ಭೂ ಸ್ವಾಧೀನ ಸ್ಥಳಾಂತರ ಕಾಯ್ದೆ ತಿದ್ದುಪಡಿ ಮಸೂದೆಗೆ ಆಗ್ರಹ

Team Udayavani, Mar 13, 2019, 7:50 AM IST

bhooswa.jpg

ಚನ್ನಪಟ್ಟಣ: ಸರ್ಕಾರ ಭೂ ಸ್ವಾಧೀನ ಸ್ಥಳಾಂತರ ಕಾಯ್ದೆ ತಿದ್ದುಪಡಿ ಮಸೂದೆ ಜಾರಿ ಮಾಡದಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಮಸೂದೆಯ ಪ್ರತಿಯನ್ನು ಹಾಕುವ ಮೂಲಕ ಪ್ರತಿಭಟಿಸಿದ ರೈತ ಸಂಘದ ಕಾರ್ಯಕರ್ತರು, ಹೊಸ ಮಸೂದೆಯನ್ನು ರೂಪಿಸುವ ಮೂಲಕ ರೈತರ ಜಮೀನು ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಅವರು ಇಂತಹ ರೈತ ವಿರೋಧಿ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ಭೂ ಸ್ವಾಧೀನಕ್ಕೆ ಆಕ್ರೋಶ: ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಎಂ.ರಾಮು ಮಾತನಾಡಿ, 2013ರಲ್ಲಿ ಕೇಂದ್ರ ಸರ್ಕಾರ ಭೂ ಸ್ವಾಧೀನ ಸ್ಥಳಾಂತರ ಪುರ್ನ ವಸತಿಯಲ್ಲಿ ಪಾರದರ್ಶಕ ಹಾಗೂ ನ್ಯಾಯಯುತ ಪರಿಹಾರ ಹಕ್ಕು ಅಧಿನಿಯಮವನ್ನು ರೂಪಿಸಿದೆ. ಭೂ ಸ್ವಾಧೀನಕ್ಕೆ ಒಳಪಟ್ಟ ರೈತರ ಹಕ್ಕುಗಳ ರಕ್ಷಣೆಗೆ ಇದರಿಂದಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ಉತ್ತಮ ಪರಿಹಾರ ಮತ್ತು ಪುರ್ನ ವಸತಿ ಕಲ್ಪಿಸಲು ಸಾಧ್ಯವಾಗಿತ್ತು. ಆದರೆ, ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಯ್ದೆ ಜಾರಿ ಸರಿಯಲ್ಲ: ಈ ಹಿಂದೆ ಕೇಂದ್ರ ಸರ್ಕಾರ ಇಂತಹ ಮರಣ ಶಾಸನವನ್ನು ರೈತರ ಮೇಲೆ ಏರಲು ಮುಂದಾದಾಗ ರೈತ ಸಂಘ ಹೋರಾಟ ನಡೆಸಿದ ಪರಿಣಾಮ ಇದನ್ನು ಕೈಬಿಟ್ಟು ರಾಜ್ಯ ಸರ್ಕಾರಗಳ ವಿವೇಚನೆಗೆ ನೀಡಿತ್ತು. ಈಗ ಅವರು ಹೊಸ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ. ರೈತರ ಬದುಕನ್ನು ಮಣ್ಣುಪಾಲು ಮಾಡುವ ಈ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಕಾಯ್ದೆ ಸರ್ಕಾರಕ್ಕೆ ಪ್ರಬಲ ಅಸ್ತ್ರ: ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಲ್ಲಯ್ಯ ಮಾತನಾಡಿ, ಉದ್ದೇಶಿತ ಮಸೂದೆ ಜಾರಿಗೆ ಬಂದರೆ ರೈತರು ತಮ್ಮ ಭೂಮಿಯ ಹಕ್ಕನ್ನು ಕಳೆದುಕೊಳ್ಳುತ್ತಾರೆ. ಹೊಸ ಭೂ ಸ್ವಾಧೀನ ಕಾಯ್ದೆ ಜಾರಿಗೆ ತಂದರೆ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರಕ್ಕೆ ಪ್ರಬಲ ಅಸ್ತ್ರ ಸಿಕ್ಕಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಈಗ ಜಾರಿಯಲ್ಲಿರುವ ಕಾಯ್ದೆಯಲ್ಲಿ ರೈತರ ಜಮೀನಿಗೆ ಮಾರ್ಗಸೂಚಿ ಬೆಲೆಗಿಂತ ನಾಲ್ಕು ಪಟ್ಟು ಹೆಚ್ಚು ಪರಿಹಾರ ನೀಡಬೇಕು. ಹೆಚ್ಚಿನ ರೈತರು ಇದಕ್ಕೆ ಸಮ್ಮತಿ ಸೂಚಿಸದೇ ಇದ್ದಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂಬ ನಿಯಮಗಳಿವೆ. ಹೊಸ ನಿಯಮ ಬಂದರೆ ಸರ್ಕಾರ ಮಾರ್ಗಸೂಚಿ ಬೆಲೆಗೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದಲ್ಲದೆ ಬೇಕಾದ ರೀತಿಯಲ್ಲಿ ಭೂ ಸ್ವಾಧೀನ ಮಾಡಿಕೊಳ್ಳಬಹುದಾಗಿದೆ ಎಂದು ಆರೋಪಿಸಿದರು.

ಈ ವೇಳೆ ಜಿಲ್ಲಾ ರೈತ ಸಂಘದ ಗೌರವ ಅಧ್ಯಕ್ಷ ತಿಮ್ಮೇಗೌಡ, ತಾಲೂಕು ಅಧ್ಯಕ್ಷ ಎಚ್‌.ಸಿ.ಕೃಷ್ಣಪ್ಪ, ಗೌರವ ಅಧ್ಯಕ್ಷ ಕುಮಾರಸ್ವಾಮಿ, ಕಾರ್ಯಾಧ್ಯಕ್ಷ ಎಚ್‌.ನಾಗೇಶ್‌, ಉಪಾಧ್ಯಕ್ಷರಾದ ವೆಂಕಟಪ್ಪ, ಸಿದ್ದಪ್ಪಾಜಿ, ಎಚ್‌.ಪಿ.ಪ್ರಕಾಶ್‌, ತಮ್ಮಣ್ಣ ಹಾಜರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.