ಕಿಸಾನ್‌ ಸಮ್ಮಾನ ಸೌಲಭ್ಯಕ್ಕೆ ಅರ್ಜಿಗಳ ಮಹಾಪೂರ 

Team Udayavani, Feb 23, 2019, 10:35 AM IST

23-february-14.jpg

ಬೀಳಗಿ: ಚಿಕ್ಕ ಹಿಡುವಳಿದಾರ ರೈತರಿಗೆ (ಐದು ಎಕರೆ ಒಳಗೆ) ವಾರ್ಷಿಕ 6000 ರೂಪಾಯಿ ಸಹಾಯಧನ ನೀಡುವ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಲಾಭ ಪಡೆದುಕೊಳ್ಳಲು ರೈತರು ಅರ್ಜಿ ಸಲ್ಲಿಸಲು ಪೈಪೋಟಿ ನಡೆಸಿದ್ದು, ಈಗಾಗಲೇ ಎರಡು ಸಾವಿರ ಅರ್ಜಿ ಸಲ್ಲಿಕೆಯಾಗಿವೆ.

ಇನ್ನು ಅರ್ಜಿ ಜತೆಗೆ ಹಲವು ದಾಖಲೆ ಸಲ್ಲಿಸಬೇಕಾಗಿದ್ದು, ಅಗತ್ಯ ಜಮೀನು ಉತಾರ 
ಪಡೆಯಲು ರೈತರು ಪರದಾಡುವಂತಾಗಿದೆ. ಐದು ಎಕರೆ ಮೇಲ್ಪಟ್ಟ ದೊಡ್ಡ ರೈತರು ಮತ್ತು ಐದು ಎಕರೆ ಒಳಗಿನ ಸಣ್ಣ ರೈತರು ಸೇರಿ ಒಟ್ಟು ತಾಲೂಕಿನಲ್ಲಿ 24,200 ರೈತರಿದ್ದಾರೆ. ಕೃಷಿ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ 16,048 ಜನ ಸಣ್ಣ ರೈತರಿದ್ದು, ಕಿಸಾನ್‌ ಸಮ್ಮಾನ್‌ ಯೋಜನೆಗೆ ಅರ್ಹತೆ ಹೊಂದಿದ್ದಾರೆ. ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಲು ಫೆ.25 ಕೊನೆಯ ದಿನವಾಗಿದೆ.

ಕಾಲಕ್ರಮೇಣದಲ್ಲಿ ಇನ್ನು ಅನೇಕ ರೈತರು ಚಿಕ್ಕ ಹಿಡುವಳಿದಾರರಾಗಿ ಬದಲಾವಣೆ ಆಗುವ ಸಾಧ್ಯತೆ ಇರುತ್ತದೆ. ಅಂತಹ ರೈತರ ಹೆಸರು ಕೃಷಿ ಇಲಾಖೆ ಹೊರಡಿಸಿರುವ ಪಟ್ಟಿಯಲ್ಲಿ ಇರದಿದ್ದಲ್ಲಿ, ಅರ್ಹ ರೈತರು ಅಗತ್ಯ ದಾಖಲೆಗಳೊಂದಿಗೆ ಫಾರ್ಮ “ಸಿ’ ಭರ್ತಿ ಮಾಡುವ ಮೂಲಕ ಯೋಜನೆಗೆ ಹೆಸರು ನೋಂದಾಯಿಸಬಹುದು.

ಅರ್ಜಿಗಳ ಮಹಾಪೂರ: ಕಿಸಾನ್‌ ಸಮ್ಮಾನ್‌ ನಿಧಿ  ಯೋಜನೆಗೆ ಫೆ.20ರಿಂದ ರೈತರಿಂದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಕೃಷಿ ಇಲಾಖೆಯಡಿ ಅರ್ಜಿ ಸ್ವೀಕರಿಸಲಾಗುತ್ತಿದೆ. ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರಗಳು ಹಾಗೂ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ. ಅಲ್ಲದೆ, ರೈತರಿಗೆ‌ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮದ ಆಯಕಟ್ಟಿನ ಸ್ಥಳಗಳಲ್ಲಿಯೂ ಕೂಡ ಅರ್ಜಿ ಸ್ವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಕೃಷಿ ಇಲಾಖೆ ಯೋಜನೆಗೆ ವೇಗ ನೀಡಿದೆ. ಪರಿಣಾಮ, ಕೇವಲ 2 ದಿನದಲ್ಲಿ ಈಗಾಗಲೇ ರೈತರಿಂದ 2 ಸಾವಿರ ಅರ್ಜಿ ಸಲ್ಲಿಕೆಯಾಗಿವೆ. ನಿತ್ಯವೂ ಅರ್ಹ ರೈತರಿಂದ ಅರ್ಜಿಗಳ ಮಹಾಪೂರ ಹರಿದು ಬರುತ್ತಿದೆ.

ಅರ್ಹ ರೈತರ ಪಟ್ಟಿ ಪ್ರಕಟ: ಕೃಷಿ ಇಲಾಖೆ ಬಳಿ ಮಾಹಿತಿಯಿರುವ ಅರ್ಹ ಫಲಾನುಭವಿ ಸಣ್ಣ ರೈತರ ಪಟ್ಟಿಯನ್ನು ತಾಲೂಕಿನ ಆಯಾ ಗ್ರಾಪಂ ಬೋರ್ಡ್‌ ಗೆ ಅಂಟಿಸಲಾಗಿದೆ. ಪಟ್ಟಿಯಲ್ಲಿ ಹೆಸರಿರುವ ಸಣ್ಣ ರೈತರು ಹಾಗೂ ತಾವು ಸಣ್ಣ ರೈತರಿದ್ದೂ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಅಂಥವರು ಕೂಡ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಇಲಾಖೆ ಮನವಿ ಮಾಡಿಕೊಂಡಿದೆ.

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಗೆ ಅರ್ಜಿ ಸ್ವೀಕರಿಸಲಾಗುತ್ತಿದೆ. ಈಗಾಗಲೇ ಎರಡು ಸಾವಿರ ಅರ್ಜಿ ಬಂದಿವೆ. ಸಣ್ಣ ರೈತರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯನ್ನು ಸಂಪರ್ಕಿಸಬಹುದು.
. ಪರಶುರಾಮ ಗಣಿ, 
ಸಹಾಯಕ ಕೃಷಿ ನಿರ್ದೇಶಕ, ಬೀಳಗಿ

ರವೀಂದ್ರ ಕಣವಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.