ಆರೋಗ್ಯಕರ ಸಮಾಜ ನಿರ್ಮಿಸಿ

Team Udayavani, Mar 3, 2019, 10:11 AM IST

ray-1.jpg

ದೇವದುರ್ಗ: ಸರ್ಕಾರದ ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಸಂಸದ ಬಿ.ವಿ. ನಾಯಕ ಹೇಳಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ವಿಜ್ಞಾನ ಸಂಸ್ಥೆ, ನವೋದಯ ವೈದ್ಯಕೀಯ ಮಹಾ ವಿದ್ಯಾಲಯ, ಭಾರತೀಯ ವೈದ್ಯಕೀಯ ಸಂಸ್ಥೆ ಸಹಯೋಗದಲ್ಲಿ ಶನಿವಾರ ಸಮೀಪದ ಅರಕೇರಾ ಗ್ರಾಮದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್‌ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆರೋಗ್ಯ ಮೇಳ ಆಯೋಜಿಸಲಾಗಿದೆ. ಆರೋಗ್ಯ ಮತ್ತು ಶಿಕ್ಷಣ
ಕ್ಷೇತ್ರಗಳಲ್ಲಿ ಇನ್ನೂ ಕ್ರಾಂತಿಯಾಗಬೇಕಿದೆ. ರಾಯಚೂರು ಜಿಲ್ಲೆಯಲ್ಲಿ ಮಹಿಳೆಯರು, ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ ಗಂಭೀರವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ರಾಯಚೂರು ಜಿಲ್ಲೆಯಲ್ಲಿ ಪೌಷ್ಟಿಕತೆ ಹೆಚ್ಚಿಸಲು ಅನೇಕ ಕಾರ್ಯಕ್ರಮ ಜಾರಿಗೊಳಿಸಿದೆ. ಇತ್ತೀಚೆಗೆ ಗರ್ಭಿಣಿಯರಿಗೆ, ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಂಡಿದ್ದು, ಉತ್ತಮ ಸ್ಪಂದನೆ ದೊರಕಿದೆ ಎಂದರು.

ಜಿಲ್ಲೆಯಲ್ಲಿ ಅತೀ ಹೆಚ್ಚು ದೊಡ್ಡಿ, ತಾಂಡಾಗಳಲ್ಲಿ ಜನ ತಮ್ಮ ಜಮೀನುಗಳಲ್ಲಿಯೇ ಮನೆ ನಿರ್ಮಿಸಿಕೊಂಡು ವಾಸಿಸುವುದು ಸಾಮಾನ್ಯ.ಇಂಥ ಪ್ರದೇಶದ ಜನತೆಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣ ಸೇವೆ ಒದಗಿಸುವುದು ಅತ್ಯಗತ್ಯ ಎಂದರು. ರಾಯಚೂರು ಲೋಕಸಭಾ ಕ್ಷೇತ್ರ ಕೇಂದ್ರ ಸರಕಾರದಿಂದ ಅತಿ ಹಿಂದುಳಿದ ಪ್ರದೇಶ ಎಂದು ಗುರುತಿಸಿ, ನೀತಿ ಅಯೋಗದ ಸರ್ವೆ ಆಧರಿಸಿ ವರದಿ ನೀಡಿದೆ. ಇನ್ನೂ ವಿಶೇಷ ಸೌಲಭ್ಯಗಳು ದೊರಕಲಿವೆ. ಕಲಂ371 ತಿದ್ದುಪಡಿ ಸೌಲಭ್ಯದ ಪ್ರಕಾರ ಈ ಪ್ರದೇಶಕ್ಕೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚು ಅನುದಾನ ಲಭ್ಯವಾಗಲಿದೆ. ಸಾರ್ವಜನಿಕರು ಸರಕಾರದ ಸೌಲಭ್ಯಗಳನ್ನು ಪಡೆದುಕೊಂಡು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಜಿಪಂ ಸದಸ್ಯೆ ಜಯಶ್ರೀ ಶರಣಗೌಡ ಮಾಲಿಪಾಟೀಲ, ತಾಪಂ ಸದಸ್ಯ ಗೋವಿಂದರಾಜ್‌ ಚಿಕ್ಕಗುಡ್ಡ, ಅಮರೇಗೌಡ ಹಂಚಿನಾಳ, ಗಂಗಪ್ಪಯ್ಯ ಪೂಜಾರಿ, ಆದನಗೌಡ ಪಾಟೀಲ ಬುಂಕಲದೊಡ್ಡಿ, ತಿಮ್ಮಪ್ಪ ನಾಯಕ, ಅಬ್ದುಲ್‌ ಅಜೀಜ್‌, ಮೋನಪ್ಪ ನಾಯಕ ಕ್ಯಾದಿಗೇರಾ, ಭೂತಪ್ಪ ಹೇರುಂಡಿ,
ಮಹಾದೇವ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಕೆ.ನಾಸೀರ್‌, ತಾಲೂಕು ಆರೋಗ್ಯ ಅಧಿಕಾರಿ ಡಾ| ಬನದೇಶ ಇದ್ದರು. ಡಾ| ಸುರೇಂದ್ರಬಾಬು, ಡಾ| ಲಕ್ಷ್ಮೀಬಾಯಿ, ಡಾ| ಗಣೇಶ, ಎಂ.ಡಿ. ಶಾಕೀರ್‌, ಡಾ| ಶೋಭಾ ಸಿದ್ದೇಶ, ಡಾ| ಶ್ರೀನಿವಾಸರಾವ್‌ ಕುಲಕರ್ಣಿ, ಡಾ| ಹುಲಿಮನಿ, ಡಾ| ವಿಶ್ವನಾಥ ಬಣಗಾರ, ಡಾ| ಭಾರತಿ ಇತರರು ರೋಗಿಗಳ ತಪಾಸಣೆ ನಡೆಸಿದರು. 650 ರೋಗಿಗಳನ್ನು ತಪಾಸಣೆ ಮಾಡಿ, 3 ರೋಗಿಗಳನ್ನು ಕಿದ್ವಾಯಿ ಆಸ್ಪತ್ರೆಗೆ, 20 ಜನರನ್ನು ನೇತ್ರ ಶಸ್ತ್ರ ಚಿಕಿತ್ಸೆಗೆ ಕಳುಹಿಸಲಾಯಿತು. ಬಸವರಾಜ ಬ್ಯಾಗವಾಟ, ಸುಗೂರೇಶ್ವರ ಗುಡಿ ನಿರೂಪಿಸಿದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.