ಮೈಸೂರು ರಣತಂತ್ರ ರೂಪಿಸಲು ಸಿದ್ದು ದಿಢೀರ್‌ ಸಭೆ

Team Udayavani, Mar 18, 2019, 7:15 AM IST

m1-myso-si.jpg

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಹಠಕ್ಕೆ ಬಿದ್ದು ಕೈ ಪಾಲು ಮಾಡಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿ ಪಕ್ಷದ ಗೆಲುವಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಮೈಸೂರಿನ ತಮ್ಮ ನಿವಾಸದಲ್ಲಿ ನಗರದ ಸ್ಥಳೀಯ ಮುಖಂಡರ ದಿಢೀರ್‌ ಸಭೆ ನಡೆಸಿದರು.

ಎರಡು ದಿನಗಳ ಹಿಂದಷ್ಟೇ ಹುಣಸೂರು, ಪಿರಿಯಾಪಟ್ಟಣ ಕ್ಷೇತ್ರಗಳ ಮಾಜಿ ಶಾಸಕರ ಜೊತೆ ಸಭೆ ನಡೆಸಿದ್ದ ಸಿದ್ದರಾಮಯ್ಯ ಅವರು ಭಾನುವಾರ, ಮೈಸೂರು ನಗರದ ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್‌, ವಾಸು ಅವರೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಸಂಭಾವ್ಯ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಹಾಜರಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸುತ್ತಿದ್ದೇವೆ. ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಏನು ಮಾಡಬೇಕು ಎಂಬುದರ ಚರ್ಚೆ ನಡೆಸುತ್ತೇವೆ ಎಂದ ಅವರು, ಸಚಿವ ಸಾ.ರಾ.ಮಹೇಶ್‌ ಅವರು ಮೈತ್ರಿ ಪಕ್ಷಗಳು ಹೊಂದಾಣಿಕೆಯಿಂದ ಹೋಗಬೇಕು ಎಂಬ ಅರ್ಥದಲ್ಲಿ ಮಾತನಾಡಿರಬೇಕು. ಬಹುಶಃ ಆ ಅರ್ಥ ಬಿಟ್ಟು ಬೇರೇನೂ ಇಲ್ಲ ಎಂದು ಸಮರ್ಥಿಸಿಕೊಂಡರು.

ಸಂಭಾವ್ಯ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಮಾತನಾಡಿ, ಮದುವೆಯಾದ ಹೊಸದರಲ್ಲಿ ಗಂಡು-ಹೆಣ್ಣಿನ ನಡುವೆ ಶಾಸ್ತ್ರ, ಸಂಪ್ರದಾಯಗಳಲ್ಲಿ ಭಿನ್ನಾಭಿಪ್ರಾಯ ಬರುತ್ತೆ. ಹಾಗಂತ ಅವರು ಸಂಸಾರ ಮಾಡದೇ ಇರೋಕೆ ಆಗುತ್ತಾ.

ಇದು ಸಹ ಹಾಗೆಯೇ, ಅವರು ಎಲ್ಲಿ ಅಭ್ಯರ್ಥಿ ಹಾಕಿರುತ್ತಾರೋ ಅಲ್ಲಿ ನಮ್ಮ ಸಹಕಾರ ಬೇಕು, ಹಾಗೆಯೇ ನಮ್ಮ ಪಕ್ಷದ ಅಭ್ಯರ್ಥಿ ಇರುವ ಕಡೆ ಅವರು ಸಂಪೂರ್ಣ ಸಹಕಾರ ಕೊಡಬೇಕಾಗುತ್ತದೆ ಎಂದು ಸಚಿವ ಸಾ.ರಾ.ಮಹೇಶ್‌ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಎರಡೂ ಪಕ್ಷಗಳೂ ಪ್ರಬಲವಾಗಿರುವುದೇ ಈ ರೀತಿಯ ಮಾತುಗಳಿಗೆ ಕಾರಣ,

ಎರಡೂ ಪಕ್ಷದ ನಾಯಕರು ಕುಳಿತು ಮಾತುಕತೆ ನಡೆಸಿ ಇಂಥದಕ್ಕೆಲ್ಲ ಇತಿಶ್ರೀ ಹಾಡುತ್ತಾರೆ ಎಂದರು. ಚುನಾವಣೆಗೆ ತಾವು ಈಗಾಗಲೇ ಸಕಲ ಸಿದ್ಧತೆ ನಡೆಸಿದ್ದು, 19ರಂದು ಅಭ್ಯರ್ಥಿ ಪಟ್ಟಿ ಅಂತಿಮವಾಗುವ ನಿರೀಕ್ಷೆ ಇದೆ ಎಂದರು. ಮಾಜಿ ಶಾಸಕ ವಾಸು ಮಾತನಾಡಿ, ಕಾಂಗ್ರೆಸ್‌ ಪಕ್ಷದಲ್ಲಿ ನಾನು ಈ ಭಾಗದ ಹಿರಿಯ ನಾಯಕ, ಹೀಗಾಗಿ ಈಗಲೂ ನಾನು ಟಿಕೆಟ್‌ ನೀರಿಕ್ಷೆಯಲ್ಲಿ ಇದ್ದೀನಿ.

ಕೊನೆಯವರೆಗೂ ಕೂಡ ಟಿಕೆಟ್‌ಗಾಗಿ ಕಾಯುತ್ತೇನೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಬಂದ ಏಳು ಮಂದಿಗೆ ಟಿಕೆಟ್‌ ನೀಡಲಾಗಿತ್ತು. ಈವರೆಗೂ ಎ.ಮಂಜು ಕಾಂಗ್ರೆಸ್‌ನಲ್ಲಿದ್ದಾರೆ, ನಾಳೆ ಅವರಿಗೆ ಬಿಜೆಪಿ ಟಿಕೆಟ್‌ ಕೊಡಬಹುದು. ಹೀಗಾಗಿ ಹೊರಗಿನಿಂದ ಬಂದವರಿಗೆ ಟಿಕೆಟ್‌ ಎನ್ನುವ ವಿಚಾರ ಇಲ್ಲಿ ಪ್ರಸ್ತುತವಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.