ಜೈಶ್‌ ರಕ್ಕಸರ ಅಟ್ಟಹಾಸಕ್ಕೆ ಜಿಲ್ಲಾದ್ಯಂತ ಆಕ್ರೋಶ

Team Udayavani, Feb 16, 2019, 7:26 AM IST

jash.jpg

ರಾಮನಗರ: ಜೈಶ್‌ ರಕ್ಕಸರ ಆಟ್ಟಹಾಸಕ್ಕೆ 43 ಯೋಧರು ಬಲಿಯಾದ ಘಟನೆಗೆ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜನಪರ ಸಂಘಟನೆಗಳು ಹುತಾತ್ಮರಾದ ಯೋಧರ ಪರ ಶ್ರದ್ಧಾಂಜಲಿ ಸಭೆಗಳನ್ನು ಅಯೋಜಿಸಿದ್ದರು. ಈ ವೇಳೆ ಉಗ್ರರ ಕೃತ್ಯವನ್ನು ತೀವ್ರವಾಗಿ ಖಂಡಿಸಿದರು. ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಉತ್ತರ ನೀಡಬೇಕು ಎಂದು ನಾಗರೀಕರು ಆಗ್ರಹಿಸಿದರು. 

ರಾಮನಗರದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಾಲದಯ ಮುಂದೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಹುತಾತ್ಮ ಯೋಧರ ಆತ್ಮಗಳಿಗೆ ಶಾಂತಿ ಕೋರಿದರು. ನಗರದ ಮುಖ್ಯ ರಸ್ತೆಯಲ್ಲಿ ವ್ಯಾಪಾರಿ ಉದಯ್‌ ಸೇರದಿಂತೆ ನಗರದ ಕೆಲವೆಡೆ ಅಂಗಡಿಗಳ ಮಾಲೀಕರು ಫ‌ಲಕಗಳನ್ನು ಪ್ರದರ್ಶಿಸಿ ವೀರ ಯೋಧರಿಗೆ ನುಡಿ ನಮನ ಸಲ್ಲಿಸಿದರು. ಮಂಡ್ಯ ಮೂಲದ ಯೋಧ ಗುರು ಅವರ ಭಾವಚಿತ್ರವನ್ನು ಪ್ರದರ್ಶಿಸಿ ನಮನ ಅರ್ಪಿಸಿದರು. 

ಬಿ.ಎಸ್‌.ಯಡಿಯೂರಪ್ಪ ಭಾಗಿ: ಸಂಜೆ ವಿವೇಕಾನಂದ ನಗರದ ಬಳಿ ಇರುವ ವಿವೇಕಾನಂದ ಪ್ರತಿಮೆಯ ಬಳಿ ಕೆಲವು ಸಂಘಟನೆಗಳು ಆಯೋಜಸಿದ್ದ ನುಡಿ ನಮನ ಸಭೆಗೆ ಮೈಸೂರು ಕಡೆಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮೊಂಬತ್ತಿ ಹಚ್ಚಿ ವೀರ ಯೋಧರ ಕೆಲಕಾಲ ಮೌನ ಆಚರಿಸುವುದರ ಮೂಲಕ ಮೃತ ಯೋಧರ ಆತ್ಮಕ್ಕೆ ಶಾಂತಿ ಕೋರಿದರು. 

ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್‌, ಪ್ರಮುಖರಾದ ಎಸ್‌.ಆರ್‌.ನಾಗರಾಜ್‌, ಜಿ.ವಿ.ಪದ್ಮನಾಭ, ಚಂದ್ರಶೇಖರ ರೆಡ್ಡಿ, ಪ್ರವೀಣ್‌ ಗೌಡ, ಚಂದನ್‌ ಮತ್ತು ಪ್ರಮುಖರು ಭಾಗವಹಿಸಿದ್ದರು. 

ವ್ಯಾಪಾರಿಗಳಿಂದಲೂ ಯೋಧರಿಗೆ ನಮನ: ಶುಕ್ರವಾರ ಸಂಜೆ ನಗರದ ಮುಖ್ಯರಸ್ತೆಯ ವೃತ್ತದಲ್ಲಿ ಜಮಾಯಿಸಿದ ನಗರದ ವ್ಯಾಪಾರಿ ಮಳಿಗೆಗಳ ಮಾಲೀಕರು ಮೋಂಬತ್ತಿ ಬೆಳಗಿಸಿ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಿದರು. ಇದೇ ವೇಳೆ ಮಾಲೀಕರು ಪಾಕ್‌ ಪ್ರಚೋದಿತ ದಾಳಿಗೆ ಕೇಂದ್ರ ಸರ್ಕಾರ ತಕ್ಕ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. 

ಶಾಲೆಗಳಲ್ಲಿ ಮೌನಾಚರಣೆ: ನಗರದ ವಾಸವಿ ವಿದ್ಯಾನಿಕೇತನ ಶಾಲೆ, ಬಿಜಿಎಸ್‌ ಅಂಧರ ಶಾಲೆ ಸೇರಿದಂತೆ ಜಿಲ್ಲೆ ವಿವಿಧ ಶಾಲೆ, ಕಾಲೇಜುಗಳು ವಿದ್ಯಾರ್ಥಿಗಳು ಹುತಾತ್ಮ ಯೋಧರಿಗಾಗಿ ಒಂದು ನಿಮಿಷಿದ ಮೌನವನ್ನು ಆಚರಿಸಿದರು.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.