ಜಿಲ್ಲಾ ಜನರ ಸಮಸ್ಯೆಗಳಿಗೆ ಸ್ಪಂದಿಸುವೆ 


Team Udayavani, Mar 22, 2019, 7:35 AM IST

jilla.jpg

ಶ್ರೀರಂಗಪಟ್ಟಣ: ರಾಜಕೀಯ ಅನುಭವ ಇಲ್ಲದಿದ್ದರೂ ಜನರ ಆರ್ಶೀವಾದದಿಂದ ಮಂಡ್ಯ ಜಿಲ್ಲೆಗಾಗಿ ಶ್ರಮಿಸುತ್ತೇನೆ ಎಂದು ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೇಳಿದರು. 

ತಾಲೂಕಿನ ಪಂಪ್‌ಹೌಸ್‌ ಬಳಿಯ ಕೃಷ್ಣ ಕನ್ವೆಷನ್‌ ಹಾಲ್‌ನಲ್ಲಿ  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೆಳಗೊಳ ಹೋಬಳಿ ಮಟ್ಟದ ಜೆಡಿಎಸ್‌ ಕಾರ್ಯಕರ್ತರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ತಾತ ದೇವೇಗೌಡರು ಹಾಗೂ ತಂದೆ ಕುಮಾರಸ್ವಾಮಿ ಅವರಿಂದ ರಾಜಕೀಯ ಅನುಭವ ಪಡೆಯುತ್ತಿದ್ದೇನೆ.

ಜೊತೆಗೆ ಜನರ ಕಷ್ಟಗಳಲ್ಲಿ ನಾನು ಈಗಾಗಲೇ ಭಾಗಿಯಾಗುತ್ತಿದ್ದೇನೆ. ಮಂಡ್ಯ ಜಿಲ್ಲೆಯ ಜನರ ಪ್ರೀತಿ ಆಶೀರ್ವಾದಗಳೇ ನನ್ನ ರಾಜಕೀಯ ಏಳಿಗೆಗೆ ಪೂರಕವಾಗಿದ್ದು, ಜನರ ವಿಶ್ವಾಸ ಗಳಿಸಲು ಜಿಲ್ಲೆಯ ಎಲ್ಲಾ ಭಾಗಗಳಿಗೂ ತೆರಳುತ್ತಿದ್ದೇನೆ. ಅವರ ಪ್ರೀತಿ ವಿಶ್ವಾಸದಿಂದ ಋಣ ತೀರಿಸಲು ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು.
 
ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಶ್ರೀರಂಗಪಟ್ಟಣ ಸೇರಿದಂತೆ ಜಿಲ್ಲೆಯಲ್ಲಿ ಅಪಾರವಾಗಿ ಅಭಿವೃದ್ಧಿಗೊಳಿಸಲು ಮುಖ್ಯಮಂತ್ರಿಗಳು ಸಹಕಾರ ನೀಡುತ್ತಿದ್ದಾರೆ. ಇಲ್ಲಿನ ಜನರ ಅಭಿಪ್ರಾಯದಂತೆ ಇಲ್ಲಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ಅವರ ಬೆಂಬಲಕ್ಕೆ ನಾವೂ ಕೈಜೋಡಿಸುವ ಕೆಲಸ ಮಾಡಬೇಕಿದೆ. ಕ್ಷೇತ್ರದಲ್ಲಿನ ಮತದಾರರು ನಿಖಿಲ್‌ ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ಚುನಾವಣೆಯಲ್ಲಿ ಜಯ ಗಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜೆಡಿಎಸ್‌ ತಾಲೂಕು ಅಧ್ಯಕ್ಷ ಪೈ.ಮುಕುಂದ, ಜಿಪಂ ಸದಸ್ಯೆ ಸವಿತಾ, ತಾಪಂ ಅಧ್ಯಕ್ಷೆ ಮಂಜುಳಾ, ತಾಪಂ ಸದಸ್ಯರಾದ ಸರಸ್ವತಿ, ಕೋಮಲಾ, ಮುಖಂಡರಾದ ಬಿ.ಎಂ.ಸ್ವಾಮಿಗೌಡ, ಸಾಮಿಲ್‌ ಸ್ವಾಮಣ್ಣ, ಸಂತೋಷ್‌ ಸೇರಿದಂತೆ ಬೆಳಗೊಳ ಹೋಬಳಿಯ ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಜೆಡಿಎಸ್‌  ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.