ಡೀಸಿ ಕಚೇರಿ ರಸ್ತೆ ಡಂಪಿಂಗ್‌ ಯಾರ್ಡ್‌!

Team Udayavani, Feb 14, 2019, 10:51 AM IST

chikk-2.jpg

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಹಳೆ ಕಟ್ಟಡಗಳ ತೆರವು ಬಳಿಕ ಉಂಟಾಗುವ ಘನ ತ್ಯಾಜ್ಯ ವಸ್ತುಗಳನ್ನು ಮನೆ ಮಾಲೀಕರು ಹಾಗೂ ಕಾಮಗಾರಿ ಗುತ್ತಿಗೆ ಪಡೆದ ಟ್ರ್ಯಾಕ್ಟರ್‌ ಮಾಲೀಕರು ನಗರದ ಹೊರ ವಲಯದ ಮುಖ್ಯ ರಸ್ತೆಗಳ ಅಕ್ಕಪಕ್ಕದಲ್ಲಿ ರಾತ್ರೋರಾತ್ರಿ ಸುರಿದು ಹೋಗುತ್ತಿರುವುದರಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ ಇದೀಗ ಡಪಿಂಗ್‌ ರ್ಯಾಡ್‌ ಆಗುತ್ತಿದೆ.

ಹರಸಾಹಸ: ಜಿಲ್ಲಾಡಳಿತ ಭವನಕ್ಕೆ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರು, ವಾಹನ ಸವಾರರಿಗೆ ತಿಪ್ಪೆ ಗುಂಡಿಗಳಂತೆ ಭಾಸವಾಗುತ್ತಿರುವ ಕಸದ ರಾಶಿಗಳು ಸ್ವಾಗತಿಸುತ್ತಿವೆ. ನಗರದ ಶಿಡ್ಲಘಟ್ಟ ರಸ್ತೆಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ರಸ್ತೆ ಕಿರಿದಾಗಿದ್ದು, ವಾಹನಗಳ ಜನದಟ್ಟಣೆಯಿಂದ ಕಿಷ್ಕಿಂಧೆಯಂತಹ ರಸ್ತೆಯಲ್ಲಿ ವಾಹನ ಸವಾರರು ನಿತ್ಯ ಸಂಚರಿಸುವುದಕ್ಕೆ ಹರಸಾಹಸವೇ ಮಾಡಬೇಕು.

ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆಯ ಅಕ್ಕಪಕ್ಕದಲ್ಲಿಯೇ ನಗರದಲ್ಲಿ ಹಳೆ ಕಟ್ಟಡಗಳ ತೆರವು ಕಾರ್ಯಾಚರಣೆಯಲ್ಲಿ ಸಂಗ್ರಹವಾಗುತ್ತಿರುವ ಮಣ್ಣು, ಕಲ್ಲು ಬಂಡೆಗಳು, ಇಟ್ಟಿಗೆ ಮತ್ತಿತರ ಘನ ತ್ಯಾಜ್ಯ ವಸ್ತುಗಳನ್ನು ಟ್ರ್ಯಾಕ್ಟರ್‌ಗಳಲ್ಲಿ ತುಂಬಿಕೊಂಡು ಬಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳುವ ರಸ್ತೆ ಬದಿಗಳಲ್ಲಿ ಸುರಿಯುತ್ತಿರುವುದು ಎದ್ದು ಕಾಣುತ್ತಿದೆ.
 
ಗೊತ್ತಿದ್ದರೂ ತಿರುಗಿ ನೋಡಿಲ್ಲ: ಈ ಹಿಂದೆ ಹಲವು ಬಾರಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಜಿಲ್ಲಾಧಿಕಾರಿಗಳು ಸಹ ಇತ್ತಕಡೆ ಗಂಭೀರವಾಗಿ ಗಮನ ಕೊಡುತ್ತಿಲ್ಲ. ನಗರಸಭೆ ಅಧಿಕಾರಿಗಳಿಗೂ ಹಲವು ಬಾರಿ ಗಮನಕ್ಕೆ ತಂದರೂ ಅತ್ತ ಕಡೆಗೆ ತಿರುಗಿ ನೋಡಿಲ್ಲ ಎಂದು ನಗರದ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಸ್ಥಳೀಯ ನಿವಾಸಿಗಳ ಅಳಲು: ರಸ್ತೆ ಬದಿಯಲ್ಲಿ ಘನ ತ್ಯಾಜ್ಯ ವಸ್ತುಗಳನ್ನು ಸುರಿದು ಹೋಗುತ್ತಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮೊದಲೇ ರಸ್ತೆ 243 ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಳ್ಳದೇ ರಸ್ತೆ ಚಿಕ್ಕದಾಗಿದೆ. ಇದೇ ರಸ್ತೆಯಲ್ಲಿ ಮಣ್ಣು ಹಾಗೂ ಹಳೆ ಕಟ್ಟಡಗಳ ಅವಶೇಷಗಳನ್ನು ರಾಶಿ ರಾಶಿ ಎಸೆದು ಹೋಗುವುದರಿಂದ ಇಡೀ ಪ್ರದೇಶ ಅನೈರ್ಮಲ್ಯಕ್ಕೆ ತುತ್ತಾಗುತ್ತಿದೆ ಎಂಬ ಅಳಲು ಸ್ಥಳೀಯ ನಿವಾಸಿಗಳದ್ದಾಗಿದೆ. 

ವಿಪರ್ಯಾಸದ ಸಂಗತಿ ಎಂದರೆ ಪ್ರತಿ ನಿತ್ಯ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದೇ ರಸ್ತೆಯಲ್ಲಿ ಬಂದು ಹೋಗುತ್ತಾರೆ. ಆದರೆ ಈ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಪಕ್ಕದಲ್ಲಿ ವಾಸವಾಗಿರುವ ಚಾಮರಾಜಪೇಟೆಯ ನಿವಾಸಿ ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.

ಇದೇ ರಸ್ತೆಯಲ್ಲಿ ಸರ್‌ಎಂವಿ ಸ್ಮಾರಕ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಖಾಸಗಿ ಕಾಲೇಜು ಕಾರ್ಯನಿರ್ವಹಿಸುತ್ತಿದೆ. ಗಾರ್ಮೆಂಟ್ಸ್‌ ಕೂಡ ಇದ್ದು, ನಿತ್ಯ ಇದೇ ರಸ್ತೆಯಲ್ಲಿ ನೂರಾರು ಮಹಿಳೆಯರು ನಡೆದುಕೊಂಡು ಹೋಗಬೇಕಿದೆ. ಆದರೆ ರಸ್ತೆ ಬದಿ ಸುರಿದು ಹೋಗಿರುವ ಘನ ತ್ಯಾಜ್ಯ ವಸ್ತುಗಳು ಪಾದಚಾರಿಗಳಿಗೆ ಇನ್ನಿಲ್ಲದ ಕಿರಿಕಿರಿ ಸೃಷ್ಟಿಸುತ್ತಿವೆ.

ಒಟ್ಟಿನಲ್ಲಿ ಜಿಲ್ಲಾಡಳಿತ ಭವನಕ್ಕೆ ತೆರಳುವ ವಾಹನ ಸವಾರರಿಗೆ, ಪಾದಚಾರಿಗಳಿಗೆ ಶಿಡ್ಲಘಟ್ಟ ರಸ್ತೆ ಮುಳ್ಳಿನ ಹಾದಿಯಾಗಿದೆ. ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಮಹಿಳಾ ಪದವಿ ಕಾಲೇಜುವರೆಗೂ ರಾಶಿ ರಾಶಿ ಕಸದಂತೆ ಕಾಣುವ ಘನ ತ್ಯಾಜ್ಯ ವಸ್ತುಗಳು ಹಾಗೂ ಹಳೆ ಕಟ್ಟಡಗಳ ಅವಶೇಷಗಳು ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ ಒಂದು ರೀತಿ ಡಂಪಿಂಗ್‌ ಯಾರ್ಡ್‌ ಆಗುತ್ತಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. 

ಯಾರೋ ಮಧ್ಯ ರಾತ್ರಿಯಲ್ಲಿ ಹಳೆ ಕಟ್ಟಡಗಳ ಅವಶೇಷಗಳನ್ನು ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಬಂದು ರಸ್ತೆ ಅಕ್ಕಪಕ್ಕ ಸುರಿದು ಹೋಗುತ್ತಿರುವುದು ಪತ್ತೆ ಮಾಡುವುದು ನಗರಸಭೆಗೆ ಕಷ್ಟವಾಗಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಲು ನಗರಸಭೆ ಚಿಂತನೆ ನಡೆಸಲಿದೆ. ರಸ್ತೆ ಬದಿ ಘನ ತ್ಯಾಜ್ಯ ವಸ್ತುಗಳನ್ನು ಸುರಿಯುವುದರಿಂದ ನಗರದ ಪರಿಸರಕ್ಕೆ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗಲಿದೆ. ಈ ಬಗ್ಗೆ ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ.
●ಉಮಾಕಾಂತ್‌, ನಗರಸಭೆ ಆಯುಕ್ತರು 

ರಾಶಿಗಳ ಮಧ್ಯೆ ಕೊಳೆತ ನಾಯಿ ಶವ ಘನ ತ್ಯಾಜ್ಯ ವಸ್ತುಗಳ ರಾಶಿಗಳ ಮಧ್ಯೆ ಸತ್ತ ಪ್ರಾಣಿ, ಪಕ್ಷಿಗಳ ಅದರಲ್ಲೂ ನಾಯಿಗಳ ಮೃತದೇಹಗಳನ್ನು ಸಾರ್ವಜನಿಕರು ಎಸೆದು ಹೋಗುತ್ತಿರುವುದ ರಿಂದ ನಿತ್ಯ ಇದೇ ರಸ್ತೆಯಲ್ಲಿ ಸಂಚರಿ ಸುವ ವಾಹನ ಸವಾರರು ಹಾಗೂ ಪಾದಚಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಮೂಗು ಮುಚ್ಚಿ ಕೊಂಡು ತಿರುಗಾಡುವ ದುಸ್ಥಿತಿ ನಿರ್ಮಾಣವಾಗಿದೆ. ಆದರೂ ನಗರಸಭೆ ಅಧಿಕಾರಿಗಳು ಸಮಸ್ಯೆಯ ಗಂಭೀರತೆ ಯನ್ನು ಅರಿಯುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

●ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.