ಸೇತುವೆ, ಕಿಂಡಿ ಅಣೆಕಟ್ಟಿಗೆ 59 ಕೋಟಿ ರೂ. ಮಂಜೂರು

Team Udayavani, Mar 5, 2019, 6:46 AM IST

sudina-2.jpg

ಉಪ್ಪಿನಂಗಡಿ : ಬಿಳಿಯೂರು- ತೆಕ್ಕಾರು, ಸರಳೀಕಟ್ಟೆ ಸಂಪರ್ಕ ಸೇತುವೆ ಮತ್ತು ಕಿಂಡಿಅಣೆಕಟ್ಟು ನಿರ್ಮಾಣ ಕಾಮಗಾರಿಗಾಗಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಪಶ್ಚಿಮ ವಾಹಿನಿ ಯೋಜನೆಯಡಿಯಲ್ಲಿ 59 ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಮಾ. 4ರಂದು ಉಪ್ಪಿನಂಗಡಿ ಗ್ರಾಮದ ನಾಲಾಯಗುಂಡಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ 1 ಕೋಟಿ ರೂ.
ಅನುದಾನದಲ್ಲಿ ನಿರ್ಮಾಣವಾಗಲಿರುವ ಸೇತುವೆ ಸಮೇತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. 

ಬಿಳಿಯೂರು – ತೆಕ್ಕಾರು ಸಂಪರ್ಕ ಸೇತುವೆ ನಿರ್ಮಾಣವಾದರೆ ಈ ಭಾಗದಲ್ಲಿ ಸುಮಾರು 7 ಕಿ.ಮೀ. ತನಕ ಹಲವು ಗ್ರಾಮಗಳ ರೈತರಿಗೆ ಜಲಧಾರೆ ಮೂಲಕ ನೀರಾವರಿ ವ್ಯವಸ್ಥೆ ಆಗಲಿದೆ. ಆ ಪ್ರದೇಶಗಳಲ್ಲಿ ಅಂತರ್ಜಲ ವೃದ್ಧಿಯಾಗಲಿದೆ ಎಂದ ಅವರು, ಕೆದಿಲ- ಕಾಂತುಕೋಡಿಯಲ್ಲಿ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಮಂಜೂರಾತಿ ದೊರೆತಿದೆ. ಆರ್ಥಿಕ ಮಂಜೂರಾತಿ ಹಂತದಲ್ಲಿದೆ. 

ದಾರಂದಕುಕ್ಕು-ಕಠಾರ-ಹಿರೇಬಂಡಾಡಿ ಸಂಪರ್ಕ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಟ್ಟಿನಲ್ಲಿ ಈ ಭಾಗದಲ್ಲಿ ಪಶ್ಚಿಮವಾಹಿನಿ ಯೋಜನೆ ಮೂಲಕ ಹಲವು ಸೇತುವೆ ಮತ್ತು ಅಣೆಕಟ್ಟು ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಜಿ.ಪಂ. ಸದಸ್ಯೆ ಶಯನಾ ಜಯಾನಂದ ಮಾತನಾಡಿದರು. ತಾ.ಪಂ. ಸದಸ್ಯೆ ಸುಜಾತಾ ಕೃಷ್ಣ ಆಚಾರ್ಯ, ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ, ಸದಸ್ಯರಾದ ಸುರೇಶ್‌ ಅತ್ರಮಜಲು, ಚಂದ್ರಶೇಖರ ಮಡಿವಾಳ, ಗೋಪಾಲ ಹೆಗ್ಡೆ, ರಮೇಶ್‌ ಬಂಡಾರಿ, ಸುಶೀಲಾ, ಉಪ್ಪಿನಂಗಡಿ ಸಿ.ಎ. ಬ್ಯಾಂಕ್‌ ನಿರ್ದೇಶಕ ರಾಮಚಂದ್ರ ಮಣಿಯಾಣಿ, ಹಿರೇಬಂಡಾಡಿ ಗ್ರಾ.ಪಂ. ಅಧ್ಯಕ್ಷ ಹಮ್ಮಬ್ಬ ಶೌಕತ್‌ ಆಲಿ, ತಾ.ಪಂ. ಮಾಜಿ ಸದಸ್ಯ ಎನ್‌. ಉಮೇಶ್‌ ಶೆಣೈ, ಗ್ರಾ.ಪಂ. ಮಾಜಿ ಸದಸ್ಯೆ ಮಾಲತಿ, ಗ್ರಾಮಸ್ಥರಾದ ಶೀನಪ್ಪ, ವಿಶ್ವನಾಥ ಕಂಗ್ವೆ, ಕೃಷ್ಣಪ್ಪ ಗೌಡ, ಕೇಶವ ರಂಗಾಜೆ, ಜಗದೀಶ ಶೆಟ್ಟಿ, ರಾಜೀವ್‌ ಹೆಗ್ಡೆ, ಶ್ರೀರಾಮ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಪಂ. ಸದಸ್ಯ ಸುನೀಲ್‌ ಕುಮಾರ್‌ ದಡ್ಡು ಸ್ವಾಗತಿಸಿ, ವಂದಿಸಿದರು. 

ಮುಕ್ತಾಯ ಹಂತದಲ್ಲಿ ಟೆಂಡರ್‌
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ  ಎಂಜಿನಿಯರ್‌ ಆನಂದ ಬಂಜನ ಅವರು ಮಾಹಿತಿ ನೀಡಿ, ಸುಮಾರು 31.70 ಮೀಟರ್‌ ಉದ್ದ ಮತ್ತು 3 ಮೀಟರ್‌ ಅಗಲದ ಸೇತುವೆ ನಿರ್ಮಾಣ ಆಗಲಿದ್ದು, ಈ ವಾರದಲ್ಲಿ ಟೆಂಡರು ಪ್ರಕ್ರಿಯೆ ಮುಗಿಯಲಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗದೇ ಇದ್ದರೆ ಶೀಘ್ರ ಕಾಮಗಾರಿ ಆರಂಭಿಸಿ, ಮಳೆಗಾಲಕ್ಕೆ ಮುನ್ನ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.