ಇಂದು ಸಿದ್ಧಗಂಗಾ ಶ್ರೀಗಳ ತಿಂಗಳ ಪುಣ್ಯಸ್ಮರಣೆ


Team Udayavani, Feb 21, 2019, 10:32 AM IST

tmk-1.jpg

ತುಮಕೂರು: ಶ್ರೀಕ್ಷೇತ್ರ ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಕರ್ನಾಟಕ ರತ್ನ ಡಾ. ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾಗಿ ಒಂದು ತಿಂಗಳು ಕಳೆದಿರುವ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಶ್ರೀಗಳ ಒಂದು ತಿಂಗಳ ಪುಣ್ಯ ಸ್ಮರಣೆ ಮಾಡಲು ಸಿದ್ಧತೆಗಳು ನಡೆದಿವೆ.

ಫೆ.21ಕ್ಕೆ ಶ್ರೀಗಳು ಲಿಂಗೈಕ್ಯರಾಗಿ ಒಂದು ತಿಂಗಳು ತುಂಬುತ್ತಿದೆ. ಇದರ ನಿಮಿತ್ತ ಶ್ರೀಗಳ ಗದ್ದುಗೆಯಲ್ಲಿ ವಿವಿಧ ಪೂಜೆ ಆಯೋಜನೆ ಮಾಡಲಾಗಿದೆ. ಗುರುವಾರ ಬೆಳಗ್ಗೆ 5 ಗಂಟೆಯಿಂದಲೇ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. 

ಬೆಳಗ್ಗೆ ಶ್ರೀಗಳ ಗದ್ದುಗೆಗೆ ಅಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ಸೇರಿ ದಂತೆ ವಿವಿಧ ಧಾರ್ಮಿಕ ಕಾರ್ಯ ನಡೆಸಲು ಈಗಾಗಲೇ ಸಿದ್ಧತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಒಂದು ತಿಂಗಳ ಕಾರ್ಯಕ್ಕಾಗಿ ಶ್ರೀಗಳ ಗದ್ದುಗೆಯ ಮುಂದೆ ಹಸಿರು ಚಪ್ಪರ ಹಾಕಿ, ಹೂವಿನ ಅಲಂಕಾರ ಮಾಡಲು ತಯಾರಿ ನಡೆದಿದೆ. ಮಠದ ಭಕ್ತರಿಗೆ ದಾಸೋಹದ ವ್ಯವಸ್ಥೆಗೆ ಸಿದ್ಧತೆ ಮಾಡಲಾಗಿದೆ. ಒಂದು ತಿಂಗಳ ಪೂಜೆಗೆ ನಾಡಿನ ವಿವಿಧ ಮಠಾಧೀಶರು ಬರುವ ಸಾಧ್ಯತೆ ಇದೆ¨

 26ರಿಂದ ಸಿದ್ಧಲಿಂಗೇಶ್ವರಸ್ವಾಮಿ ಜಾತ್ರೆ ತುಮಕೂರು: ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಫೆ.26 ರಿಂದ ಮಾ.7 ರವರೆಗೆ ಜರುಗಲಿದ್ದು, ಜಾತ್ರೆ ಪ್ರಯುಕ್ತ ಮಾ.5ರಂದು ರಥೋತ್ಸವ ಏರ್ಪಡಿ ಸಲಾಗುವುದು ಎಂದು ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಫೆ.26ರ ರಾತ್ರಿ ಗೋಸಲ ಸಿದ್ಧೇಶ್ವರಸ್ವಾಮಿ ಉತ್ಸವ, ಶೂನ್ಯ ಸಿಂಹಾಸನರೋಹಣೋತ್ಸವ, ವೃಷಭ ವಾಹನ ಉತ್ಸವಗಳು ನಡೆಯಲಿದ್ದು, ಫೆ.27ರಂದು ನಂದಿ ವಾಹನ ಹಾಗೂ ಗಜ ವಾಹನ, ಫೆ.28ರಂದು ಹುಲಿವಾಹನ ಹಾಗೂ ಸಿಂಹ ವಾಹನ, ಮಾ.1ರಂದು ಹುತ್ತದ ವಾಹನ ಹಾಗೂ ಶೇಷವಾಹನ, ಮಾ.2 ರಂದು ಅಶ್ವವಾಹನ ಹಾಗೂ ನವಿಲುವಾಹನ, ಮಾ.3ರಂದು ರಾವಣವಾಹನ, ಬಿಲ್ವವೃಕ್ಷ ವಾಹನ ಹಾಗೂ ನವರಂಗ ಪಲ್ಲಕ್ಕಿ
ಉತ್ಸವ, ಮಾ.4ರಂದು ಮಹಾಶಿವರಾತ್ರಿ ಪ್ರಯುಕ್ತ ಬೆಳ್ಳಿ ರಥೋತ್ಸವ ಹಾಗೂ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿವೆ. ಅಲ್ಲದೇ ಮಾ.5ರಂದು ರಥೋತ್ಸವ ಹಾಗೂ ರುದ್ರಾಕ್ಷಿ ಮಂಟಪೋತ್ಸವ, ಮಾ.6ರಂದು ಬೆಳ್ಳಿಪಲ್ಲಕ್ಕಿ ಉತ್ಸವ, ಮಾ.7ರಂದು ತೆಪ್ಪೋತ್ಸವ, ಪಂಚಬ್ರಹ್ಮೋತ್ಸವ ಪೂಜೆ ನಡೆಯಲಿವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.