ಮೂಲ್ಕಿ ಸಹಿತ ಐದು ಹೊಸ ತಾಲೂಕುಗಳ ಘೋಷಣೆ
Team Udayavani, Feb 28, 2019, 12:30 AM IST
ಬೆಂಗಳೂರು: ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಸರಕಾರ ಮತ್ತೆ ಐದು ಹೊಸ ತಾಲೂಕುಗಳನ್ನು ಘೋಷಣೆ ಮಾಡಿದೆ. ಸೋಮವಾರ ಮುಖ್ಯಮಂತ್ರಿ ಕುಮಾರ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಕೊಡಗು ಜಿಲ್ಲೆಯ ಪೊನ್ನಂಪೇಟೆ, ಕುಶಾಲನಗರ, ವಿಜಯಪುರ ಜಿಲ್ಲೆಯ ಅಲಮೇಲ, ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕುಗಳ ಘೋಷಣೆ ಮಾಡ ಲಾಗಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ 2019-20ನೇ ಸಾಲಿನಲ್ಲಿ ಮಂಡಿಸಿದ್ದ ಬಜೆಟ್ನಲ್ಲಿ ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು, ಬಾಗಲಕೋಟೆ ಜಿಲ್ಲೆಯ ತೇರದಾಳ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸವನ್ನು ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದರು. ಸೋಮವಾರ ನಡೆದ ಸಂಪುಟದಲ್ಲಿ ಹೊಸದಾಗಿ ಐದು ತಾಲೂಕುಗಳನ್ನು ಘೋಷಣೆ ಮಾಡುವ ಮೂಲಕ ಸಮ್ಮಿಶ್ರ ಸರಕಾರ 9 ಹೊಸ ತಾಲೂಕುಗಳ ರಚನೆಗೆ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ