ಉದ್ಘಾಟನೆಗೆ ಅಡ್ಡಿಯಿಲ್ಲ ಆರಂಭ ಖಾತ್ರಿಯಿಲ್ಲ!


Team Udayavani, Mar 4, 2019, 11:12 AM IST

4-march-15.jpg

ಹುಬ್ಬಳ್ಳಿ: ನಗರದ ಕಿಮ್ಸ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಶೇ. 90ಕ್ಕೂ ಅಧಿಕ ಪ್ರಮಾಣದಷ್ಟು ಮುಗಿದಿದೆ. ಎಸ್‌ಟಿಪಿ ಪ್ಲಾಂಟ್‌ ಸೇರಿದಂತೆ ಶೇ. 30 ಉಪಕರಣಗಳ ಅಳವಡಿಕೆ ಹಾಗೂ ಸಿಬ್ಬಂದಿ ನೇಮಕ ಬಾಕಿಯಿದ್ದು, ಮಾಸಾಂತ್ಯದಲ್ಲಿ ಪೂರ್ಣಗೊಳ್ಳುವ  ಸಾಧ್ಯತೆಗಳಿವೆ. ಅಲ್ಲಿಯ ವರೆಗೆ ಈ ಆಸ್ಪತ್ರೆಯು ಸಾರ್ವಜನಿಕರ ಸೇವೆಗೆ ಲಭ್ಯವಾಗುವುದು ಕಷ್ಟ.

ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಅಂದಾಜು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಸಿವಿಲ್‌ ಕಾಮಗಾರಿ ಶೇ. 98 ಮುಗಿದಿದೆ. ಉಪಕರಣಗಳ ಅಳವಡಿಕೆ ಶೇ. 70 ಆಗಿದ್ದು, ಪ್ರಮುಖವಾಗಿ ಶಸ್ತ್ರಚಿಕಿತ್ಸಾ ಘಟಕ, ವೈದ್ಯಕೀಯ ಗ್ಯಾಸ್‌ ಪೈಪಿಂಗ್‌ ಸಿಸ್ಟಮ್‌ ಅಳವಡಿಕೆ, ಎಸ್‌ಟಿಪಿ ಪ್ಲಾಂಟ್‌ ಕಾಮಗಾರಿ ಬಾಕಿ ಉಳಿದಿದೆ. ಜೊತೆಗೆ ಗ್ರುಪ್‌ ಸಿ ಹಾಗೂ ಡಿ ನೇಮಕಾತಿ ಆಗಬೇಕಿದೆ.

ಕೇಂದ್ರ ಸರಕಾರದ ಪ್ರಧಾನಮಂತ್ರಿ ಸ್ವಾಸ್ಥ್ಯ  ಸುರಕ್ಷಾ ಯೋಜನೆ 3ರ ಅಡಿ 120 ಕೋಟಿ ರೂ. ಹಾಗೂ ರಾಜ್ಯ ಸರಕಾರದ 30 ಕೋಟಿ ರೂ. ಅನುದಾನ ಸೇರಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಇದ್ಲರಲ್ಲಿ ಸಿವಿಲ್‌ ಕಾಮಗಾರಿಯ ಮೆಕ್ಯಾನಿಕಲ್‌, ಇಲೆಕ್ಟ್ರಿಕಲ್‌, ಪ್ಲಂಬಿಂಗ್‌ಗೆ 75 ಕೋಟಿ ರೂ. ಹಾಗೂ ವೈದ್ಯಕೀಯ ಗ್ಯಾಸ್‌ ಪೈಪಿಂಗ್‌ ಸಿಸ್ಟಮ್‌, ಮಾಡೂಲರ್‌ ಆಪರೇಶನ್‌ ಥೇಟರ್‌, ವೈದ್ಯಕೀಯ ಉಪಕರಣಗಳಿಗೆ ಗೆ 65 ಕೋಟಿ ರೂ. ಹಾಗೂ ವೈದ್ಯಕೀಯ ಪೀಠೊಪಕರಣ, ಆಡಳಿತಾತ್ಮಕ ಪೀಠೊಪಕರಣಕ್ಕೆ 10 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಕೇಂದ್ರ ಸರಕಾರ ಸ್ವಾಮ್ಯದ ಹೈದರಾಬಾದ್‌ ಮೂಲದ ಎಚ್‌ಎಲ್‌ಎಲ್‌-ಹೈಟ್ಸ್‌ ಕಂಪನಿ ಈ ಕಾಮಗಾರಿಯ ನಿರ್ವಹಣೆ ಮಾಡುತ್ತಿದೆ. ನಾಸಿಕ್‌ ಮೂಲದ ಹರ್ಷ ಕನ್‌ಸ್ಟ್ರಕ್ಷನ್‌ ಕಂಪನಿಯು ಅಂದಾಜು 1ಲಕ್ಷ 70 ಸಾವಿರ ಚದುರಡಿ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಿಸುತ್ತಿದೆ.

ಹರ್ಷ ಕಂಪನಿಗೆ 69.70 ಕೋಟಿ ರೂ. ವೆಚ್ಚದಲ್ಲಿ 18 ತಿಂಗಳ ಅವಧಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿಕೊಡಲು 2016ರ ಆ. 12ರಂದು ಟೆಂಡರ್‌ ನೀಡಲಾಗಿತ್ತು. ಅದರಂತೆ ಕಂಪನಿ ಕಾಮಗಾರಿ ಆರಂಭಿಸಿ, 2018ರ ಮಾರ್ಚ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಯೋಜಿಸಲಾಗಿತ್ತು. ಆದರೆ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡದ ಮುಂಭಾಗದಲ್ಲಿದ್ದ ಶವಾಗಾರ ಸ್ಥಳಾಂತರ, ತ್ಯಾಜ್ಯ ಶುದ್ಧೀಕರಣ ಘಟಕಕ್ಕೆ ರಾಜ್ಯ ಸರಕಾರದ ಅನುದಾನ ನೀಡುವಲ್ಲಿ ಹಾಗೂ ಅಗ್ನಿಶಾಮಕದಳ ಇಲಾಖೆಯಿಂದ ಅನುಮತಿ ದೊರೆಯದ್ದರಿಂದ ಕಟ್ಟಡ ಕಾಮಗಾರಿ ವಿಳಂಬವಾಗಿತ್ತು. ಎಪ್ರಿಲ್‌ ಮೊದಲ ವಾರದಲ್ಲಿ ಶವಾಗಾರ ಸ್ಥಳಾಂತರ ಮಾಡಲಾಗಿದ್ದು, ಅದರ ಕಟ್ಟಡ ತೆರವುಗೊಳಿಸಲಾಗಿದೆ.

ನೇಮಕಾತಿ ಸವಾಲು
ಕಟ್ಟಡದಲ್ಲಿ ಈಗಾಗಲೇ ಫ್ಲೋರಿಂಗ್‌, ಬಾಗಿಲು ಅಳವಡಿಕೆ, ಸೀಲಿಂಗ್‌ ಕಾಮಗಾರಿ ಸೇರಿದಂತೆ ಶೇ. 90ಕ್ಕೂ ಅಧಿಕ ಸಿವಿಲ್‌ ಕಾಮಗಾರಿ ಮುಗಿದಿದೆ. ಆದರೆ ಶಸ್ತ್ರಚಿಕಿತ್ಸಾ ಘಟಕ ಹಾಗೂ ಎಂಜಿಪಿಎಸ್‌, ಎಸ್‌ಟಿಪಿ ಅಳವಡಿಕೆ ಕಾಮಗಾರಿ ಬಾಕಿ ಉಳಿದಿದೆ. ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಗೆ ಸಿ ಮತ್ತು ಡಿ ಗ್ರುಪ್‌ ಸಿಬ್ಬಂದಿಯ ನೇಮಕಾತಿಯೇ ದೊಡ್ಡ ಸವಾಲಾಗಲಿದ್ದು, ಅದನ್ನು ಎಷ್ಟು ಬೇಗ ಬಗೆಹರಿಸಲಾಗುವುದೋ ಅಷ್ಟೇ ಬೇಗನೆ ಈ ಆಸ್ಪತ್ರೆ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಿಮ್ಸ್‌ನಲ್ಲಿ ನಿರ್ಮಾಣವಾಗುತ್ತಿರುವ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಶಸ್ತ್ರಚಿಕಿತ್ಸಾ ಘಟಕ, ಗ್ಯಾಸ್‌ ಪೈಪಿಂಗ್‌ ಸಿಸ್ಟಮ್‌ ಅಳವಡಿಕೆ, ಎಸ್‌ಟಿಪಿ ಪ್ಲಾಂಟ್‌ ಕಾಮಗಾರಿ ಬಾಕಿ ಉಳಿದಿದೆ. ತಿಂಗಳಾತ್ಯದಲ್ಲಿ ಅವು ಪೂರ್ಣಗೊಳ್ಳಲಿವೆ. ಸಿ ಹಾಗೂ ಡಿ ಗ್ರುಪ್‌ ನೇಮಕಾತಿ ಆಗಬೇಕಿದೆ. ಆಸ್ಪತ್ರೆ ಉದ್ಘಾಟನೆಗೆ ಯಾವುದೇ ಸಮಸ್ಯೆಯಿಲ್ಲ.
. ಡಾ| ರಾಮಲಿಂಗಪ್ಪ ಅಂಟರತಾನಿ,
  ಪ್ರಭಾರಿ ನಿರ್ದೇಶಕ, ಕಿಮ್ಸ್‌

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.