‘ಎಲ್ಲರೂ ಓಟ್ ಮಾಡಿ ಆದರೆ ಹೊಸ ಪ್ರಧಾನಿಯನ್ನು ಆರಿಸಿ!’
Team Udayavani, Mar 13, 2019, 1:26 PM IST
ಲಕ್ನೋ: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಫೈನಲ್ ಮಾಡಲು ತಲೆಕೆಡಿಸಿಕೊಳ್ಳುತ್ತಿವೆ. ಅಭ್ಯರ್ಥಿಗಳು ಫಿಕ್ಸ್ ಆದ ಮೇಲೆ ಮತದಾರರನ್ನು ಮತದಾನ ಕೇಂದ್ರದತ್ತ ಬರುವಂತೆ ಮಾಡುವುದು ರಾಜಕೀಯ ಪಕ್ಷಗಳಿಗೆ ಮತ್ತು ಚುನಾವಣಾ ಆಯೋಗಕ್ಕೆ ದೊಡ್ಡ ತಲೆನೋವಿನ ಕೆಲಸವೇ ಸರಿ. ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ನಗರ ಪ್ರದೇಶದಲ್ಲೇ ತಮ್ಮ ಹಕ್ಕನ್ನು ಚಲಾಯಿಸಲು ಜನರು ನಿರಾಸಕ್ತಿ ತೋರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಜಾಸ್ತಿಯಾಗುತ್ತಿದೆ.
ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಒಂದನ್ನು ಮಾಡುವ ಮೂಲಕ ದೇಶದ ಪ್ರಮುಖ ರಾಜಕೀಯ ನಾಯಕರನ್ನು ಉದ್ದೇಶಿಸಿ ‘ಮುಂಬರುವ ಚುನಾವಣೆಯಲ್ಲಿ ಹೆಚ್ಚೆಚ್ಚು ಮತದಾರರು ಮತಗಟ್ಟೆಗೆ ಬರುವಂತೆ ಮಾಡುವಲ್ಲಿ ನಿಮ್ಮ ಪಾತ್ರ ಬಹಳ ಮುಖ್ಯ’ ಎಂದು ಬರೆದಿದ್ದರು ಮತ್ತು ತಮ್ಮ ಈ ಟ್ವೀಟ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್, ಬಿ.ಎಸ್.ಪಿ. ವರಿಷ್ಠೆ ಮಾಯಾವತಿ, ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ ಮುಂತಾದವರನ್ನು ಟ್ಯಾಗ್ ಮಾಡಿದ್ದರು.
ಪ್ರಧಾನಿ ಮೋದಿ ಅವರ ಈ ಟ್ವೀಟ್ ಗೆ ಸಮಾಜವಾದಿ ಪಕ್ಷದ ನಾಯಕ ಮತ್ತು ಮಾಜೀ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಅವರು ವ್ಯಂಗಭರಿತ ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರಧಾನಿಯವರು ದೇಶದಲ್ಲಿ ಮಹಾಪರಿವರ್ತನೆಯನ್ನು ತರಲು ಮಹಾಘಟಬಂಧನಕ್ಕೂ ಒಂದು ಆಹ್ವಾನವನ್ನು ನೀಡಿರುವುದು ಸಂತೋಷದ ವಿಷಯವೇ. ಹಾಗಾಗಿ ನಾನು ಈ ಮೂಲಕ ಕೇಳಿಕೊಳ್ಳುವುದೇನೆಂದರೆ, ಎಲ್ಲರೂ ಮತ ಚಲಾಯಿಸಿ ಮತ್ತು ಆ ಮೂಲಕ ಹೊಸ ಪ್ರಧಾನಮಂತ್ರಿಯನ್ನು ಆರಿಸಿ’ ಎಂದು ವ್ಯಂಗ್ಯಭರಿತ ಟ್ವೀಟ್ ಮಾಡಿದ್ದಾರೆ.
दिल ख़ुश हुआ कि प्रधान मंत्री जी भी #MahaGathbandhan से #MahaParivartan की अपील कर रहे हैं। मैं भी सभी भारतीय नागरिकों से अनुरोध करता हूँ कि ज़्यादा से ज़्यादा संख्या में मतदान करें और नया प्रधान मंत्री चुनें। https://t.co/8BsWOdClud
— Akhilesh Yadav (@yadavakhilesh) March 13, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ