ಬಿಜೆಪಿ ಧ್ವಜ ಅಭಿಯಾನಕ್ಕೆ ಚಾಲನೆ
Team Udayavani, Feb 13, 2019, 12:30 AM IST
ಹೊಸದಿಲ್ಲಿ/ಲಕ್ನೋ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದ 5 ಕೋಟಿ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವಂಥ “ಮೇರಾ ಪರಿವಾರ್, ಭಾಜಪಾ ಪರಿವಾರ್’ ಅಭಿಯಾನಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ಚಾಲನೆ ನೀಡಿದ್ದಾರೆ. ಗುಜರಾತ್ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಧ್ವಜ ಹಾರಿಸುವ ಮೂಲಕ ಅವರು ಈ ಅಭಿಯಾನ ಆರಂಭಿಸಿದರು. ಮಾರ್ಚ್ 2ರವರೆಗೆ ಈ ಅಭಿಯಾನ ನಡೆಯಲಿದ್ದು, ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರ ಒಟ್ಟು 5 ಕೋಟಿ ಮನೆಗಳಲ್ಲಿ ಧ್ವಜ ಹಾರಿಸಲಾಗುತ್ತದೆ.
ಈಗಾಗಲೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪ್ರಚಾರ ಆರಂಭಿಸಿದ್ದಾರೆ. ಒಂದು ಮನೆ ಯಲ್ಲಿ ಸರಾಸರಿ 4 ಸದಸ್ಯರಿದ್ದಾರೆ ಎಂದು ಕೊಂಡರೆ, 20 ಕೋಟಿ ಜನರನ್ನು ತಲುಪಿದಂತೆ ಆಗುತ್ತದೆ ಎನ್ನುವುದು ಬಿಜೆಪಿ ಲೆಕ್ಕಾಚಾರವಾಗಿದೆ.
ಪ್ರಿಯಾಂಕಾ ವಾದ್ರಾ ಚುನಾವಣೆ ಕೆಲಸ ಶುರು
ಸೋಮವಾರದ ಅದ್ದೂರಿ ರೋಡ್ಶೋ ಬಳಿಕ, ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಚುನಾವಣೆ ಸಿದ್ಧತೆ ಬಗ್ಗೆ ಬಿರುಸಿನ ಸಮಾಲೋಚನೆ ಆರಂಭಿಸಿದ್ದಾರೆ. ಮಂಗಳವಾರ ಲಕ್ನೋದಲ್ಲಿ ಅವರು, ಪ್ರಯಾಗ್ರಾಜ್, ಅಂಬೇಡ್ಕರ್ನಗರ, ಸೀತಾಪುರ, ಕೌಶಂಬಿ, ಅಯೋಧ್ಯೆ ಸೇರಿದಂತೆ 10 ಲೋಕಸಭಾ ಕ್ಷೇತ್ರಗಳ ನಾಯಕರ ಜತೆ ಮಾತುಕತೆ ನಡೆಸಿದರು. ಬುಧವಾರ ಮತ್ತು ಗುರುವಾರವೂ ಸ್ಥಳೀಯ ನಾಯಕರ ಜತೆಗೆ ಅವರು ಸರಣಿ ಮಾತುಕತೆ ಮುಂದುವರಿಸಲಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತಿರುವ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಸ್ಥಳೀಯ ನಾಯಕರ ಜತೆ ಚುನಾವಣಾ ಕಾರ್ಯತಂತ್ರ ಕುರಿತು ಚರ್ಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್