ಸಿದ್ದು ಅಪ್ಪನ ಆಣೆಗೂ ಮೋದಿಯೇ ಮುಂದಿನ ಪಿಎಂ
Team Udayavani, Feb 23, 2019, 12:30 AM IST
ಬೆಳಗಾವಿ: ಸಿದ್ದರಾಮಯ್ಯ ಅವರ ಅಪ್ಪನ ಆಣೆಗೂ ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಆಗುತ್ತಾರೆ. ಇದು ನೂರಕ್ಕೆ ನೂರರಷ್ಟು ಖಚಿತ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದರು.
ಪತ್ರಕರ್ತರ ಜತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುತ್ತಾರೆ. ಅವರ ಅಪ್ಪನಾಣೆಗೂ ಪ್ರಧಾನಿ ಆಗುವುದಿಲ್ಲ ಎಂದು ಟೀಕೆ ಮಾಡುತ್ತಾರೆ. ಆದರೆ ನಾನು ಹೇಳುತ್ತೇನೆ. ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಆಗುತ್ತಾರೆ. ಇದು ನನ್ನ ಅಪ್ಪನ ಆಣೆಯಲ್ಲ ಎಂದು ತಿರುಗೇಟು ನೀಡಿದರು.
ಲೋಕಸಭೆ ಚುನಾವಣೆ ವೇಳೆ ನಿಮಗೆ ಬಿಜೆಪಿ ಟಿಕೆಟ್ ತಪ್ಪಿಸಲು ಪ್ರಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ವಿಜಯಪುರದಲ್ಲಿ ನನ್ನ ಬಿಟ್ಟು ಬೇರೆ ಯಾರಿದ್ದಾರೆ. ಈ ಟಿಕೆಟ್ ತಪ್ಪಿಸುವ ವಿಚಾರ ನನಗೆ ಗೊತ್ತಿಲ್ಲ. ನಾನು ಮತ್ತೆ ಗೆದ್ದು ಬರುತ್ತೇನೆ, ಮತದಾರರು ನನ್ನನ್ನೇ ಗೆಲ್ಲಿಸುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು