆಯುಷ್‌ ಪದ್ಧತಿ ಅಡಿಯಲ್ಲಿ ಬರುವ ಆಯುರ್ವೇದ, ಯುನಾನಿ, ಹೋಮಿಯೋಪತಿ, ಯೋಗ ಚಿಕಿತ್ಸೆಗಳ ಕುರಿತು ವೈದ್ಯರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ತಕ್ಷಣಕ್ಕೆ ಚಿಕಿತ್ಸೆಗೆ ಅವಶ್ಯಕವಿರುವಂಥಹ ರೋಗಿಗಳಿಗೆ ನೂತನ ವೈದ್ಯ ಪದ್ಧತಿ ಅನುಕೂಲಕರವಾಗಿದೆ ಎಂದು ಹೇಳಿದರು. ಯುನಾನಿ ಆಸ್ಪತ್ರೆ ಆವರಣದಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದು, ಇಲ್ಲಿ ಪಾಲಿಕೆ, ಅರಣ್ಯ ಇಲಾಖೆ ಜತೆಗೂಡಿ ಗಿಡ ಮರಗಳನ್ನು ಬೆಳೆಸುವ ಮೂಲಕ ಆವರಣವನ್ನು ಸುಂದರೀಕರಣ ಗೊಳಿಸಬೇಕು. ಈ ಹಿಂದೆ 1951ರಲ್ಲಿ ದೇಶದಲ್ಲಿ ಮೊದಲ ಜನಗಣತಿ ಕೈಗೊಳ್ಳಲಾಗಿತ್ತು ಆಗ ದೇಶದಲ್ಲಿ ಕೇವಲ 500 ಕಾಲೇಜುಗಳಿದ್ದವು. ಇಂದು ಸುಮಾರು 38000 ಕಾಲೇಜುಗಳಿವೆ ಎಂದರೆ ಶಿಕ್ಷಣ ಕ್ಷೇತ್ರವು ಬೃಹದಾಕಾರದಲ್ಲಿ ಬೆಳೆದಿದೆ ಎನ್ನುವುದು ನಿರೂಪಿಸುತ್ತದೆ ಎಂದರು.

ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಮೇಯರ್‌ ಮಲ್ಲಮ್ಮ ವಳಕೇರಿ, ಮುಖಂಡರಾದ ಭಾಗಣ್ಣಗೌಡ ಸಂಕನೂರ, ಉಪ ಮೇಯರ್‌ ಅಲಿಯಾ ಸಿರಿನ್‌, ಶರಣಮ್ಮ ಯಲ್ಲಪ್ಪ ನಾಯಿಕೋಡಿ, ಜಿ.ಪಂ. ಸಿಇಒ ಡಾ| ರಾಜಾ ಪಿ., ಪಾಲಿಕೆ ಆಯುಕ್ತೆ ಫೌಜಿಯಾ ತರನ್ನುಮ್‌, ಬೆಂಗಳೂರಿನ ಯುನಾನಿ ಉಪ ನಿರ್ದೇಶಕಿ ಡಾ| ಶೋಭಾರಾಣಿ, ಕಲಬುರಗಿ ಆಯುಷ್‌ ಇಲಾಖೆ ಅಧಿಕಾರಿ ಡಾ| ನಾಗರತ್ನಾ ಚಿಮ್ಮಲಗಿ ಮತ್ತಿತರರು ಪಾಲ್ಗೊಂಡಿದ್ದರು.

ಯುನಾನಿ ಚಿಕಿತ್ಸೆಯು ತುಂಬಾ ಹಳೆಯ ರೋಗಗಳನ್ನು ಗುಣಪಡಿಸುವ ಪದ್ಧತಿಯಾಗಿದೆ. ಇದು ತುಂಬಾ ಕಡಿಮೆ ವೆಚ್ಚದಲ್ಲಿ ದೊರೆಯಲಿದ್ದು, ಇದರಿಂದ ಯಾವುದೇ ದುಷ್ಪರಿಣಾಮಗಳು ಉಂಟಾಗುವುದಿಲ್ಲ. ನಗರದಲ್ಲಿ ಸದ್ಯ ಯುನಾನಿ ಆಸ್ಪತ್ರೆ ಪ್ರಾರಂಭಿಸಲಾಗಿದ್ದು ಯುನಾನಿ ಮೆಡಿಕಲ್‌ ಕಾಲೇಜ್‌ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮುತುವರ್ಜಿ ವಹಿಸಿ ಯುನಾನಿ ಮೆಡಿಕಲ್‌ ಕಾಲೇಜು ಮಂಜೂರು ಮಾಡಿಸಬೇಕು.
•ಖನೀಜ್‌ ಫಾತಿಮಾ, ಶಾಸಕಿ

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.