ಹುಲಿ ಯೋಜನೆಗೆ ಬೆಟ್ಟ ಸೇರಿಸಬೇಡಿ


Team Udayavani, Feb 23, 2019, 7:29 AM IST

huli-yoj.jpg

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರಬೆಟ್ಟ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಅರಣ್ಯ ಎಂದು ಘೋಷಿಸಬಾರದೆಂದು ಒತ್ತಾಯಿಸಿ ಜಿಲ್ಲಾ ಬುಡಕಟ್ಟು ಗಿರಿಜನರ ಅಭಿವೃದ್ಧಿ ಸಂಘದಿಂದ ನಗರದಲ್ಲಿ ಪ್ರತಿಭಟಿಸಲಾಯಿತು.

ನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟಿಸಿದರು. ಸಾಂಪ್ರದಾಯಿಕ ಉಡುಗೆ ತೊಡುಗೆ ಧರಿಸಿ, ಬುಡಕಟ್ಟು ನೃತ್ಯ ಪ್ರದರ್ಶಿಸಿದರು.

3,500 ಕುಟುಂಬ: ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಮುಖಂಡ ಡಾ. ಸಿ. ಮಾದೇಗೌಡ ಮಾತನಾಡಿ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮ ವ್ಯಾಪ್ತಿಗೆ ಬೈಲೂರು, ಪಿ.ಜಿ.ಪಾಳ್ಯ, ಲೊಕ್ಕನಹಳ್ಳಿ, ದಿನ್ನಹಳ್ಳಿ, ಶಾಗ್ಯ, ಮೀಣ್ಯಂ, ಪೊನ್ನಾಚಿ, ಮಾರ್ಟಳ್ಳಿ ಗ್ರಾಮಗಳು ಒಳಪಡಲಿವೆ. ಈ ಎಲ್ಲಾ ಗ್ರಾಮಗಳಲ್ಲಿ 3,500 ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿನ ಜನತೆಗೆ ಶತಮಾನಗಳಿಂದಲೂ ಗೆಡ್ಡೆಗೆಣಸು, ಸೊಪ್ಪು, ಸೆದೆ ಸಂಗ್ರಹ ಮಾಡಿ, ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಅರಣ್ಯವಾಗಿ ಘೋಷಣೆ ಮಾಡಲು ರಾಷ್ಟ್ರೀಯ ಹುಲಿ ಯೋಜನಾ ಪ್ರಾಧಿಕಾರಕ್ಕೆ ವರದಿ ಕಳುಹಿಸಿದೆ. ಇದು ಸರಿಯಲ್ಲ ಎಂದು ದೂರಿದರು. ಪರಿಸರವಾದಿಗಳೆಂದು ಹೇಳಿಕೊಂಡು ಕೆಲವರು ಲಾಭದ ಉದ್ದೇಶದಿಂದ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳು ಜಾಸ್ತಿಯಿವೆ ಎಂದು ಸುಳ್ಳು ವರದಿ ನೀಡಿ, ಅರಣ್ಯವಾಸಿಗಳಿಗೆ ತೊಂದರೆಯುಂಟು ಮಾಡುತ್ತಿದ್ದಾರೆ ಎಂದರು.

ಸಭೆ ಕರೆಯಿರಿ: ಪ್ರಾಧಿಕಾರಕ್ಕೆ ವರದಿ ಕಳುಹಿಸಿಕೊಡುವ ಮೊದಲು ರಾಜ್ಯ ಸರ್ಕಾರವು ಅರಣ್ಯದಂಚಿನಲ್ಲಿರುವ ಗ್ರಾಮ ಅರಣ್ಯಸಮಿತಿ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿತ್ತು. ಗ್ರಾಮ ಅರಣ್ಯಸಮಿತಿ ಜತೆ ಚರ್ಚಿಸದೇ ಮಹದೇಶ್ವರ ಬೆಟ್ಟವನ್ನು ಹುಲಿ ಯೋಜನೆಗೆ ಸೇರಿಸಲು ಹೊರಟಿರುವುದರಿಂದ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗುತ್ತದೆ ಎಂದರು.

2006 ರ ಅರಣ್ಯಹಕ್ಕು ಕಾಯಿದೆಯಡಿ ಸೋಲಿಗರ 533 ಕುಟುಂಬಗಳಿಗೆ 1143 ಎಕರೆ ಭೂಮಿಯನ್ನು ಒಡೆತನಕ್ಕೆ ಲಭ್ಯವಿದೆ.  25 ಅರಣ್ಯ ಹಕ್ಕು ಸಮಿತಿಗಳು ಸಮುದಾಯ ಅರಣ್ಯ ಹಕ್ಕುಪತ್ರ ಪಡೆದಿವೆ. ಈಗಾಗಲೇ ಅರಣ್ಯ ಸಂರಕ್ಷಣೆ, ನಿರ್ವಹಣೆ, ಕಿರುಅರಣ್ಯ ಉತ್ಪನ್ನ ಸಂಗ್ರಹ ಮಾಡುವ ಮೂಲಕ ತಮ್ಮ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.  

ಇಂಥ ಪರಿಸ್ಥಿತಿಯಲ್ಲಿ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆಯಾದರೆ ನಮ್ಮ ಕಿರು ಅರಣ್ಯ ಉತ್ಪನ್ನ ಸಂಗ್ರಹಕ್ಕೆ ಅವಕಾಶ ಇರುವುದಿಲ್ಲ. ನಮ್ಮನ್ನು ಈಗಿರುವ ಜಾಗದಿಂದ ಸ್ಥಳಾಂತರಿಸುವ ಕೆಲಸವೂ ನಡೆಯಲಿದೆ. ಆದ್ದರಿಂದ ಮದದೇಶ್ವರಬೆಟ್ಟ ವನ್ಯಧಾಮವನ್ನು ಹುಲಿ ಯೋಜನೆಗೆ ಸೇರಿಸಬಾರದು ಎಂದು ಆಗ್ರಹಿಸಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲಾ ಪ್ರತಿಭಟನಾನಿರತರು ಬಾಯಿ, ತಲೆಗೆ ಹಸಿರು ಬಣ್ಣದ ಪಟ್ಟಿ ಕಟ್ಟಿಕೊಂಡಿದ್ದರು. ಗಿರಿಜನರ ತಂಡವೊಂದು ತಲೆಗೆ ಹಸಿರು ಎಲೆಯ ಕಿರೀಟ, ಮೈಗೆ ವಿಭೂತಿ ಬಳಿದುಕೊಂಡು ನಗಾರಿ, ತಮಟೆ ನೃತ್ಯ ಮಾಡಿ  ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಬುಡಕಟ್ಟು ಸಂಘದ ಮುಖಂಡರಾದ ಸಿ.ಮಾದಪ್ಪ, ಮುತ್ತಯ್ಯ, ರಾಜೇಗೌಡ, ಕೋಣೂರೇಗೌಡ, ಎಂ.ಜಡೇಸ್ವಾಮಿ, ಮಹದೇವ, ವಿಠಲ. ದೊಡ್ಡಯ್ಯ, ರಂಗೂಗೌಡ, ಸೋಮಶೇಖರ್‌, ವಿಜಯಕುಮಾರ್‌, ಕುನ್ನಮರಿಗೌಡ ಇತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.