ಕೃಷಿಯಿಲ್ಲದೆ ಜನಜೀವನವಿಲ್ಲ

Team Udayavani, Feb 25, 2019, 7:29 AM IST

krushiyi.jpg

ತುಮಕೂರು: ಕೃಷಿ ಹೊರತು ಜೀವನವೇ ಇಲ್ಲ. ಹೀಗಾಗಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶ್ರೀ ಸಿದ್ಧಗಂಗಾ ಮಠಾಧ್ಯಕ್ಷರಾದ ಡಾ. ಸಿದ್ಧಲಿಂಗ ಸ್ವಾಮೀಜಿ ಎಂದು ತಿಳಿಸಿದರು. ನಗರದ ಸಿದ್ಧಗಂಗಾ ಮಠದ ಆವರಣದಲ್ಲಿ ಸಿದ್ಧಗಂಗಾ ಜಾತ್ರಾ ಮಹೋತ್ಸವದ ಅಂಗವಾಗಿ ಜಿಪಂ, ಜಿಲ್ಲಾಡಳಿತ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸಂಯೋಗದಲ್ಲಿ ಏರ್ಪಡಿಸಿದ್ದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸಿದ್ಧಗಂಗಾ ಜಾತ್ರಾ ಮಹೋತ್ಸವದ ಅವಿಭಾಜ್ಯ ಅಂಗವಾಗಿದೆ. ಇದರಲ್ಲಿ ಮಾಹಿತಿ, ಶಿಕ್ಷಣ ಮತ್ತು ಪ್ರಯೋಜನ ಎಲ್ಲವೂ ಲಭಿಸಲಿದೆ. ಎಲ್ಲ ಕ್ಷೇತ್ರಗಳದ್ದು ಒಂದು ತೂಕವಾದರೆ ಕೃಷಿ ಕ್ಷೇತ್ರದ್ದೇ ಒಂದು ತೂಕ ಎಂದು ಹೇಳಿದರು.

ನಮ್ಮ ದೇಶವು ಕೃಷಿ ಪ್ರಧಾನ ದೇಶ. ಅದರಲ್ಲೂ ಮಳೆಯಾಧಾರಿತ ಕೃಷಿ ಮಾಡುತ್ತಿರುವವರೇ ಹೆಚ್ಚು. ಇತ್ತೀಚಿನ ಸಂಕೀರ್ಣ ಸ್ಥಿತಿಯಲ್ಲಿ ಕೃಷಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಕೃಷಿ ಎಂಬುದು ಕಷ್ಟಕರ ಕೆಲಸವಾಗಿದೆ. ಬೆಳೆದ ಬೆಳೆಗೆ ಬೆಲೆಯೂ ಇಲ್ಲ ಎಂದಾಗ ಕೃಷಿಯಿಂದ ವಿಮುಖರಾಗುವ ಹಂತ ಬಂದಿದೆ ಎಂದು ನುಡಿದರು.

ನಮ್ಮ ಕೃಷಿ ಅಧಿಕಾರಿಗಳು ಅಲ್ಪಾವಧಿ ಬೆಳೆಗಳು, ಕಡಿಮೆ ನೀರಿನಲ್ಲಿ ಹೆಚ್ಚಿನ ಉತ್ಪನ್ನ ಪಡೆಯುವುದು, ಮಣ್ಣಿನ ಫ‌ಲವತ್ತತೆ ಬಗ್ಗೆ ತಿಳಿಸಿ ಕೊಡುವುದು, ಸಮಗ್ರ ಕೃಷಿ ಪದ್ಧತಿ, ಸರ್ಕಾರದ ನೆರವಿನ ಯೋಜನೆ, ಕೃಷಿ ನಷ್ಟ ತಡೆಯುವುದು, ಸುಧಾರಿತ ಕೃಷಿ ಪದ್ಧತಿ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ವಸ್ತು ಪ್ರದರ್ಶನ ಅಚ್ಚುಕಟ್ಟಾಗಿ ನಡೆಯಲು ಕೃಷಿ ಇಲಾಖೆ 7 ತಿಂಗಳಿಂದ ಶ್ರಮ ಪಟ್ಟಿದೆ. ಬೇರೆ ಇಲಾಖೆಗಳಿಗಿಂತ ಈ ಇಲಾಖೆಯ ಶ್ರಮ ಬಹಳಷ್ಟಿದೆ. ಕೃಷಿ ಇಲಾಖೆ ರೂಪಿಸಿದ ವಿವಿಧ ಬೆಳೆಗಳ ತಾಕುಗಳನ್ನು ರೈತರು, ಸಾರ್ವಜನಿಕರು ವೀಕ್ಷಿಸಬೇಕು. ರೋಬೋಟ್‌ ಹಕ್ಕಿಗಳ ಪ್ರದರ್ಶನ, ಆಕರ್ಷಕ ಕಲಾಕೃತಿಗಳ ಪ್ರದರ್ಶನಗಳು ಈ ಬಾರಿಯ ಮತ್ತೂಂದು ಆಕರ್ಷಣೆಯಾಗಿದೆ ಎಂದರು.

ಈ ಪ್ರದರ್ಶನವು ಎಲ್ಲ ವರ್ಗದವರಿಗೂ ಅಚ್ಚುಮೆಚ್ಚಿನದಾಗಲಿದೆ. ಜಿಲ್ಲಾಡಳಿತ, ಜಿಪಂ ಸಹಕಾರ ಇಲ್ಲದೆ ಇದ್ದಿದ್ದರೆ ಇಷ್ಟೊಂದು ಅಚ್ಚುಕಟ್ಟಾಗಿ ನಡೆಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮುಖ್ಯ ನಿರ್ವಾಹಣಾಧಿಕಾರಿ ಡಾ. ಮಹಾಂತೇಶ್‌ ಕರೂರ ಮಾತನಾಡಿದರು.

ಜಿ.ಪಂ. ಅಧ್ಯಕ್ಷೆ ಎಂ. ಲತಾ ರವಿಕುಮಾರ್‌, ಮೇಯರ್‌ ಲಲಿತಾ ರವೀಶ್‌, ವಸ್ತು ಪ್ರದರ್ಶನದ ಜಂಟಿ ಕಾರ್ಯದರ್ಶಿ ರೇಣುಕಯ್ಯ, ಸಾಂಸ್ಕೃತಿಕ ಸಮಿತಿ ಸಂಚಾಲಕ ಕೆ.ಎಸ್‌. ಉಮಾಮಹೇಶ್‌, ಪ್ರಚಾರ ಸಮಿತಿ ಸಂಚಾಲಕ ಜಿ. ರುದ್ರೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.