ಪಾಕ್ ಮೇಲೆ ಭಾರತದ ವಾಯುದಾಳಿ: ಸೆನ್ಸೆಕ್ಸ್ 400 ಅಂಕ ನಷ್ಟ
Team Udayavani, Feb 26, 2019, 5:14 AM IST
ಮುಂಬಯಿ : ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ಥಾನದ ವಿರುದ್ಧ ಭಾರತ ವೈಮಾನಿಕ ದಾಳಿ ಆರಂಭಿಸಿರುವಂತೆಯೇ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿಲ್ಲಿ 350ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದ ದೌರ್ಬಲ್ಯದಿಂದಾಗಿಯೂ ಮುಂಬಯಿ ಶೇರು ಪೇಟೆಯಲ್ಲಿಂದು ಬ್ಯಾಂಕಿಂಗ್, ಪವರ್, ಐಟಿ ಮತ್ತು ಮೆಟಲ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಡಕ್ಕೆ ಗುರಿಯಾದವು.
ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್ 399.60 ಅಂಕಗಳ ನಷ್ಟದೊಂದಿಗೆ 35,813.78 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 119.60 ಅಂಕಗಳ ನಷ್ಟದೊಂದಿಗೆ 10,760.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್ ಬ್ಯಾಂಕ್, ಜೆಎಸ್ಡಬ್ಲ್ಯು, ಹಿಂಡಾಲ್ಕೋ, ವೇದಾಂತ, ಇಂಡಿಯಾ ಬುಲ್ಸ್ ಹೌಸಿಂಗ್ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳು : ಟಿಸಿಎಸ್, ಟಾಟಾ ಮೋಟರ್, ಬಜಾಜ್ ಫಿನ್ಸರ್ವ್, ಎಚ್ಯುಎಲ್, ಅಲ್ಟ್ರಾ ಟೆಕ್ ಸಿಮೆಂಟ್; ಟಾಪ್ ಲೂಸರ್ಗಳು : ಎಸ್ ಬ್ಯಾಂಕ್, ಜೆಎಸ್ಡಬ್ಲ್ಯು ಸ್ಟೀಲ್, ಹಿಂಡಾಲ್ಕೋ, ವೇದಾಂತ, ಇಂಡಿಯಾಬುಲ್ಸ್ ಹೌಸಿಂಗ್.
ಡಾಲರ್ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 30 ಪೈಸೆಗಳ ನಷ್ಟಕ್ಕೆ ಗುರಿಯಾಗಿ 71.30 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್