ಉಪವಾಸಕ್ಕೆ ಹಣ್ಣು ಹಂಪಲು ಖರೀದಿ ಜೋರು


Team Udayavani, Mar 4, 2019, 10:12 AM IST

4-march-13.jpg

ಅಕ್ಕಿಆಲೂರು: ಶಿವರಾತ್ರಿ ಆಚರಣೆಗೆ ಅರೇಮಲೆನಾಡು ಪ್ರದೇಶ ಅಕ್ಕಿಆಲೂರು ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಶಿವರಾತ್ರಿ ಉಪವಾಸ ಆಚರಣೆಯ ಹಿನ್ನೆಲೆಯಲ್ಲಿ ಶಿವನ ನೈವೇದ್ಯಕ್ಕಾಗಿ ವಿವಿಧ ಹಣ್ಣು ಹಂಪಲು, ಫಲ-ಪುಷ್ಪಗಳ ಖರೀದಿ ರವಿವಾರ ಮಾರುಕಟ್ಟೆಯಲ್ಲಿ ಭರದಿಂದ ಸಾಗಿತ್ತು.

ಶಿವರಾತ್ರಿಗೆ ಉಪವಾಸ ವೃತ ಆಚರಣೆ ಮಾಡುವ ಬಹುತೇಕ ಜನ ಉಪವಾಸ ಸಮಯದಲ್ಲಿ ಸೇವಿಸುವ ಹಣ್ಣು ಹಂಪಲುಗಳ ಖರೀದಿಯಲ್ಲಿ ಮಗ್ನರಾಗಿದ್ದರು. ವಿವಿಧ ಖಾದ್ಯಗಳ ಮೂಲಕ ಭರ್ಜರಿಯಾಗಿ ಆಚರಿಸಲ್ಪಡುವ ಇತರೆ ಹಬ್ಬಗಳಿಗೆ ತದ್ವಿರುದ್ಧವಾಗಿ ಆಚರಿಸಲ್ಪಡುವ ಶಿವರಾತ್ರಿ ಉಪವಾಸ ಆಚರಣೆ ದೇಶಾದ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದೆ. ಉಪವಾಸ ಆಚರಣೆಗೆ ಅಗತ್ಯ ಹಣ್ಣು ಹಂಪಲು ಬೆಲೆ ಕಳೆದಬಾರಿಗಿಂತಲೂ ಹೆಚ್ಚಾಗಿದೆ. ಕಲ್ಲಂಗಡಿ, ಕರಬೂಜ, ದ್ರಾಕ್ಷಿ, ಕಿತ್ತಳೆ, ಮೋಸಂಬಿ ಸೇರಿದಂತೆ ಹಲವಾರು ಹಣ್ಣುಗಳ ಖರೀದಿಗೆ ಮುಂದಾಗಿದ್ದರು.

ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲೊಂದಾದ ಶಿವರಾತ್ರಿಯನ್ನು ಮಾಘ ಮಾಸದ ಬಹುಳ ಚತುದರ್ಶಿಯಂದು ಅತ್ಯಂತ ಶ್ರದ್ಧಾ ಭಕ್ತಿಯಿಂದ ಪ್ರತಿಮನೆಗಳಲ್ಲಿಯೂ ಆಚರಿಸಲಾಗುತ್ತದೆ. ಮಳೆಯ ಅಭಾವದಿಂದಾಗಿ ಮಾರುಕಟ್ಟೆಯಲ್ಲಿ ಹೂವಿನ ಬೆಲೆಯೂ ಮಾರಿಗೆ 50-70 ರವರೆಗೆ ಏರಿಕೆ ಕಂಡಿತ್ತು. ಉಪವಾಸ ಆರಂಭಕ್ಕೂ ಮುನ್ನ ಶಿವನ ನೈವೇದ್ಯಕ್ಕಾಗಿ ಉಪಯೋಗಿಸುವ ಕಡಲೆ, ಶೇಂಗಾ, ಕರ್ಜೂರಗಳ ಮಾರುಕಟ್ಟೆಯಲ್ಲಿ 60-100 ರೂ. ವರೆಗೆ ಪ್ರತಿ ಕಿಲೋ ಗೆ ಮಾರಾಟವಾಯಿತು. ಹಣ್ಣುಗಳ ಪೈಕಿ ಕಲ್ಲಂಗಡಿ ಪ್ರತಿ ಕೆಜಿಗೆ 25ರೂ. ನಂತೆ ಮಾರಾಟವಾಗಿದ್ದು, ಶಿವರಾತ್ರಿ ಆಚರಣೆಗೆ ಲೋಡ್‌ಗಟ್ಟಲೇ ಕಲ್ಲಂಗಡಿ ಪಟ್ಟಣದ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.

ಶಿವರಾತ್ರಿ ಹಿನ್ನೆಲೆಯಲ್ಲಿ ಪಟ್ಟಣದ ಹೊರವಲಯದ ಕೆರೆ ಈಶ್ವರ ದೇವಸ್ಥಾನ ಮತ್ತು ಪೇಟೆ ಓಣಿಯ ಗಂಗಾಧರೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ದೇವಸ್ಥಾನದ ಶುದ್ಧೀಕರಣ ಕಾರ್ಯವೂ ಭರದಿಂದ ಸಾಗಿತ್ತು. ವಿಶೇಷವೆಂದರೆ ವಿರಕ್ತಮಠದಲ್ಲಿ ಶಿವಬಸವ ಶ್ರೀಗಳ ಸಾನ್ನಿಧ್ಯದಲ್ಲಿ ಪ್ರತಿವರ್ಷ ಶಿವರಾತ್ರಿಯಂದು ಸಾಮೂಹಿಕ ಇಷ್ಠಲಿಂಗ ಪೂಜೆ ನೆರವೇರುವುದು ಇಲ್ಲಿನ ವಾಡಿಕೆ.

ಉಪವಾಸ ವೃತವನ್ನು ಕಟ್ಟು ನಿಟ್ಟಾಗಿ ಪಾಲಿಸುವವರು ದೇಗುಲಗಳಲ್ಲಿ, ಮಠ ಮಂದಿರಗಳಲ್ಲಿ ಶಿವ ನಾಮ ಸ್ಮರಣೆ, ಭಜನೆಗಳಲ್ಲಿ ತೊಡಗಿಕೊಳ್ಳುವುದು ಸಾಮಾನ್ಯವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹಣ್ಣುಗಳ ಬೆಲೆಯಲ್ಲಿ ಹೆಚ್ಚೇನೂ ಏರಿಕೆಯಾಗಿಲ್ಲ. ವರ್ಷಕ್ಕೊಮ್ಮೆ ಬರುವ ಹಬ್ಬವನ್ನು ಆಚರಿಸಲು ಜನ ಖರೀದಿಗೆ ಮುಂದಾಗುತ್ತಿದ್ದಾರೆ. ವ್ಯಾಪಾರ ರವಿವಾರ ಚೆನ್ನಾಗಿತ್ತು. 
. ಮೊಹ್ಮದ್‌ ಮಕಾಂದಾರ್‌,
   ಹಣ್ಣಿನ ವ್ಯಾಪಾರಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.