ಅಭ್ಯರ್ಥಿಯಲ್ಲ ಪಕ್ಷ ಮುಖ್ಯ: ಅಶೋಕ


Team Udayavani, Feb 18, 2019, 6:36 AM IST

gul-3.jpg

ಕಲಬುರಗಿ: ಕಲಬುರಗಿ ಲೋಕಸಭೆ ಅಭ್ಯರ್ಥಿ ಯಾರು ಎನ್ನುವ ಕುರಿತು ತಲೆ ಕೆಡಿಸಿಕೊಳ್ಳಬೇಡಿ, ಇದಕ್ಕೆಲ್ಲ ಹೈಕಮಾಂಡ್‌ ತಲೆ ಕೆಡಿಸಿಕೊಳ್ಳುತ್ತದೆ. ಅಲ್ಲದೇ ಈ ಕುರಿತು ಚಿಂತನೆಯೂ ನಡೆದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ ಹೇಳಿದರು.

ಪ್ರಧಾನಿ ನರೇಂದ್ರ ಆಗಮನ ಹಿನ್ನೆಲೆಯಲ್ಲಿ ರವಿವಾರ ಎಚ್‌ ಕೆಸಿಸಿಐ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಶಾಸಕರ, ಮುಖಂಡರ, ಪದಾಧಿಕಾರಿಗಳ ಹಾಗೂ ಅಭಿಮಾನಿಗಳ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

 ಅಭ್ಯರ್ಥಿಗಿಂತ ಪಕ್ಷ ನೋಡಿ ಹೆಚ್ಚಿನ ಜನ ಮತ ಚಲಾಯಿಸುತ್ತಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ ಆರು ಸಾವಿರ ಮತ ಪಡೆದಿದ್ದರು. ಆದರೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದಿದ್ದರೂ ಪಕ್ಷಕ್ಕೆ 20 ಸಾವಿರ ಮತಗಳು ಬಂದಿದ್ದವು. ಆದ್ದರಿಂದ ಅಭ್ಯರ್ಥಿ ಬಗ್ಗೆ ಎಲ್ಲೂ ಚಕಾರ ಎತ್ತಬೇಡಿ ಎಂದು ಕಾರ್ಯಕರ್ತರಿಗೆ ತಾಕೀತು ಮಾಡಿದರು.

ದೇಶದಲ್ಲಿ ಮತ್ತೋಮ್ಮೆ ಪ್ರಧಾನಿ ನರೇಂದ್ರ ಮೋದಿ ಎನ್ನುವ ಸಂಕಲ್ಪ ನಿಟ್ಟಿನಲ್ಲಿ ಬರುವ ಮಾರ್ಚ್‌ 1ರಂದು ಕಲಬುರಗಿ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಬೃಹತ್‌ ರ್ಯಾಲಿ ಹಮ್ಮಿಕೊಂಡಿದೆ ಎಂದು ರ್ಯಾಲಿ ಹಾಗೂ ಸಮಾವೇಶದ ಉಸ್ತುವಾರಿ ವಹಿಸಿಕೊಂಡಿರುವ ಅವರು ತಿಳಿಸಿದರು.

ರ್ಯಾಲಿ ಐತಿಹಾಸಿಕ ಎನ್ನುವಂತೆ ಯಶಸ್ವಿಯಾಗಬೇಕು. ಈ ನಿಟ್ಟಿನಲ್ಲಿ ಕಲಬುರಗಿ, ಬೀದರ್‌ ಹಾಗೂ ಯಾದಗಿರಿ ಜಿಲ್ಲೆಯ ಆಯಾ ವಿಧಾನಸಭೆ ಕ್ಷೇತ್ರದ ಸದಸ್ಯರು, ಮಾಜಿ ಶಾಸಕರು ಜತೆಗೆ ಪಕ್ಷದ ಅಧ್ಯಕ್ಷರು-ಸಂಘಟಕರು ತಮ್ಮ ಶಕ್ತಿ ಮೀರಿ ಜನತೆಯನ್ನು ಕರೆ ತರಬೇಕು ಎಂದರು.

ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗಿಂತ ಸಾರ್ವಜನಿಕರೇ ದೇಶದ ಭದ್ರತೆ ದೃಷ್ಟಿಯಿಂದ ಮೋದಿ ಇನ್ನೊಮ್ಮೆ ಪ್ರಧಾನಿ ಆಗಬೇಕು ಎನ್ನುತ್ತಿದ್ದಾರೆ. ಹೀಗಾಗಿ ಪಕ್ಷದವರೆಲ್ಲರೂ ಸ್ವಲ್ಪವೂ ಹಿಂದೆ ಬೀಳಬಾರದು. ಆದ್ದರಿಂದ ಇಂದಿನಿಂದ ಮಾರ್ಚ್‌ 1ರ ವರೆಗೆ ವಿಶ್ರಮಿಸದೇ ಎಲ್ಲ ಹಂತದ ಸಿದ್ಧತೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕಟಿಂಗ್ಸ್‌, ಬ್ಯಾನರ್‌, ಜಾಹೀರಾತು ಬಳಸಬೇಕೆಂದು ಸಲಹೆ ನೀಡಿದರು.

ಸಭೆಯಲ್ಲೇ ಕಲಬುರಗಿ, ಬೀದರ್‌ ಹಾಗೂ ಯಾದಗಿರಿ ಜಿಲ್ಲೆಯ ಕ್ಷೇತ್ರವಾರು ಜನರು ಮೋದಿ ರ್ಯಾಲಿಗೆ ಬರುವವರ ಸಂಖ್ಯೆಯನ್ನು ತಾಳೆ ಹಾಕಲಾಯಿತು. ಒಂದೂವರೆ ಲಕ್ಷ ಜನರು ಬರುವ ಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು.

ಸಂಸದ ಭಗವಂತ ಖೂಬಾ, ಶಾಸಕರಾದ ರಘುನಾಥ ಮಲ್ಕಾಪುರೆ, ಬಿ.ಜಿ. ಪಾಟೀಲ, ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ್‌ ತೇಲ್ಕೂರ, ಬಸವರಾಜ ಮತ್ತಿಮಡು, ವೆಂಕಟರೆಡ್ಡಿ ಮುದ್ನಾಳ, ಪ್ರಭು ಚವ್ಹಾಣ, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸುವರ್ಣಾ ಮಲಾಜಿ, ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ, ಬಾಬುರಾವ್‌ ಚಿಂಚನಸೂರ, ಸುನೀಲ ವಲ್ಲಾಪುರೆ, ಬಾಬುರಾವ ಚವ್ಹಾಣ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಟಾಳ, ವಾಲ್ಮೀಕಿ ನಾಯಕ, ಅಮರನಾಥ ಪಾಟೀಲ್‌, ಮುಖಂಡರಾದ ಚಂದು ಪಾಟೀಲ, ಡಿ.ಕೆ. ಸಿದ್ರಾಮ, ನಾಗರತ್ನ ಕುಪ್ಪಿ, ಬೀದರ್‌ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ ಮುಂತಾದವರಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಸ್ವಾಗತಿಸಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಬಿರಾದಾರ ಕಮಲಾಪುರ ನಿರೂಪಿಸಿದರು.

ಪೂರ್ವಭಾವಿ ಸಭೆ ನಂತರ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ರ್ಯಾಲಿ ಆಯೋಜಿಸುವ ಸ್ಥಳವನ್ನು ಅದರಲ್ಲೂ ಪ್ರಮುಖವಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪರೇಡ್‌ ಮೈದಾನದ ಸ್ಥಳವನ್ನು ಆರ್‌. ಅಶೋಕ ವೀಕ್ಷಿಸಿದರು. ಪೊಲೀಸ್‌ ಪರೇಡ್‌ ಮೈದಾನವೇ ಅತ್ಯಂತ ಸುರಕ್ಷತೆ ಹಾಗೂ ಸೂಕ್ತವಾಗಿದೆ ಎಂದು ಒಮ್ಮತಕ್ಕೆ ಬರಲಾಯಿತು

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.