ಮಾತೃಭಾಷೆ ಕನ್ನಡ, ಅನ್ನ ಕೊಡುವ ಭಾಷೆ ಇಂಗ್ಲಿಷ್‌


Team Udayavani, Feb 13, 2019, 7:28 AM IST

mathru.jpg

ಚಿಕ್ಕಬಳ್ಳಾಪುರ: ಮಾತೃ ಭಾಷೆ ಕನ್ನಡವಾದರೂ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅನ್ನ ಕೊಡುವ ಭಾಷೆ ಇಂಗ್ಲಿಷ್‌ ಆಗಿದೆ. ಪ್ರತಿಯೊಬ್ಬರಿಗೂ ಇಂಗ್ಲಿಷ್‌ ಶಿಕ್ಷಣ ಅಗತ್ಯವಾಗಿದ್ದರೂ ಕನ್ನಡ ಭಾಷೆಯನ್ನು ಮರೆಯಬಾರದು ಎಂದು ಮೀಟಾ ಫಾರ್‌ ಸೋಶಿಯಲ್‌ ಸರ್ವೀಸ್‌ನ ಸಂಸ್ಥಾಪಕ ಅಧ್ಯಕ್ಷ ಪಿ.ಜಿ.ಗಿರಿ ತಿಳಿಸಿದರು.

ತಾಲೂಕಿನ ಕುಪ್ಪಹಳ್ಳಿಯಲ್ಲಿ ಮಾಸ್‌ ಸ್ತ್ರೀ ಶಕ್ತಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಉಚಿತ ಇಂಗ್ಲಿಷ್‌ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಇಂದಿನ ಜಾಗತಿಕ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಶಿಕ್ಷಣ ಅತ್ಯಗತ್ಯ ಎಂದು ಪ್ರತಿಪಾದಿಸಿದರು.

ಪ್ರತಿಯೊಬ್ಬರಲ್ಲೂ ಅವರದೇ ಆದ ಪ್ರತಿಭೆ ಇರುತ್ತೆ. ಶಿಕ್ಷಕರು ಮತ್ತು ಪೋಷಕರು ಅನಾವರಣಗೊಳಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕಿದೆ. ಸಮಾಜದಲ್ಲಿ ಹೆಣ್ಣು, ಗಂಡು ಎಂಬ ಎರಡೇ ಜಾತಿ ಇರುವುದು. ಜಾತಿ, ಭೇದ ಮಾಡುವುದರಿಂದ ನಮಗೆ ಪ್ರೀತಿ ಸಿಗುವುದಿಲ್ಲ. 

ಪರಿಕರ, ಶಿಕ್ಷಣ ಕೊಡಿಸಬೇಕು: ಪ್ರತಿಯೊಬ್ಬರು ಜಾತಿ-ಜಾತಿಗಾಗಿ ಪ್ರೀತಿಸುವ ಬದಲು ಮನುಷ್ಯ-ಮನುಷ್ಯನಿಗಾಗಿ ಬದುಕಿ, ಪ್ರೀತಿಸುವ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ನಿರಂತರ ಪ್ರಯತ್ನ ಮಾಡಬೇಕು. ಮಕ್ಕಳ ಅಂತರಂಗವನ್ನು ಅರಿತು ಭವಿಷ್ಯದ ಬದುಕಿನ ದಾರಿ ತೋರಿಸಬೇಕು. ಬುದ್ಧಿ ವಿಕಾಸಕ್ಕೆ ಪೂರಕ ಪರಿಕರಗಳು ಮತ್ತು ಶಿಕ್ಷಣ ಕೊಡಿಸಬೇಕು ಎಂದು ತಿಳಿಸಿದರು.

ಮಾನವೀಯ ಮೌಲ್ಯ ತಿಳಿಯಿರಿ: ಜಾಗತಿಕ ಯುಗದಲ್ಲಿ ಇಂಗ್ಲಿಷ್‌ ಭಾಷೆ ಅವಶ್ಯವಿದ್ದು, ಅದಕ್ಕಾಗಿ ಅಭಿಮಾನ ಬದಿಗಿಟ್ಟು ಕೋರ್ಸ್‌ಗೆ ತಕ್ಕಂತೆ ಭಾಷೆ ಕಲಿಯಬೇಕು. ಗ್ರಾಮೀಣ ಭಾಗದ ಎಲ್ಲಾ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಗ್ಲಿಷ್‌ ಶಿಕ್ಷಣ ತರಬೇತಿ ನೀಡಲಾಗುತ್ತಿದೆ. ಇದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು. ಮನುಷ್ಯ ಮಾನವೀಯ ಮೌಲ್ಯಗಳನ್ನು ತಿಳಿದುಕೊಂಡು ಸಮಾಜದಲ್ಲಿ ಉನ್ನತ ಜೀವನ ನಡೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸುಮಾರು 400 ಕ್ಕೂ ಹೆಚ್ಚು ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಾಸ್‌ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಅಮೃತ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯಲುವಳ್ಳಿ ಗಜೇಂದ್ರ, ಗ್ರಾಪಂ ಸದಸ್ಯ ಗಾಂಡ್ಲಚಿಂತೆ ಗಂಗಪ್ಪ, ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷ ಎಂ.ವಿ.ರಾಮಪ್ಪ, ಮುಖಂಡರಾದ ನರಸಿಂಹಪ್ಪ, ಮೂರ್ತಿ, ಶಿಕ್ಷಕ ಮಧು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.