ಚುನಾವಣೆ ಸ್ಪರ್ಧೆಗೆ ಟಿಕೆಟ್ ಅಪೇಕ್ಷೆ ತಪ್ಪಲ್ಲ: ಶೋಭಾ
Team Udayavani, Mar 12, 2019, 12:30 AM IST
ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರೇ ಆದರೂ ಟಿಕೆಟ್ ಅಪೇಕ್ಷಿಸುವುದು ತಪ್ಪಲ್ಲ. ಆದರೆ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಮುಖಂಡರು ಮತ್ತು ಕಾರ್ಯಕರ್ತರು ಅವರ ಪರವಾಗಿ ಕೆಲಸ ಮಾಡಬೇಕಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿದ್ದುಕೊಂಡು ಕೆಲಸ ನಿರ್ವಹಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸೂಚಿಸಿದ್ದಾರೆ. ಅದರಂತೆ ಕೆಲಸ ಮಾಡಲಾಗುತ್ತಿದೆ. ಯಾರೇ ಟಿಕೆಟ್ ಅಪೇಕ್ಷಿಸುವುದು ತಪ್ಪಲ್ಲ, ಆದರೆ ಪಕ್ಷದ ವಿರುದ್ಧ ಕೆಲಸ ಮಾಡಬಾರದು. ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು ಎಂದರು.
ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿ ಲೋಕಸಭೆಗೆ ಕಳುಹಿಸಬೇಕಿದೆ. ಆ ನಿಟ್ಟಿನಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕೆಲಸ ನಿರ್ವಹಿಸುತ್ತಿದ್ದಾರೆ. ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಟಿಕೆಟ್ ಅಪೇಕ್ಷಿತರಿಂದ ಪಕ್ಷದ ಅಭ್ಯರ್ಥಿ ಗೆಲುವಿಗೆ ತೊಡಕಾಗುವುದಿಲ್ಲವೆಂದು ಸ್ಪಷ್ಟಪಡಿಸಿದರು.