ವಿದ್ಯುತ್‌ ನೀಡಿ-ರಸ್ತೆ ನಿರ್ಮಿಸಿ

Team Udayavani, Feb 14, 2019, 10:36 AM IST

14-february-13.jpg

ರಾಮದುರ್ಗ: ಅಂಬೇಡ್ಕರ್‌ ವಸತಿ ಯೋಜನೆಯಡಿ ಮಂಜೂರಾದ ಮನೆಗಳಿಗೆ ವಿದ್ಯುತ್‌ ಮತ್ತು ರಸ್ತೆ ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ತಾಲೂಕಿನ ಮಾಗನೂರ ಗ್ರಾಮದ ದಲಿತ ಕುಟುಂಬಗಳ ಜನರು ತಹಶೀಲ್ದಾರ್‌, ತಾ.ಪಂ ಇಒ ಹಾಗೂ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತಾಲೂಕಿನ ಹಳೇತೊರಗಲ್ಲ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಗನೂರ ಗ್ರಾಮದಲ್ಲಿ 2006-07 ನೇ ಸಾಲಿನಲ್ಲಿ ಅಂಬೇಡ್ಕರ್‌ ವಸತಿ ಯೋಜನೆಯಲ್ಲಿ ಮಂಜೂರಾದ ಮನೆಗಳಿಗೆ 12 ವರ್ಷವಾದರೂ ಇಲ್ಲಿಯವರೆಗೂ ವಿದ್ಯುತ್‌ ಹಾಗೂ ರಸ್ತೆ ಇಲ್ಲಾ. ಇದರಿಂದ ಇಲ್ಲಿನ ದಲಿತ ಕುಟುಂಬಗಳು ಕತ್ತಲಲ್ಲಿ ಜೀವನ ನಡೆಸುತ್ತಿದ್ದಾರೆ. ಸುಮಾರು 20 ಗುಂಪು ಮನೆಗಳಿದ್ದು, ಸುಮಾರು 70-80 ಜನರು ವಾಸ ಮಾಡುತ್ತಿದ್ದಾರೆ. ಇದರಿಂದ ಇಲ್ಲಿಯ ಜನಕ್ಕೆ ತುಂಬಾ ತೊಂದರೆಯಾಗುತ್ತಿದೆ. ಮನೆಗಳು ಮಾಗನೂರ ಗ್ರಾಮದಿಂದ 
500 ಮೀ. ದೂರವಿದ್ದು, ಇಲ್ಲಿಗೆ ನಡೆದುಕೊಂಡು ಬರಲು ರಸ್ತೆ ಇಲ್ಲ. ಇಲ್ಲಿನ ದಲಿತ ಕುಟುಂಬಗಳ ಬಗ್ಗೆ ಅನೇಕ ಸಲ ಗ್ರಾಮ ಪಂಚಾಯತಿಗೆ ತಿಳಿಸಿದರೂ ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ.

ಇಲ್ಲಿನ ದಲಿತ ಕುಟುಂಬಗಳಿಗೆ ಒಂದು ತಿಂಗಳ ಒಳಗಾಗಿ ನಿರಂತರ ಜ್ಯೋತಿ ವಿದ್ಯುತ್‌ ಮತ್ತು ರಸ್ತೆ ವ್ಯವಸ್ಥೆ ಕಲ್ಪಿಸಿಕೊಡಬೇಕು. ಒಂದು ವೇಳೆ ಸ್ಪಂದಿಸದಿದ್ದರೆ ಬೇಡಿಕೆ ಈಡೇರುವವರೆಗೂ ಅಹೋರಾತ್ರಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮನವಿ ಮೂಲಕ ಎಚ್ಚರಿಕೆ ನೀಡಿದ್ದಾರೆ. ಮನವಿ ಸಂದರ್ಭದಲ್ಲಿ ಡಿ.ಎಸ್‌.ಎಸ್‌ ತಾಲೂಕಾಧ್ಯಕ್ಷ ಬಸವರಾಜ ಮಾದರ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ಮಾದರ, ಸವದತ್ತಿ ತಾಲೂಕಾಧ್ಯಕ್ಷ ಯಲ್ಲಪ್ಪ ಮಾದರ, ಹನಮಂತ ಮಾದರ, ಕರಿಯಪ್ಪ ಮಾದರ, ಸಿದ್ದಪ್ಪ ಮಾದರ, ಮಾರುತಿ ಮಾದರ, ಶಿವಪ್ಪ ಮಾದರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.