ಮಲ್ಪೆ: ಘರ್ಷಣೆಗೆ ತಿರುಗಿದ ಮೀನುಗಾರರ ಪ್ರತಿಭಟನೆ
Team Udayavani, Mar 5, 2019, 7:13 AM IST
ಮಲ್ಪೆ; ಲೈಟ್ ಫಿಶಿಂಗ್, ಬುಲ್ ಟ್ರಾಲ್ ಅವೈಜ್ಞಾನಿಕ ಮೀನುಗಾರಿಕೆ ವಿರೋಧಿಸಿ ಮಂಗಳವಾರ ಮಲ್ಪೆ ಆಳ ಸಮುದ್ರ ಮೀನುಗಾರರ ಸಂಘದ ವತಿಯಿಂದ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪರ್ಸಿನ್ ಬೋಟ್ ಮೀನುಗಾರರು ಮತ್ತು ಆಳ ಸಮುದ್ರ ಮೀನುಗಾರರು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.
ಪರ್ಸಿನ್ ಬೋಟ್ ಮೀನುಗಾರರು ಅವೈಜ್ಞಾನಿಕ ಮೀನುಗಾರಿಕೆ ನಡೆಸುತ್ತಿದ್ದರೂ ಇದುವರೆಗೆ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಬಂದರು ಗೇಟ್ ಅನ್ನು ಮುಚ್ಚಿ ಆಳ ಸಮುದ್ರ ಮೀನುಗಾರರು ಪ್ರತಿಭಟನೆ ನಡೆಸುತಿದ್ದರು. ಈ ನಡುವೆ ಬಂದರು ಗೇಟ್ ಬಂದ್ ಮಾಡಿದಕ್ಕೆ ಪರ್ಸಿನ್ ಮೀನುಗಾರರು ಅಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಇಬ್ಬರು ಮುಖಂಡರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಕೈ ಮಿಲಾಯಿಸಿಕೊಂಡರು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಡಿವೈಎಸ್ ಪಿ ಜೈಶಂಕರ್ ಮಾತನಾಡಿ ಮೀನುಗಾರ ಮುಖಂಡರು ತಮ್ಮಲ್ಲೇ ಈ ಸಮಸ್ಯೆ ಬಗೆಹರಿಸಬೇಕೆಂದು ಎಂದು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ