ಜಿಲ್ಲಾದ್ಯಂತ 30 ಸಾವಿರ ವಿಶೇಷ ಮತದಾರರು: ಡಿಸಿ


Team Udayavani, Mar 16, 2019, 10:29 AM IST

cta-1.jpg

ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ಪ್ರತಿಯೊಬ್ಬರು ಹಬ್ಬದ ರೀತಿಯಲ್ಲಿ ಭಾಗವಹಿಸಿ ತಮ್ಮ ಹಕ್ಕನ್ನು ಚಲಾಯಿಸಿ ಭವ್ಯ ಭಾರತ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

ನಗರದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಅಂಗವಿಕಲರು ಮತ್ತು ವಿಶೇಷ ಮತದಾರರಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಮತ್ತು ವಿದ್ಯುನ್ಮಾನ ಮತಯಂತ್ರ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
 
ಸಾಮನ್ಯ ಜನರು ಚುನಾವಣೆಯಲ್ಲಿ ಯಾವುದೇ ತೊಂದರೆ ಇಲ್ಲದೆ ಭಾಗವಹಿಸಬೇಕು. ಜಿಲ್ಲಾದ್ಯಂತ 30 ಸಾವಿರ ವಿಶೇಷ ಮತದಾರರಿದ್ದು ಅದರಲ್ಲಿ 15 ಸಾವಿರ ಜನರನ್ನು ಗುರುತಿಸಿ ಮತದಾನಕ್ಕೆ ಒಳಪಡಿಸಿದ್ದೇವೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನದಲ್ಲಿ ಭಾಗವಹಿಸಬೇಕು. ಬೇರೆಯವರ ಸಹಕಾರವಿಲ್ಲದೆ ಮತದಾನ ಮಾಡಬೇಕು. ಅದಕ್ಕಾಗಿ ಕೇಲವು ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.
 
ಅಂಗವಿಲಕರು ಇದ್ದು ಅಂತವರಿಗೆ ಮಾಹಿತಿ ನೀಡಿದರೆ ಅವರಿಗೆ ಮತದಾನ ಮಾಡಲು ವಾಹನಗಳ ವ್ಯವಸ್ಥೆ ಮಾಡಲಾಗುವುದು. ಚುನಾವಣಾ ಆಯೋಗಕ್ಕೆ ವಾಹನಗಳ ವ್ಯವಸ್ಥೆ ಮಾಡಲು ಪತ್ರ ಬರೆಯಲಾಗಿದೆ. ಆಶಾ ಕಾರ್ಯಕರ್ತರನ್ನು ಬಳಸಿಕೊಳ್ಳಲು ಯೋಚನೆ ಮಾಡುತ್ತಿದ್ದೇವೆ. ಕಣ್ಣಿನ ತೊಂದರೆ ಇರುವವರಿಗೆ ಆದಷ್ಟು ಸಹಾಯ ಮಾಡಲಾಗುತ್ತದೆ. ಗ್ರಾಮೀಣ ಭಾಗದ ಎಲ್ಲ ಜನರು ಮತದಾನ ಮಾಡಬೇಕು. ಕಳೆದ ಬಾರಿಗಿಂತ ಹೆಚ್ಚು ಮತ ಪ್ರಮಾಣ ಹೆಚ್ಚಿಸಬೇಕು. ಮತದಾನ ಪ್ರತಿಯೊಬ್ಬರ ಹಕ್ಕು
ಅದನ್ನು ಚಲಾಯಿಸಬೇಕು. ಅಂಗವಿಕಲರಿಗೆ ಬೇಕಾಗುವ ವ್ಯವಸ್ಥೆ ಮಾಡಲು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಜಿಪಂ ಸಿಇಒ ಸಿ. ಸತ್ಯಭಾಮ ಮಾತನಾಡಿ, 2011ರ ಜನಗಣತಿ ಪ್ರಕಾರ 30 ಸಾವಿರಗಿಂತ ಹೆಚ್ಚು ವಿಶೇಷ ಮತರಾರರಿದ್ದಾರೆ. ಆದರೆ ಕೇವಲ 15, 436 ಜನರು ಮಾತ್ರ ಮತದಾನ ಪತ್ರದಲ್ಲಿ ಹೆಸರು ನೋಂದಣಿ ಮಾಡಿ ಕೊಂಡಿದ್ದಾರೆ. ಉಳಿದವರನ್ನು ಪತ್ತೆ ಮಾಡಲಾಗುತ್ತಿದೆ ಎಂದರು. 

ಅಂಗವಿಕಲ ಇಲಾಖೆ, ಗ್ರಾಮ ಪಂಚಾಯತ್‌ ಸೇರಿದಂತೆ ಮತ್ತಿತರರು ತಮ್ಮ ವ್ಯಾಪ್ತಿಯಲ್ಲಿ ಬರುವಂತ ಅಂಗವಿಕಲರನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕು. ಬುದ್ಧಿಮಾಂದ್ಯರನ್ನು ಸಹ ಮತದಾನಕ್ಕೆ ಒಳಪಡಿಸಬೇಕು. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅಂಗವಿಕಲರನ್ನು ಹುಡಕಬೇಕು. ಒಬ್ಬ ಅಂಗವಿಕಲನು ಸಹ ಮತದಾನದಿಂದ ಹೊರ ಉಳಿಯಬಾರದು ಎಂಬ ಮೂಲ ಉದ್ದೇಶ ಚುನಾವಣಾ ಆಯೋಗದ ಧ್ಯೇಯವಾಗಿದೆ ಎಂದು. ಸಹಾಯಕರು ಸಹ ಒಂದ ಪಕ್ಷದ ಪರವಾಗಿ ಮತ ಹಾಕಲು ಪ್ರಚೋದನೆ ಮಾಡಬಾರದು.

ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ಚುನಾವಣೆ ಸಮಯ ಹತ್ತಿರವಿದ್ದು, ಬಿಟ್ಟು ಹೋಗಿರುವವರನ್ನು
ಮತದಾರರ ಪಟ್ಟಿಯಲ್ಲಿ ಆದಷ್ಟು ಬೇಗ ಸೇರಿಸಲು ಶ್ರಮ ವಹಿಸಬೇಕು. ಪ್ರಜಾಪ್ರಭುತ್ವದಲ್ಲಿ ಅಂಗವಿಕಲರಿಗೆ ಹೆಚ್ಚಿನ ವ್ಯವಸ್ಥೆ ಮಾಡಿ ಮುನ್ನಲೆಗೆ ತರುವ ಕೆಲಸ ಮಾಡಲಾಗುತ್ತಿದೆ. ಹಿರಿಯ ನಾಗರಿಕರು ಮತ ಪರಿಶೀಲಿಸಿಕೊಳ್ಳಬೇಕು. 1950 ಉಚಿತ ಸಹಾಯವಾಣಿ ಮೂಲಕ ಮಾಹಿತಿ ಪಡೆಯಬಹುದು ಎಂದರು.  ಜಿಲ್ಲಾ ಅಂಗವಿಕಲರ ಇಲಾಖೆಯ ಮತ್ತು ಸ್ವೀಪ್‌ ಸಮಿತಿ ನೋಡಲ್‌ ಅಧಿ ಕಾರಿ ಜೆ. ವೈಶಾಲಿ, ತಾಪಂ ಇಒ ಕೃಷ್ಣನಾಯ್ಕ ಇದ್ದರು.  

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.