ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

Team Udayavani, Feb 19, 2019, 12:17 PM IST

cta-1.jpg

ಚಿತ್ರದುರ್ಗ: ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಮಾ. 3 ರಿಂದ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 20 ಪರೀಕ್ಷಾ ಜಿಲ್ಲೆಯ ಒಟ್ಟು 124 ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಗಮವಾಗಿ ಹಾಗೂ ಕಟ್ಟುನಿಟ್ಟಾಗಿ ನಡೆಯಬೇಕು. 13,309 ರೆಗ್ಯುಲರ್‌, 2372 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 339 ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಒಟ್ಟು 16,020 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಹಿರಿಯೂರು ತಾಲೂಕಿನಲ್ಲಿ 3, ಹೊಸದುರ್ಗ 3, ಹೊಳಲ್ಕೆರೆ 2, ಚಿತ್ರದುರ್ಗ 7, ಚಳ್ಳಕೆರೆ 3 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 2 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳಿವೆ. ಈ ಪೈಕಿ ಹಿರಿಯೂರಿನ ಸರ್ಕಾರಿ ಪದವಿಪೂರ್ವ ಕಾಲೇಜು, ಚಿತ್ರದುರ್ಗದ ಕೆ.ಎಂ.ಎಸ್‌ ಪಪೂ ಕಾಲೇಜು ಮತ್ತು ಪರಶುರಾಂಪುರದ ಸರ್ಕಾರಿ ಪಿಯು ಕಾಲೇಜನ್ನು ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪ್ರಶ್ನೆಪತ್ರಿಕೆಗಳ ದಾಸ್ತಾನು ಹಾಗೂ ವಿತರಣೆ ಅತ್ಯಂತ ಮಹತ್ವದ್ದಾಗಿದೆ. ಇದರ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಇಲಾಖೆಯಿಂದ ಪೂರೈಸಲಾಗುವ ಪ್ರಶ್ನೆಪತ್ರಿಕೆಗಳನ್ನು ಪಡೆದು ಖಜಾನೆಯಲ್ಲಿ ಠೇವಣಿಯಾಗಿರಿಸುವುದು, ನಂತರ ಅಲ್ಲಿಂದ ಪಡೆಯುವುದು ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ನಡೆಯಬೇಕು ಹಾಗೂ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಬೇಕು. ಪರೀಕ್ಷಾ ದಿನಗಳಂದು ಆಯಾ ವಿಷಯದ ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪಿಸುವ ಜವಾಬ್ದಾರಿ ಮಾರ್ಗಾಧಿಕಾರಿಗಳಿಗೆ ನೀಡಲಾಗಿದೆ. ಪ್ರಶ್ನೆಪತ್ರಿಕೆ ಸಾಗಿಸುವಾಗ ಸಶಸ್ತ್ರ ಪೊಲೀಸ್‌ ಬಂದೋಬಸ್ತ್ ಕಡ್ಡಾಯವಾಗಿ ಮಾಡಬೇಕು. ಇದಕ್ಕಾಗಿ ಅಗತ್ಯ ವಾಹನದ
ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

 ಪರೀಕ್ಷಾ ಕೇಂದ್ರಗಳಲ್ಲಿ ಗಾಳಿ, ಬೆಳಕಿನ ವ್ಯವಸ್ಥೆ, ಆಸನದ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ನಕಲು ತಡೆಗಟ್ಟಲು ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರ, ಕಾರಿಡಾರ್‌ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾವನ್ನು ಕಡ್ಡಾಯವಾಗಿ ಅಳವಡಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪ್ರತಿ ವಿಷಯದ ಪರೀಕ್ಷೆಗಳಿಗೂ ಆಯಾ ವಿಷಯದ ಶಿಕ್ಷಕರನ್ನು ಹೊರತುಪಡಿಸಿ
ಬೇರೆ ವಿಷಯದ ಶಿಕ್ಷಕರನ್ನು ಪರೀಕ್ಷಾ ಕೊಠಡಿಯ ಮೇಲ್ವಿಚಾರಕರನ್ನಾಗಿ ನೇಮಿಸಬೇಕು. ಯಾವುದೇ ಪರೀಕ್ಷಾ ಕೇಂದ್ರದಲ್ಲಿ ನಕಲು ಅಥವಾ ಇನ್ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ ದೂರುಗಳು ಬಂದಲ್ಲಿ ಸಂಬಂಧಪಟ್ಟ ಕೊಠಡಿಯ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಕೆಲವು ಕಾಲೇಜುಗಳಲ್ಲಿ ಉತ್ತರಪತ್ರಿಕೆ ಕದಿಯುವ ಬಗ್ಗೆ ದೂರು ಕೇಳಿ ಬಂದಿದೆ. ಹಾಗಾಗಿ ಈ ವರ್ಷ ಉತ್ತರಪತ್ರಿಕೆಗಳ ದಾಸ್ತಾನಿಗೂ ಸೂಕ್ತ ಭದ್ರತೆ ಮಾಡಬೇಕು. ಆಯಾ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜೊತೆಗೆ ಗೃಹರಕ್ಷಕ ದಳದ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಬೇಕು. ಉತ್ತರಪತ್ರಿಕೆಗಳ ದಾಸ್ತಾನು ಕೊಠಡಿಗೆ ಕಡ್ಡಾಯವಾಗಿ ಸಿಸಿ ವ್ಯವಸ್ಥೆ ಅಳವಡಿಸಬೇಕು ಎಂದು ಸೂಚನೆ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶೋಭಾ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ನಕಲು ಪ್ರಕರಣಗಳು ಹಾಗೂ ಇತರೆ ವಿಷಯಗಳ ಆಧಾರದಲ್ಲಿ ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಪರಿಗಣಿಸಲಾಗಿದೆ. ಈ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್‌ ಬಂದೋಬಸ್ತ್ ಒದಗಿಸುವುದರ ಜೊತೆಗೆ ಪ್ರತ್ಯೇಕವಾಗಿ ಹಿರಿಯ ಅಧಿಕಾರಿಗಳನ್ನೊಳಗೊಂಡ ಜಾಗೃತ ದಳವನ್ನು ನಿಯೋಜಿಸಲಾಗುವುದು.
 ವಿನೋತ್‌ ಪ್ರಿಯಾ, ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.