ರಾಜಕಾರಣಿಗಳ ವಿರೋಧಿ ಹೇಳಿಕೆ: ವಾಸು ಮಲ್ಪೆಗೆ ಪೊಲೀಸರ ಎಚ್ಚರಿಕೆ
Team Udayavani, Mar 18, 2019, 5:13 AM IST
ಮಲ್ಪೆ: ಸಾಮಾಜಿಕ ಜಾಲತಾಣದಲ್ಲಿ “ವೈರಲ್ ಸ್ಟಾರ್’ ಎಂದು ಪ್ರಸಿದ್ಧಿ ಪಡೆದಿರುವ ವಾಸು ಮಲ್ಪೆ ಅವರನ್ನು ರಾಜಕೀಯ ಪಕ್ಷವೊಂದರ ನಾಯಕರ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ರವಿವಾರ ಸೆನ್ ಅಪರಾಧ ಪೊಲೀಸರು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ.
ರಾಜಕೀಯ ಪ್ರೇರಿತ ಮಾತುಗಳು, ಒಂದು ಪಕ್ಷದ ವಿರುದ್ಧ ತೆಗಳುವುದು, ರಾಜಕೀಯ ಪಕ್ಷ ಒಂದರ ನಾಯಕರ ಬಗ್ಗೆ ಕೀಳಾಗಿ ಮಾತನಾಡುವ, ಅಪಹಾಸ್ಯ ಮಾಡುವ ಇವರ ವಿಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ವಾಸು ಅವರ ಬಳಿ ಮೊಬೈಲ್ ಇಲ್ಲ, ಮಲ್ಪೆ ಪರಿಸರದಲ್ಲಿ ತಿರುಗಾಡುವ ಈ ವ್ಯಕ್ತಿಗೆ ಅಪರಿಚಿತರು ಹಣ, ಮದ್ಯದ ಆಸೆ ತೋರಿಸಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಾರೆ.
ಚುನಾವಣೆ ಸಂಹಿತೆ ಜಾರಿ ಯಲ್ಲಿರುವ ಸಮಯದಲ್ಲಿ, ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶದಿಂದ ವಾಸು ಅವರನ್ನು ಕರೆತಂದು ಎಚ್ಚರಿಕೆ ನೀಡಿ ಕಳಿಸಿದ್ದೇವೆ. ಮುಂದಿನ ದಿನಗಳಲ್ಲಿ ವಾಸು ಅವರ ವಿಡಿಯೋ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೆನ್ ಅಪರಾಧ ಪೊಲೀಸರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ